
ವಿಜಯಪುರ, 03 ಏಪ್ರಿಲ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯ ಬಬಲೇಶ್ವರ ವಿಧಾನಸಭಾ ಕ್ಷೇತ್ರದ ತಿಕೋಟಾ ಪಟ್ಟಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಸುರಿದ ಅಕಾಲಿಕ ಮಳೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಭಾರಿ ಮಳೆಯಿಂದ ದ್ರಾಕ್ಷಿ ಬೆಳೆಗಳಿಗೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿದ್ದು, ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಈ ಪರಿಸ್ಥಿತಿಯಲ್ಲಿ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದರೂ ಆಡಳಿತ ಯಂತ್ರ, ಸಚಿವರು ಹಾಗೂ ಜನಪ್ರತಿನಿಧಿಗಳು ಈ ಭಾಗದತ್ತ ಗಮನ ಹರಿಸುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ.
ಉಪಚುನಾವಣೆಯ ಪ್ರಚಾರದಲ್ಲಿ ತೊಡಗಿರುವ ನಾಯಕರು ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
“ರೈತನೇ ನಮ್ಮ ದೇವರು. ಅವರ ಕಷ್ಟಗಳನ್ನು ಕೇಳಿ ತಕ್ಷಣ ಪರಿಹಾರ ಕ್ರಮ ಕೈಗೊಳ್ಳಬೇಕು” ಎಂದು ರೈತರು ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande