ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ
ನಾನಾ
ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ


ಬೆಂಗಳೂರು, 30 ಏಪ್ರಿಲ್ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಇಂದು ಬಿಸಿಲು ಮತ್ತು ಒಣಹವೆಯ ವಾತಾವರಣ ಮುಂದುವರಿದರೂ, ಮಧ್ಯಾಹ್ನ ನಂತರ ಹಲವೆಡೆ ಹವಾಮಾನದಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ನಾನಾ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಉಂಟಾಗಿ, ಗುಡುಗು-ಸಿಡಿಲು ಸಹಿತ ಗಾಳಿಯೊಂದಿಗೆ ಮಳೆಯಾಗುವ ಲಕ್ಷಣಗಳಿವೆ.

ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಕೆಲವು ಕಡೆ ಸಾಧಾರಣ ಮಳೆಯಾಗಲಿದೆ. ವಿಶೇಷವಾಗಿ ಒಳನಾಡಿನ ಕೆಲ ಪ್ರದೇಶಗಳಲ್ಲಿ ಆಲಿಕಲ್ಲು ಮಳೆಯೂ ಸಂಭವಿಸುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ಇನ್ನೊಂದೆಡೆ, ದಕ್ಷಿಣ ಒಳನಾಡು ಜಿಲ್ಲೆಗಳಾದ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಭಾಗಗಳಲ್ಲಿ ಕೆಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ಸೂಚಿಸಿದ್ದಾರೆ.

ಗುಡುಗು-ಸಿಡಿಲಿನ ಸಂದರ್ಭಗಳಲ್ಲಿ ತೆರೆಯಾದ ಪ್ರದೇಶಗಳಲ್ಲಿ ನಿಲ್ಲದೇ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಸೂಚನೆ ನೀಡಲಾಗಿದೆ. ರೈತರು ತಮ್ಮ ಬೆಳೆಗಳ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಕೃಷಿ ಇಲಾಖೆ ಸಲಹೆ ನೀಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande