ಕನ್ನಡಿಗರ ಆರೋಗ್ಯ ಸುಧಾರಣೆಗೆ ದಿಟ್ಟ ಹೆಜ್ಜೆ ಇಟ್ಟ ಕಾಂಗ್ರೆಸ್ ಸರ್ಕಾರ
ಗದಗ, 30 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ಸರ್ಕಾರ ಕಳೆದ 2.5 ವರ್ಷದಲ್ಲಿ ಕನ್ನಡಿಗರ ಆರೋಗ್ಯ ಸುಧಾರಣೆಗೆ ವಿವಿಧ ಕಾರ್ಯಕ್ರಮಗಳನ್ನು ಜಾರಿ ಮಾಡಿ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುತ್ತಿದೆ ಎಂದು ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ಗದಗ ತಾಲೂಕು ಗ್ಯಾರಂಟಿ ಅನುಷ್ಠಾ
ಫೋಟೋ


ಗದಗ, 30 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ಸರ್ಕಾರ ಕಳೆದ 2.5 ವರ್ಷದಲ್ಲಿ ಕನ್ನಡಿಗರ ಆರೋಗ್ಯ ಸುಧಾರಣೆಗೆ ವಿವಿಧ ಕಾರ್ಯಕ್ರಮಗಳನ್ನು ಜಾರಿ ಮಾಡಿ ಉತ್ತಮ ಆರೋಗ್ಯ ಸೇವೆಯನ್ನು ಒದಗಿಸುತ್ತಿದೆ ಎಂದು ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ಗದಗ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಅಶೋಕ ಮಂದಾಲಿ ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, 2026-27 ಬಜೆಟ್ನಲ್ಲಿ ಆರೋಗ್ಯ ಕ್ಷೇತ್ರಕ್ಕೆ 17.473 ಕೋಟಿ ರೂ. ಮೀಸಲಿಟ್ಟಿದ್ದು ಕನ್ನಡಿಗರ ಆರೋಗ್ಯ ಸುಧಾರಣೆ ಪಣತೊಟ್ಟಿರುವ ಕಾಂಗ್ರೆಸ್ ಸರ್ಕಾರದಿಂದ ಭಾರತದಲ್ಲಿ ತಲಾ ಆರೋಗ್ಯ ವೆಚ್ಚದ ಪ್ರಥಮ 5 ರಾಜ್ಯಗಳಲ್ಲಿ ಕರ್ನಾಟಕವು ಒಂದಾಗಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ದಿಟ್ಟ ಹೆಜ್ಜೆಯಿಂದ 2021ರಲ್ಲಿ ಶೇ. 17ರಷ್ಟಿದ್ದ ಶಿಶುಮರಣ ಪ್ರಮಾಣವು 2023ಕ್ಕೆ ಶೇ.14ಗೆ ಕುಸಿದಿದ್ದು, ಇದರ ಜೊತೆಗೆ ತಾಯಿ ಮರಣ ಪ್ರಮಾಣ ತಡೆಗಟ್ಟಲು 320 ಕೋಟಿ ರೂ. ಅನುದಾನ ಮೀಸಲಿಟ್ಟಿದೆ.

`ಲಕ್ಷ್ಯ' ಕಾರ್ಯಕ್ರಮದಿಂದ ಹೆರಿಗೆ ಕೊಠಡಿಗಳು, ಮಾತೃತ್ವ ಐಸಿಯುಗಳು ಮತ್ತು ಶಸ್ತ್ರಚಿಕಿತ್ಸಾ ಕೊಠಡಿಗಳ ಗುಣಮಟ್ಟವನ್ನು ಸುಧಾರಿಸಲಾಗಿದೆ.

ನವಜಾತ ಶಿಶುಗಳ ಮರಣವನ್ನು ಕಡಿಮೆ ಮಾಡಲು 11 ತಾಯಿ ಎದೆ ಹಾಲಿನ ಸಮಗ್ರ ನಿರ್ವಹಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು 2030ರ ವೇಳೆಗೆ ತಾಯಂದಿರು ಮತ್ತು ಶಿಶು ಮರಣ ಪ್ರಮಾಣವನ್ನು ಒಂದಂಕಿಗೆ ತರಲು ಪಣತೊಟ್ಟಿದೆ ಎಂದು ತಿಳಿಸಿದ್ದಾರೆ.

ತಾಯಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಮಾಣವನ್ನು ತಗ್ಗಿಸಲು ತಾಲ್ಲೂಕು ಮಟ್ಟದ 148 ಆಸ್ಪತ್ರೆಗಳಲ್ಲಿ ದಿನದ 24 ಗಂಟೆಯೂ ಸ್ತ್ರೀರೋಗ, ಅರಿವಳಿಕೆ ಮತ್ತು ಮಕ್ಕಳ ತಜ್ಞರು ಲಭ್ಯ ಇರುವಂತೆ ಮಾಡಲಾಗಿದೆ. ಕನ್ನಡಿಗರ ತುರ್ತು ಆರೋಗ್ಯ ಸೇವೆಯಾದ 108 ಅಂಬುಲೆನ್ಸ್ ಸೇವೆಯನ್ನು ಬಲಪಡಿಸಲು ಖಾಸಗಿ ಸಂಸ್ಥೆ ನಿರ್ವಹಣೆಯ ನಿರ್ಲಕ್ಷಕ್ಕೆ ಬೇಸತ್ತಿದ್ದ ಕನ್ನಡಿಗರಿಗೆ ಸರ್ಕಾರದ ಆರೋಗ್ಯ ಇಲಾಖೆಯಡಿ ನಿರ್ವಹಣೆ ಮಾಡುವಂತೆ ಮಾಡಲಾಗಿದೆ. ದೇಶದ ಜಿಡಿಪಿಗೆ ಶೇ. 9ರಷ್ಟು ಕೊಡುಗೆ ನೀಡುತ್ತಿರುವ ಕರ್ನಾಟಕಕ್ಕೆ ಬಲತುಂಬುವ 1.4 ಬೆಂಗಳೂರಿಗರಿಗೆ ಹೊಸ ಪ್ರತ್ಯೇಕ ಆರೋಗ್ಯ ನೀತಿ ತರಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ.

ಕಾಂಗ್ರೆಸ್ ಸರ್ಕಾರ ಹೀಗಾಗಲೆ ಕಳಪೆ ಔಷಧಿ, ಆಹಾರದಲ್ಲಿ ಕೃತಕ ಬಣ್ಣ ಬಳಕೆ ಬ್ಯಾನ್ ಮಾಡುವುದರ ಜೊತೆಗೆ 185 ಕೋಟಿ ರೂ. ವೆಚ್ಚದಲ್ಲಿ ``ಗೃಹ ಆರೋಗ್ಯ” ಯೋಜನೆಯಡಿ ಮನೆ ಮನೆಗೆ ಅರೋಗ್ಯ ತಪಾಸಣೆ ಮಾಡುತ್ತಿದೆ.

ಮೂರು ಹಂತದಲ್ಲಿ `ಗೃಹ ಆರೋಗ್ಯ' ಯೋಜನೆಯಡಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದ್ದು ಮೊದಲ ಹಂತದಲ್ಲಿ ಆಶಾ ಕಾರ್ಯಕರ್ತೆ, ಸಮುದಾಯ ಆರೋಗ್ಯ ಅಧಿಕಾರಿಗಳಿಂದ ಪ್ರಾಥಮಿಕ ತಪಾಸಣೆ, ಎರಡನೇ ಹಂತದಲ್ಲಿ ತಪಾಸಣೆಯಲ್ಲಿ ಸಮಸ್ಯೆಗೆ ಉಚಿತ ರಕ್ತ ಪರೀಕ್ಷೆಗಳು. ಇಸಿಜಿ ಮತ್ತು ಔಷಧ ವಿತರಣೆ. ಮೂರನೇ ಹಂತದಲ್ಲಿ ಗಂಭೀರ ಕಾಯಿಲೆಗಳು, ಕ್ಯಾನ್ಸರ್ ದೃಢಪಟ್ಟರೆ ಜಿಲ್ಲಾಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಮಾಡಲಾಗುತ್ತದೆ.

ಈ ಕಾರ್ಯಕ್ರಮದಡಿ ಪ್ರತಿಯೊಂದು ತಾಲೂಕು ಆಸ್ಪತ್ರೆ ಮತ್ತು ಉತ್ತಮವಾಗಿ ಕಾರ್ಯನಿರ್ವಹಿಸುವ ಸಮುದಾಯ ಆರೋಗ್ಯ ಕೇಂದ್ರ 24/7 ಸಮಗ್ರ ತುರ್ತು ಸೇವೆ ಮತ್ತು ನವಜಾತ ಶಿಶು ಆರೈಕೆ ಸೇವೆಗಳನ್ನು ಒದಗಿಸುವುದನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದ್ದಾರೆ.

ಬದಲಾಗುತ್ತಿರವ ಜೀವನ ಶೈಲಿ ಮತ್ತು ಕೆಲಸದ ಒತ್ತಡದಿಂದ ಉಂಟಾಗುವ ಆರೋಗ್ಯ ಸಮಸ್ಯೆಯನ್ನು ಪರಿಹರಿಸಲು ಕಾಂಗ್ರೆಸ್ ಸರ್ಕಾರ ಪಣತೊಟ್ಟಿದ್ದು, 2024ರ ಅಕ್ಟೋಬರ್ನಲ್ಲಿ ಮೊದಲ ಬಾರಿಗೆ ಪ್ರಾಯೋಗಿಕವಾಗಿ ಕೋಲಾರ ಜಿಲ್ಲೆಯಲ್ಲಿ ಮನೆ ಬಾಗಿಲಲ್ಲಿಯೇ ವಿವಿಧ ಅನಾರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚಿ ಔಷಧ ವಿತರಿಸುವ ಗೃಹ ಆರೋಗ್ಯ ಯೋಜನೆಯನ್ನು ಈಗ ರಾಜ್ಯದ್ಯಂತ ವಿಸ್ತರಣೆ ಮಾಡಿ 7 ಕೋಟಿ ಕನ್ನಡಿಗರ ಆರೋಗ್ಯ ರಕ್ಷಣೆಗೆ ಪಣತೊಡಲಾಗಿದೆ. ಕಾಂಗ್ರೆಸ್ ಸರ್ಕಾರ ಮುಂದಿನ ಎರಡೂವರೆ ವರ್ಷಗಳಲ್ಲಿ ತಾಯಂದಿರ ಮರಣ ಪ್ರಮಾಣವನ್ನು ಶೇ. 64ರಿಂದ 40 ಕ್ಕೆ ಇಳಿಸುವುದು ಗುರಿ ಹೊಂದಿದೆ.

30 ವರ್ಷ ಮೇಲ್ಪಟ್ಟ ವಯಸ್ಸಿನವರಿಗೆ 14 ಸಾಂಕ್ರಾಮಿಕವಲ್ಲದ ಕಾಯಿಲೆಗಳಿಗೆ ತಪಾಸಣೆ ಮತ್ತು ನಿರ್ವಹಣೆ ಮಾಡುವ ಮೂಲಕ ತೊಡಕುಗಳು ಮತ್ತು ಅಕಾಲಿಕ ಮರಣಗಳನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಲಾಗಿದೆ.

ಆರೋಗ್ಯ ಕ್ಷೇತ್ರದಲ್ಲಿ ಮಹತ್ವವಾದ ನಿರ್ಧಾರಗಳಿಂದ ಕಳಪೆ ಆಹಾರ ಮತ್ತು ಔಷಧಿಗಳ ವಿರುದ್ಧ ಸಮರ ಸಾರಿ 7 ಕೋಟಿ ಕನ್ನಡಿಗರ ಆರೋಗ್ಯ ಸುಧಾರಣೆಗೆ ಕ್ರಮ ವಹಿಸಲಾಗಿದೆ. ಗ್ರಾಮೀಣ ಭಾಗದಲ್ಲಿ ಹೆಚ್ಚಿನ ವೈದ್ಯಕೀಯ ವ್ಯವಸ್ಥೆಯನ್ನು ನೀಡಲು ರಾಜ್ಯದ ಜಿಲ್ಲಾ ಆಸ್ಪತ್ರೆಗಳ ಸೌಲಭ್ಯವನ್ನು ತಾಲೂಕು ಆಸ್ಪತ್ರೆಗಳಲ್ಲಿ ಒದಗಿಸಿ 24/7 ಕಾರ್ಯನಿರ್ವಹಿಸಲು ನಿರ್ಧರಿಸಲಾಗಿದೆ.

ಆರೋಗ್ಯ ಕ್ಷೇತ್ರದಲ್ಲಿ ಖಾಲಿ ಇರುವ 32 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲಾಗುತ್ತಿದ್ದು, ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ವೈದ್ಯರು ಮತ್ತು ನರ್ಸ್ಗಳಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆಗೆ ಕಾಂಗ್ರೆಸ್ ಸರ್ಕಾರ ಅನುಮೋದನೆ ನೀಡಿದೆ. ಬ್ರಾಂಡ್ ಬೆಂಗಳೂರು ಅಡಿಯಲ್ಲಿ 1,800 ಕೋಟಿ ವೆಚ್ಚದಲ್ಲಿ 21 ಅಭಿವೃದ್ಧಿ ಕಾರ್ಯಗಳು ಮತ್ತು ಅಂತಾರಾಷ್ಟ್ರೀಯ ಮಟ್ಟದ ಆರೋಗ್ಯ ವ್ಯವಸ್ಥೆಗೆ 413 ಕೋಟಿ ರೂ. “ಸಮಗ್ರ ಆರೋಗ್ಯ ಯೋಜನೆ” ತರಲಾಗಿದೆ. ಕಾಂಗ್ರೆಸ್ ಸರ್ಕಾರ 2025ರ ಬಜೆಟ್ನಲ್ಲಿ ತಾಯಿ ಮರಣ ಪ್ರಮಾಣ ತಡೆಗಟ್ಟಲು 320 ಕೋಟಿ ರೂ. ಅನುದಾನ ಮೀಸಲಿಡುವುದರ ಜೊತೆಗೆ ದಿಟ್ಟ ಕ್ರಮಗಳನ್ನು ತೆಗೆದುಕೊಂಡ ಪರಿಣಾಮ 2024ರಲ್ಲಿ 483 ಇದ್ದ ತಾಯಂದಿರ ಮರಣ ಸಂಖ್ಯೆಯು 2025ರಲ್ಲಿ 366ಕ್ಕೆ ಇಳಿದಿದ್ದು ಶೇ. 24ರಷ್ಟು ಕಡಿಮೆಯಾಗಿದೆ. 2030ರ ವೇಳೆಗೆ ತಾಯಿ ಮರಣ ಪ್ರಮಾಣವನ್ನು ಪ್ರತಿ ಲಕ್ಷ ಜನನಕ್ಕೆ 70ರ ಒಳಗೆ ಇರುವಂತೆ ನೋಡಿಕೊಳ್ಳುವುದು ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ ಒಂದಾಗಿದ್ದು ಅದನ್ನು ಸಾಧಿಸಿದ ಎಂಟು ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ.

2025 ಜನವರಿಯಲ್ಲಿ 1,133 ಔಷಧ ಮಾದರಿಗಳಲ್ಲಿ ಔಷಧಿಗುಣಮಟ್ಟವನ್ನು ಕಾಯ್ದುಕೊಳ್ಳದ 17 ಲಕ್ಷ ರೂ.ಗಿಂತ ಹೆಚ್ಚು ಮೌಲ್ಯದ 106 ಗುಣಮಟ್ಟವಲ್ಲದ ಔಷಧಿಗಳನ್ನು ಮಾರುಕಟ್ಟೆಯಿಂದ ಹಿಂಪಡೆಯಲಾಗಿದೆ ಮತ್ತು ಉಲ್ಲಂಘನೆ ಮಾಡಿದ 75 ಸಂಸ್ಥೆಗಳ ವಿರುದ್ಧ ನ್ಯಾಯಾಲಯಗಳಲ್ಲಿ ಮೊಕದ್ದಮೆಯನ್ನು ದಾಖಲಿಸಲು ಕಾಂಗ್ರೆಸ್ ಸರ್ಕಾರ ಅನುಮತಿ ನೀಡಿದೆ.

ಕಾಂಗ್ರೆಸ್ ಸರ್ಕಾರ ಜೂನ್ 2024ರಲ್ಲಿ ಜನರು ಸೇವಿಸುವ ಗೋಬಿ ಮಂಚೂರಿ, ಪಾನಿಪುರಿ, ಕಬಾಬ್ ಸೇರಿ ಎಲ್ಲ ರೀತಿಯ ಖಾದ್ಯಗಳಲ್ಲಿ ಕೃತಕ ಬಣ್ಣ ಬಳಸುವುದನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಿ ಜನರ ಆರೋಗ್ಯ ಸುದಾರಣೆಗೆ ದಿಟ್ಟ ಹೆಜ್ಜೆ ಇಟ್ಟಿದೆ. ಗೋಬಿ ಮಂಚೂರಿಯ 171 ಮಾದರಿಗಳನ್ನು ಅಧಿಕಾರಿಗಳು ಸಂಗ್ರಹಿಸಿ ಅವುಗಳಲ್ಲಿ 107 ಅಸುರಕ್ಷಿತ ಕೃತಕ ಬಣ್ಣಗಳಾದ ಟಾಟ್ರ್ರಾಜಿನ್, ಸನ್ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ಗಳನ್ನು ಹೊಂದಿರುವುದು ಕಂಡು ಬಂದಿದೆ, ಮತ್ತು ಕಾಟನ್ ಕ್ಯಾಂಡಿಯ 25 ಮಾದರಿಗಳಲ್ಲಿ 15 ಅಸುರಕ್ಷಿತ ಕೃತಕ ಬಣ್ಣಗಳಾದ ಟಾಟ್ರ್ರಾಜಿನ್ ಸನ್ಸೆಟ್ ಯೆಲ್ಲೋ ಮತ್ತು ರೋಡಮೈನ್ ಬಿ ಹೊಂದಿರುವುದು ಕಂಡುಬಂದಿದೆ. ಬಣ್ಣ ಬಳಸಿ ಮಾಡಿದ ಕಾಟನ್ ಕ್ಯಾಂಡಿಗಳನ್ನು ನಿಷೇಧಿಸಲಾಗಿದೆ. ಕಾಟನ್ ಕ್ಯಾಂಡಿಗೆ ದಟ್ಟ ಮತ್ತು ಆಕರ್ಷಕ ಬಣ್ಣ ಬರಲು ರೋಡಮೈನ್-ಬಿಯನ್ನು ಬಳಸಲಾಗುತ್ತದೆ. ಇದರಲ್ಲಿ ಕ್ಯಾನ್ಸರ್ಗೆ ಕಾರಣವಾಗುವ ಅಂಶವನ್ನು ಹೊಂದಿದೆ. ಬಣ್ಣ ರಹಿತ ಕಾಟನ್ ಕ್ಯಾಂಡಿ ತಯಾರಿಕೆಗೆ ಯಾವುದೆ ನಿರ್ಬಂಧ ಇರುವುದಿಲ್ಲ.

ಆಯುಷ್ಮಾನ್ ಭಾರತ್ ಯೋಜನೆಯಡಿ ಕೇಂದ್ರ ಸರ್ಕಾರ ಶೇ. 60ರಷ್ಟು ಮತ್ತು ರಾಜ್ಯ ಸರ್ಕಾರ ಶೇ. 40ರಷ್ಟು ಅನುದಾನದೊಂದಿಗೆ 115 ಲಕ್ಷ (ಬಿಪಿಎಲ್) ಕುಟುಂಬಗಳ ಪೈಕಿ 62 ಲಕ್ಷ ಕುಟುಂಬಗಳಿಗೆ ವಾರ್ಹಿಕ 5 ಲಕ್ಷ ರೂ. ವರೆಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ನರವೈಜ್ಞಾನಿಕ ಖಾಯಿಲೆಗಳಿಗೆ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದ ಅಡಿಯಲ್ಲಿ ನಿಮ್ಹಾನ್ಸ್ ಸಹಯೋಗದೊಂದಿಗೆ ಒಟ್ಟು 2.61 ಲಕ್ಷ ರೂ. ತಪಾಸಣೆ ಮಾಡಿ 32.630 ನರರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ಗದಗ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಅಶೋಕ ಮಂದಾಲಿ ಅವರು ತಿಳಿಸಿದ್ದಾರೆ.

ರಾಜ್ಯದ ಆರೋಗ್ಯ ಬಲವರ್ಧನೆಗೆ ಕಾಂಗ್ರೆಸ್ ಸರ್ಕಾರದ ಯೋಜನೆಗಳು

ಅಂತಾರಾಷ್ಟ್ರೀಯ ಮಟ್ಟದ ಆರೋಗ್ಯ ವ್ಯವಸ್ಥೆ ಕಲ್ಪಿಸಲು 413 ಕೋಟಿ ರೂ. ಸಮಗ್ರ ಆರೋಗ್ಯ ಯೋಜನೆ.

ರಾಜ್ಯದ 8 ತಾಲ್ಲೂಕು ಆಸ್ಪತ್ರೆ ಹಾಗೂ 2 ಜಿಲ್ಲಾ ಆಸ್ಪತ್ರೆಗಳ ನವೀಕರಣಕ್ಕೆ 650 ಕೋಟಿ ರೂ. ಅನುದಾನ.

ಪುತ್ತೂರು ತಾಲೂಕು ಆಸ್ಪತ್ರೆಯನ್ನು ಮೊಳಕಾಲ್ಮರಿನಲ್ಲಿ 200 ಹಾಸಿಗೆಗಳ ಹೊಸ ಆಸ್ಪತ್ರೆ ಮತ್ತು ವಿರಾಜಪೇಟೆಯಲ್ಲಿ 400 ಹಾಸಿಗೆಗಳ ಆಸ್ಪತ್ರೆಯನ್ನು ಮೇಲ್ದರ್ಜೆಗೊಳಿಸಲು ಘೋಷಣೆ.

ರಾಜ್ಯದಲ್ಲಿ ತಾಯಿ ಮರಣ ಪ್ರಮಾಣ ತಡೆಗಟ್ಟಲು 320 ಕೋಟಿ ರೂ. ಅನುದಾನ ನೀಡಿದ ಕಾಂಗ್ರೆಸ್ ಸರ್ಕಾರ.

ಅನೀಮಿಯಾ ಮುಕ್ತ ರಾಜ್ಯವನ್ನಾಗಿಸಲು 185.74 ಕೋಟಿ ರೂ ವೆಚ್ಚದಲ್ಲಿ ಪೌಷ್ಠಿಕ ಕರ್ನಾಟಕ ಯೋಜನೆ.

280 ಕೋಟಿ ರೂ. ವೆಚ್ಚದಲ್ಲಿ 100 ಹಾಸಿಗೆಗಳ ತಾಲೂಕು ಆಸ್ಪತ್ರೆಗಳನ್ನು ಆನೇಕಲ್. ನೆಲಮಂಗಲ, ಹೊಸಕೋಟೆ, ಶೃಂಗೇರಿ, ಖಾನಾಪುರ, ಶಿರಹಟ್ಟಿ, ಯಳಂದೂರು ತಾಲೂಕುಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಒಟ್ಟು 188 ಹೊಸ ಇಂದಿರಾ ಕ್ಯಾಂಟೀನ್ಗಳನ್ನು ರಾಜ್ಯ ಸರ್ಕಾರ ಪ್ರಾರಂಭಿಸುತ್ತಿದೆ. ಬೆಂಗಳೂರು ವಿಮಾನ ನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಆರಂಭಿಸುವಂತೆ ಟ್ಯಾಕ್ಸಿ ಚಾಲಕರು ಹಾಗೂ ಇತರೆ ಚಾಲಕರ ಬೇಡಿಕೆಗೆ ಎರಡು ಕ್ಯಾಂಟೀನ್ ಆರಂಭಿಸಲಾಗುತ್ತಿದೆ.

ಬಿಜೆಪಿ ಅವಧಿಯಲ್ಲಿ ಆರಂಭವಾದ ನಮ್ಮ ಕ್ಲಿನಿಕ್ಗಳು ಮೂಲಭೂತ ಸೌಲಭ್ಯವಿಲ್ಲದೆ ಸಿಬ್ಬಂದಿಗಳು ಇಲ್ಲದೆ ವೈದ್ಯರಿಲ್ಲದೆ ಸೊರಗುತ್ತಿದ್ದ ಆಸ್ಪತ್ರೆಗಳನ್ನು ಜನರಿಗೆ ಉತ್ತಮ ಸೇವೆ ಒದಗಿಸಲು ಕ್ರಮಕೈಗೊಂಡಿದೆ.

ಗೃಹ ಆರೋಗ್ಯ ಯೋಜನೆಯಿಂದ 7 ಕೋಟಿ ಕನ್ನಡಿಗರಿಗೆ ಮನೆ-ಮನೆ ತೆರಳಿ ಆರೋಗ್ಯ ತಪಾಸಣೆ ಮಾಡಿ ಆರೋಗ್ಯದ ಭಾಗ್ಯ ತಂದ ಕಾಂಗ್ರೆಸ್ ಸರ್ಕಾರ.

ಕಾಂಗ್ರೆಸ್ ಸರ್ಕಾರದಿಂದ 262 ಅಂಬುಲೆನ್ಸ್ ಗಳ ಸೇರ್ಪಡೆ ಮಾಡಿದ್ದು 160 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೆ ಸೃಜನೆ.

ಯುವ ಜನತೆಯಲ್ಲಿ ಹೆಚ್ಚಿದ ಹೃದಯಘಾತ ತಡೆಗೆ ಕಾಂಗ್ರೆಸ್ನಿಂದ ಪುನೀತ್ ಹೃದಯ ಜ್ಯೋತಿ ಎನ್ನುವ ಹೊಸ ಯೋಜನೆ ಪ್ರಾರಂಭ. 85 ಆಸ್ಪತ್ರೆಗಳಲ್ಲಿ ಸೌಲಭ್ಯ, 6.50 ಕೋಟಿ ವೆಚ್ಚ ನಿಗದಿ ಮಾಡಿದೆ.

ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಆರೋಗ್ಯವನ್ನು ಒದಗಿಸಲು ಪ್ರತಿ ಜಿಲ್ಲೆಯಲ್ಲಿ ಸುಧಾರಿತ ಕ್ರಿಟಿಕಲ್ ಕೇರ್ ಬ್ಲಾಕ್ಗಳನ್ನು ಸ್ಥಾಪನೆ. ಈಗಾಗಲೇ ರೂ. 187 ಕೋಟಿ ವೆಚ್ಚದಲ್ಲಿ 15 ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯ ಆರಂಭವಾಗಿದೆ.

ಗ್ರಾಮೀಣ ಜನರಿಗೆ 24x7 ತುರ್ತು ಅರೋಗ್ಯ ಸೇವೆಗಳನ್ನು ಒದಗಿಸಲು 25 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೆ ಏರಿಸಲಾಗುವುದು. ಮುಂದಿನ ಎರಡು ವರ್ಷಗಳಲ್ಲಿ 350 ಕೋಟಿ ರೂ.

ಗ್ರಾಮೀಣ ಪ್ರದೇಶಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ಕನಿಷ್ಠ 6.493 ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಮುಂದಿನ 2 ವರ್ಷಗಳಲ್ಲಿ, SಖಿಇಒI (ತೀವ್ರ ಹೃದಯಾಘಾತ) ಚಿಕಿತ್ಸೆಯನ್ನು ಎಲ್ಲಾ ತಾಲೂಕು ಆಸ್ಪತ್ರೆಗಳಿಗೆ ವಿಸ್ತರಿಸಲಾಗುವುದು ಮತ್ತು ಪಾರ್ಶ್ವವಾಯು ಚಿಕಿತ್ಸೆಗಾಗಿ ಹೂಂಬೋಲಿಟಿಕ್ ಔಷಧಗಳನ್ನು ಖರೀದಿಸಲು 32 ಕೋಟಿ ರೂ.

ಭಾರತದ ಅತಿದೊಡ್ಡ ಹೃದಯ ಆರೈಕೆ ಸೌಲಭ್ಯಗಳಲ್ಲಿ ಒಂದಾಗಿರುವ ಬೆಂಗಳೂರಿನ ಜಯದೇವ ಆಸ್ಪತ್ರೆಯನ್ನು 1,000 ಹಾಸಿಗೆಗಳಿಗೆ ಅನುಕೂಲವಾಗುವಂತೆ ಮೇಲ್ದರ್ಜೆಗೇರಿಸಲಾಗಿದೆ.

ಕಲಬುರಗಿಯಲ್ಲಿ 350 ಹಾಸಿಗೆಗಳ ಹೊಸ ಹೃದ್ರೋಗ ಆಸ್ಪತ್ರೆ ನಿರ್ಮಾಣಕ್ಕೆ ₹222.65 ಕೋಟಿ ಅನುದಾನ ನೀಡಲಾಗಿದೆ.

ಹೃದಯದ ತುರ್ತು ಪರಿಸ್ಥಿತಿಗಳನ್ನು ಬೆಂಬಲಿಸಲು ರಾಜ್ಯವು 50 ಹೊಸ ಅಂಬ್ಯುಲೆನ್ಸ್ ಗಳೊಂದಿಗೆ ‘ಹಾರ್ಟ್ ಲೈನ್ ಆಂಬ್ಯುಲೆನ್ಸ್ ಸೇವೆ' ಪ್ರಾರಂಭಿಸಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande