
ಬಾಗಲಕೋಟೆ, 03 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಹುನಗುಂದ ಶಾಸಕ ವಿಜಯಾನಂದ ಕಾಶೆಪ್ಪನವರ್ ಪ್ರಚಾರ ನಡೆಸಿದರು.
ಈ ವೇಳೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಯತ್ನಾಳ್ ಯಾವ ಪಕ್ಷದ ನಾಯಕನಾಗಿ ಪ್ರಚಾರಕ್ಕೆ ಬರುತ್ತಾರೆ ಎಂದು ಪ್ರಶ್ನಿಸಿದ ಕಾಶೆಪ್ಪನವರ್, ಅವರು ಪ್ರಚಾರದಲ್ಲಿ ಭಾಗವಹಿಸಿರುವ ಕುರಿತು ಬಿಜೆಪಿ ಹಿರಿಯ ನಾಯಕರು ಯಡಿಯೂರಪ್ಪ ಹಾಗೂ ವಿಜಯೇಂದ್ರ ಸೇರಿದಂತೆ ಪಕ್ಷದ ಮುಖಂಡರು ಜನರಿಗೆ ಉತ್ತರ ನೀಡಬೇಕು ಎಂದು ಹೇಳಿದರು.
ಅಲ್ಪಸಂಖ್ಯಾತರು ಮತ್ತು ದಲಿತ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವುದಾಗಿ ಆರೋಪಿಸಿ, ಯತ್ನಾಳ್ ಅವರ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಹಿಂದುತ್ವದ ಹೆಸರಿನಲ್ಲಿ ಮಾತನಾಡುವವರು ಸಮಾಜದಲ್ಲಿ ಭಿನ್ನಾಭಿಪ್ರಾಯ ಹುಟ್ಟಿಸುವುದನ್ನು ನಿಲ್ಲಿಸಬೇಕು ಎಂದು ಕಾಶೆಪ್ಪನವರ್ ಹೇಳಿದರು.
ಈ ದೇಶವು ಸರ್ವಜನಾಂಗದ ಶಾಂತಿಯ ತೋಟವಾಗಿದ್ದು ಎಲ್ಲರೂ ಸಹಬಾಳ್ವೆಯಿಂದ ಬದುಕಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಹಿಂದೂಸ್ತಾನ್ ಸಮಾಚಾರ್ / jyothi deshpande