ಅಲ್ಪ ಸಂಖ್ಯಾತರ ಅಭಿವೃದ್ಧಿಗೆ ಶ್ರಮಿಸಿದ ಕೀರ್ತಿ ಕಾಂಗ್ರೆಸ್ಗೆ ಸಲ್ಲುತ್ತದೆ : ಅಶೋಕ ಮಂದಾಲಿ
ಗದಗ, 03 ಏಪ್ರಿಲ್ (ಹಿ.ಸ.) : ಆ್ಯಂಕರ್ : ಅಲ್ಪ ಸಂಖ್ಯಾತರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಒಟ್ಟು 7.05 ಕೋಟಿ ಜನಸಂಖ್ಯೆಯಲ್ಲಿ ಶೇ. 12.92ರಷ್ಟು ಮುಸ್ಲಿಮರು, ಶೇ 1.87ರಷ್ಟು ಕ್ರಿಶ್ಚಿಯನ್ನರು, ಶೇ 0.72ರಷ್ಟು ಜೈನರು, ಶೇ. 0.16ರಷ್ಟು ಬೌದ್ಧರು, ಶೇ. 0.0ರಷ್ಟು ಸಿಖ
ಫೋಟೋ


ಗದಗ, 03 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಅಲ್ಪ ಸಂಖ್ಯಾತರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಕಾಂಗ್ರೆಸ್ ಸರ್ಕಾರ ಕರ್ನಾಟಕದ ಒಟ್ಟು 7.05 ಕೋಟಿ ಜನಸಂಖ್ಯೆಯಲ್ಲಿ ಶೇ. 12.92ರಷ್ಟು ಮುಸ್ಲಿಮರು, ಶೇ 1.87ರಷ್ಟು ಕ್ರಿಶ್ಚಿಯನ್ನರು, ಶೇ 0.72ರಷ್ಟು ಜೈನರು, ಶೇ. 0.16ರಷ್ಟು ಬೌದ್ಧರು, ಶೇ. 0.0ರಷ್ಟು ಸಿಖ್ರು ವಾಸವಾಗಿದ್ದು ಅವರ ಅಭಿವೃದ್ಧಿಗಾಗಿ ಕಾಂಗ್ರೆಸ್ ಸರ್ಕಾರ ಶ್ರಮಿಸುತ್ತಿದೆ ಎಂದು ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ಗದಗ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಅಶೋಕ ಮಂದಾಲಿ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಅಲ್ಪಸಂಖ್ಯಾತರನ್ನು ಮೂಲೆಗುಂಪು ಮಾಡಿ ಅಧಿಕಾರ ನಡೆಸಿದ ಬಿಜೆಪಿ ಸರ್ಕಾರ ತನ್ನ ಅಧಿಕಾರವಧಿಯಲ್ಲಿ ಜೈನ, ಬೌದ್ಧ ಮತ್ತು ಸಿಖ್ ಸಮುದಾಯಗಳ ಅಭಿವೃದ್ಧಿಗಾಗಿ ನೀಡುತ್ತಿದ್ದ ಅನುದಾನ 13ರಿಂದ 14 ಕೋಟಿ ರೂ. ಮಾತ್ರ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನೀಡಿದ ಅನುದಾನಕ್ಕಿಂತ 8 ಕೋಟಿ ಹೆಚ್ಚಿನ ಅನುದಾನ ನೀಡಿದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಎಲ್ಲರೂ ಸಮಾನರು ಎನ್ನುವ ವಾಕ್ಯವನ್ನು ಮತ್ತೆ ಎತ್ತಿ ಹಿಡಿದಿದೆ.

2017-18ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಸಮುದಾಯಗಳ ಅಭಿವೃದ್ಧಿಗೆಂದು ಬರೊಬ್ಬರಿ 2,200 ಕೋಟಿ ರೂಪಾಯಿ ಮೀಸಲಿಡಲಾಗಿತ್ತು. ನಂತರ ಅಧಿಕಾರಕ್ಕೆ ಬಂದ ಮೂರು ವರ್ಷ ಆಡಳಿತ ನೀಡಿದ ಬಿಜೆಪಿ ಸರ್ಕಾರದ ಬಸವರಾಜ ಬೊಮ್ಮಾಯಿ ಅವರು 2022-23ರಲ್ಲಿ ಆಯವ್ಯಯದಲ್ಲಿ ಈ ಅನುದಾನವನ್ನು 1.621 ಕೋಟಿ ಇಳಿಸಿದ್ದರು.

2025ರಲ್ಲಿ 3ತಿದ್ದುಪಡಿ ಮಾಡಿ 2ಬಿ ವರ್ಗಕ್ಕೆ ಸೇರಿದ ಮುಸ್ಲಿಂ ಸುಮುದಾಯಕ್ಕೆ 2 ಕೋಟಿ ರೂ. ಒಳಗಿನ ಸರ್ಕಾರದ ಕಾಮಗಾರಿಗಳ ಗುತ್ತಿಗೆಯಲ್ಲಿ ಶೇ. 4ರಷ್ಟು ಮೀಸಲಾತಿ ನೀಡಿ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಸಮಪಾಲು ಮತ್ತು ಸರ್ವರಿಗೂ ಸಮಬಾಳು ಎನ್ನುವ ರೀತಿ ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಮಾಡಿದೆ.

2013ರಿಂದ 2026ರ ವರೆಗೆ ಬಜೆಟ್ನಲ್ಲಿ ಅಲ್ಪ ಸಂಖ್ಯಾತರಿಗೆ ನೀಡಿದ ಬಜೆಟ್ ಹಂಚಿಕೆ ಅನುದಾನ: 2013-14ರಲ್ಲಿ 778 ಕೋಟಿ ರೂ., 2014-15ರಲ್ಲಿ 813 ಕೋಟಿ ರೂ., 2015-16ರಲ್ಲಿ 877, 2016-17ರಲ್ಲಿ 1,096, 2017-18ರಲ್ಲಿ 2,200., 2018-19ರಲ್ಲಿ 2,460., 2019-20ರಲ್ಲಿ 1,930., 2020-21ರಲ್ಲಿ 1,534., 2021-22ರಲ್ಲಿ 1,502., 2022-23ರಲ್ಲಿ 1,621., 2023-24ರಲ್ಲಿ 2,350., 2024-25ರಲ್ಲಿ 3,930., 2025-26ರಲ್ಲಿ 4,210., ಹಾಗೂ 2026-27ರಲ್ಲಿ 4,790 ಕೋಟಿ ರೂ. ಅನುದಾನವನ್ನು ಹಂಚಿಕೆ ಮಾಡಲಾಗಿದೆ.

2026ರ ಕರ್ನಾಟಕ ಬಜೆಟ್: ಜೈನ, ಬೌದ್ಧ ಮತ್ತು ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ., ಬೆಂಗಳೂರಿನಲ್ಲಿ 100 ಸಂಖ್ಯಾಬಲದ ಉದ್ಯೋಗಸ್ಥ ಮಹಿಳೆಯರ ನಾಲ್ಕು ವಸತಿ ನಿಲಯ ಪ್ರಾರಂಭಿಸುವುದು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತಿತರ ಸಮಾಜ ಸುಧಾರಕರ ಪುಸ್ತಕಗಳನ್ನು ಉರ್ದು ಭಾಷೆಗೆ ಅನುವಾದಿಸುವುದು, ಬೇಡಿಕೆ ಇರುವ ಜಿಲ್ಲೆಗಳಲ್ಲಿ 150 ಸಂಖ್ಯಾಬಲದ 25 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಆರಂಭಿಸುವುದಾಗದೆ.

2025ರ ಕರ್ನಾಟಕ ಬಜೆಟ್: 500 ಕೋಟಿ ರೂ. ವೆಚ್ಚದಲ್ಲಿ 250 ಮೌಲಾನಾ ಆಜಾದ್ ಇಂಗ್ಲಿಷ್ ಮಾಧ್ಯಮ ಮಾದರಿ ಶಾಲೆಗಳನ್ನು ಹಂತ ಹಂತವಾಗಿ ಕರ್ನಾಟಕ ಪಬ್ಲಿಕ್ ಶಾಲೆಗಳ ಮಾದರಿಯಲ್ಲಿ ಅಭಿವೃದ್ಧಿ ಪಡಿಸುವುದು,

ಹೆಚ್ಚಿನ ವಿದ್ಯಾರ್ಥಿಗಳನ್ನು ಹೊಂದಿರುವ 100 ಉರ್ದು ಮಾಧ್ಯಮ ಶಾಲೆಗಳನ್ನು ಮೌಲಾನಾ ಆಜಾದ್ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಣಕ್ಕೆ 400 ಕೋಟಿ ರೂ. ಅನುದಾನ ಒದಗಿಸಲಾಗಿದೆ. 169 ಅಲ್ಪಸಂಖ್ಯಾತ ವಸತಿ ಶಾಲೆ/ಕಾಲೇಜುಗಳಲ್ಲಿ 25,000 ಮಹಿಳಾ ವಿದ್ಯಾರ್ಥಿಗಳಿಗೆ ಆತ್ಮರಕ್ಷಣಾ ತರಬೇತಿ ನೀಡಲಾಗಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ವೃತ್ತಿ ಮಾರ್ಗದರ್ಶನವನ್ನು ವಸತಿ ನಿಲಯಗಳಲ್ಲಿ ಒದಗಿಸಲಾಗಿದೆ.

ಆರ್ಥಿಕವಾಗಿ ಹಿಂದುಳಿದ ಅಲ್ಪ ಸಂಖ್ಯಾತ ಕುಟುಂಬಗಳಿಗೆ ಸರಳ ವಿವಾಹಗಳಿಗಾಗಿ ಎನ್ ಜಿ ಓಗಳ ಮೂಲಕ 50,000 ರೂಪಾಯಿಗಳ ಆರ್ಥಿಕ ಸಹಾಯ ಒದಗಿಸಲಾಗಿದೆ.

2024ರ ಕರ್ನಾಟಕ ಬಜೆಟ್: ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು, 50 ಸಂಖ್ಯಾ ಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು, 100 ಸಂಖ್ಯಾ ಬಲವುಳ್ಳ 100 ಮೆಟ್ರಿಕ್ ನಂತರದ ಬಾಲಕ / ಬಾಲಕಿಯರ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಲಾಗುವುದು, 100 ಹೊಸ ಮೌಲಾನಾ ಆಜಾದ್ ಶಾಲೆಗಳನ್ನು ತೆರೆಯಲಾಗುವುದು, ಸ್ವಂತ ಕಟ್ಟಡವನ್ನು ಹೊಂದಿರುವ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭಿಸುವುದು, ಸರಕಾರಿ / ಖಾಸಗಿ ಕಾಲೇಜುಗಳಲ್ಲಿ ಬಿ. ಎಸ್ಸಿ. ನರ್ಸಿಂಗ್ / ಜಿ. ಎನ್. ಎಂ ನರ್ಸಿಂಗ್ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶುಲ್ಕ ಭರಿಸುವ ಯೋಜನೆಯನ್ನು ಪುನಃ ಪ್ರಾರಂಭ ಮಾಡುವುದು, ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ಉದ್ಯಮ ಶೀಲರು ಸ್ಥಾಪಿಸುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಹೊಸ ಘಟಕಗಳನ್ನು ಸ್ಥಾಪಿಸಲು ಹಾಗೂ ಅಸ್ತಿತ್ವದಲ್ಲಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳ ಉನ್ನತೀಕರಣಕ್ಕೆ ಕೆಎಸ್ಎಫ್ ಸಿ, ಮೂಲಕ ಪಡೆಯುವ 10 ಕೋಟಿ ರೂ.ವರೆಗಿನ ಸಾಲಕ್ಕೆ ಶೇ.6ರಷ್ಟು ಬಡ್ಡಿ ಸಹಾಯಧನ ನೀಡುವುದು, ರೇಷ್ಮೆ ನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ಅಲ್ಪಸಂಖ್ಯಾತ ಫಲಾನುಭವಿಗಳ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು ರೇಷ್ಮೆ ಇಲಾಖೆ ಮೂಲಕ ತರಬೇತಿ ಮತ್ತು ಕೆ.ಎಂ.ಡಿ.ಸಿ ಮೂಲಕ ಸಾಲ ಸೌಲಭ್ಯಗಳನ್ನು ನೀಡುವುದು, ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ - ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ. ಒದಗಿಸುವುದು ಸೇರಿ ರಾಜ್ಯದಲ್ಲಿನ ವಕ್ಸ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಒದಗಿಸುವುದು ಹಾಗೂ ಭಾರತೀಯ ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿರುವ ವಕ್ಸ್ ಆಸ್ತಿಗಳನ್ನು ಆದ್ಯತೆಯ ಮೇರೆಗೆ ಅಭಿವೃದ್ಧಿಪಡಿಸಲಾಗುವುದು.

ವಕ್ಸ್ ಸಂಸ್ಥೆಯ ಧಾರ್ಮಿಕ ಗುರುಗಳಿಗೆ ಹಾಗೂ ಮುತವಲ್ಲಿಗಳಿಗೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸಲು ತರಬೇತಿ ಕಾರ್ಯಗಾರಗಳನ್ನು ಏರ್ಪಡಿಸಿದೆ. ರಾಜ್ಯದಲ್ಲಿನ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು 20 ಕೋಟಿ ರೂ. ಅನುದಾನ, ಮಂಗಳೂರಿನ ಹಜ್ ಭವನದ ನಿರ್ಮಾಣ ಕಾಮಗಾರಿಗೆ 10 ಕೋಟಿ ರೂ., ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಅನುದಾನ ಹಾಗೂ

ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ ರೂ., ಬೌದ್ಧರ ಪವಿತ್ರ ಗ್ರಂಥಗಳಾದ ತ್ರಿಪಿಟಕಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದ, ರಾಜ್ಯದಲ್ಲಿ ವಾಸಿಸುತ್ತಿರುವ ಸಿಖ್ ಲಿಗಾರ್ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕಾಗಿ 2 ಕೋಟಿ ರೂ. ಅನುದಾನ, ಬೀದರ್ನಲ್ಲಿರುವ ಶ್ರೀ ನಾನಕ್ ಝೀರಾ ಸಾಹೇಬ್ ಗುರುದ್ವಾರದ ಅಭಿವೃದ್ಧಿಗಾಗಿ 1ಕೋಟಿ ರೂ. ಅನುದಾನ ಹಾಗೂ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 393 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಿದೆ.

2023ರ ಕರ್ನಾಟಕ ಬಜೆಟ್: ಅಲ್ಪಸಂಖ್ಯಾತ ಸಂಖ್ಯಾತ ವಿದ್ಯಾರ್ಥಿಗಳ ವ್ಯಾಸಂಗಕ್ಕಾಗಿ ಶೈಕ್ಷಣಿಕ ಸಾಲ ಯೋಜನೆ ಅಡಿಯಲ್ಲಿ 28 ವೃತ್ತಿಪರ ಕೋರ್ಸ್ ವ್ಯಾಸಂಗ ಮಾಡಲು ಶೇ. 2ರ ಬಡ್ಡಿ ದರದಲ್ಲಿ ಸಾಲ, 5 ಕೋಟಿ ವೆಚ್ಚದಲ್ಲಿ ರಾಜ್ಯದ ಎಲ್ಲಾ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಭಾಷಾ ಪ್ರಯೋಗಾಲಯ ಸ್ಥಾಪನೆ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹತ್ತು ತಿಂಗಳು ವಸತಿ ಸಹಿತ ಐಎಎಸ್ ಹಾಗೂ ಕೆಎಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ವಿವಿ ಗಳಲ್ಲಿ ಪದವಿ ಸ್ನಾತಕೋತ್ತರ ವ್ಯಾಸಾಂಗ ಅನುಕೂಲಕ್ಕೆ ಶೂನ್ಯ ಬಡ್ಡಿದರದಲ್ಲಿ 20 ಲಕ್ಷ ರೂ. ವರಗೆ ಸಾಲ, ರಾಮನಗರ, ಬೆಳಗಾವಿ, ದಾವಣಗೆರೆ, ಕಲಬುರಗಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತ ಯುವಜನರಿಗೆ ಕೌಶಲ್ಯ ತರಬೇತಿಯನ್ನು 4 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭ

ಸ್ವಾವಲಂಬಿ ಸಾರಥಿ ಯೋಜನೆ ಅಡಿ ಅಲ್ಪಸಂಖ್ಯಾತ ನಿರುದ್ಯೋಗಿ ಯುವಕರಿಗೆ 4 ಚಕ್ರ ವಾಹನ ಖರೀದಿಸಲು 3 ಲಕ್ಷ ರೂ. ಸಹಾಯಧನ, ಜೈನರ ಪ್ರಮುಖ ಪುಣ್ಯ ಕ್ಷೇತ್ರಗಳ ಅಭಿವೃದ್ಧಿಗೆ 25 ಕೋಟಿ ರೂ. ಅನುದಾನ, ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿ ಗೆ ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ ಸ್ಥಾಪನೆಗೆ 100 ಕೋಟಿ ರೂ., ಅನುದಾನ ಹಾಗೂ ಹಜ್ ಭವನದಲ್ಲಿ ಅಲ್ಪಸಂಖ್ಯಾತ ಯುವಕರಿಗೆ 10 ತಿಂಗಳ ಕಾಲ ವಸತಿ ಸಹಿತ ಐಎಎಸ್ ಹಾಗೂ ಕೆಎಎಸ್ ತರಬೇತಿಗಳನ್ನ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಿಂದ ಪ್ರಾರಂಭಿಸುವುದು ಸೇರಿ ಹಲಸೂರಿನಲ್ಲಿರುವ ಗುರುದ್ವಾರದ ಅಭಿವೃದ್ಧಿಗೆ 25 ಕೋಟಿ ರೂ. ಅನುದಾನ ನೀಡಿದೆ.

2013 ರಿಂದ 2018ವರೆಗೆ ಕಾಂಗ್ರೆಸ್ ಸರ್ಕಾರ ಕೊಡುಗೆ:

ಆರ್ಥಿಕವಾಗಿ ಹಿಂದುಳಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್ ಮತ್ತು ಪಾರ್ಸಿ ಸಮುದಾಯದ ಮಹಿಳೆಯರ ವಿವಾಹಕ್ಕೆ ತಲಾ 50,000 ಆರ್ಥಿಕ ನೆರವು ನೀಡುವ ಯೋಜನೆ ಜಾರಿಗೆ ತರಲಾಗಿತ್ತು. ಹಾಸ್ಟೆಲ್ ಸೌಲಭ್ಯ ಸಿಗದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮಾಸಿಕ ವಸತಿ ಮತ್ತು ಊಟದ ಭತ್ಯೆಯಾಗಿ ಪ್ರತಿ ತಿಂಗಳು 1,500 ರೂ. ನಂತೆ ವರ್ಷಕ್ಕೆ 15,000 ರೂ., ಅಲ್ಪಸಂಖ್ಯಾತರು ಹೆಚ್ಚಿರುವ ಪ್ರದೇಶಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ನೂರಾರು ಮೌಲಾನಾ ಆಜಾದ್ ಇಂಗ್ಲಿಷ್ ಮಾದರಿ ಶಾಲೆಗಳ ಸ್ಥಾಪನೆ, ಅಲ್ಪಸಂಖ್ಯಾತರು ವಾಸಿಸುವ ಪ್ರದೇಶಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು ಮತ್ತು ಸಮುದಾಯ ಭವನಗಳ ನಿರ್ಮಾಣಕ್ಕಾಗಿ ಪ್ರತಿ ವರ್ಷ ವಿಶೇಷ ಅನುದಾನ, ಅಲ್ಪಸಂಖ್ಯಾತ ವಿದ್ಯಾರ್ಥಿಗಳು ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡಲು ನೀಡುವ ಧನಸಹಾಯವನ್ನು 10 ಲಕ್ಷ ರೂ. ದಿಂದ 20 ಲಕ್ಷಕ್ಕೆ ಹೆಚ್ಚಿಸಲಾಗಿತ್ತು. ಅಲ್ಲದೇ, ಮದರಸಾಗಳಲ್ಲಿ ಔಪಚಾರಿಕ ಶಿಕ್ಷಣ (ಗಣಿತ, ವಿಜ್ಞಾನ ಇತ್ಯಾದಿ) ನೀಡಲು ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಅನುದಾನ ಹಾಗೂ ಚರ್ಚ್ಗಳ ನವೀಕರಣ ಮತ್ತು ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ ಪ್ರತಿ ವರ್ಷ ಸುಮಾರು 100 ರಿಂದ 200 ಕೋಟಿ ರೂ. ಅನುದಾನ ಅನುದಾನ ನೀಡಲಾಗಿತ್ತು ಎಂದು ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ಗದಗ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಅಶೋಕ ಮಂದಾಲಿ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande