ಸಾರಿಗೆ ನೌಕರರ ಮುಷ್ಕರದ ಎಚ್ಚರಿಕೆ ; ಸರಕಾರದ ವಿರುದ್ಧ ಅಶೋಕ ಕಿಡಿ
ಬೆಂಗಳೂರು, 30 ಏಪ್ರಿಲ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮುಷ್ಕರ ಹಾಗೂ ಪ್ರತಿಭಟನೆಗಳು ಸಾಮಾನ್ಯವಾಗಿವೆ ಎಂದು ಪ್ರತಿ ಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿದ ಅವರು, ಸರ್ಕಾರದ ಆಡಳಿತದ ವಿರುದ
Ashok


ಬೆಂಗಳೂರು, 30 ಏಪ್ರಿಲ್ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮುಷ್ಕರ ಹಾಗೂ ಪ್ರತಿಭಟನೆಗಳು ಸಾಮಾನ್ಯವಾಗಿವೆ ಎಂದು ಪ್ರತಿ ಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿದ ಅವರು, ಸರ್ಕಾರದ ಆಡಳಿತದ ವಿರುದ್ಧ ರಾಜ್ಯವೇ ಅಸಮಾಧಾನಗೊಂಡಿದೆ ಎಂದು ಟೀಕಿಸಿದ್ದಾರೆ.

ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆ ‘ಶಕ್ತಿ’ ಪರಿಣಾಮವಾಗಿ ಸಾರಿಗೆ ಇಲಾಖೆಯ ನೌಕರರು ಮಾನಸಿಕ ಒತ್ತಡ ಅನುಭವಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿ ದುರ್ಬಲಗೊಂಡಿದ್ದು, ನೌಕರರ ಹಿತಾಸಕ್ತಿಗಳನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ‘ತುಘಲಕ್’ ಶೈಲಿಯ ನಿರ್ಧಾರಗಳಿಂದ ಜನತೆ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಶೋಕ ದೂರಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande