ಮುಧೋಳದಲ್ಲಿ ಬಿ.ಎಲ್.ಡಿ ಸೌಹಾರ್ದ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ
ಬಾಗಲಕೋಟೆ, 30 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದಲ್ಲಿ ಬಿ.ಎಲ್.ಡಿ ಸೌಹಾರ್ದ ಸಹಕಾರಿ ಸಂಘದ ನೂತನ ಶಾಖೆಯನ್ನು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಹಕಾರಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಸಂಘದ ಪಾತ್ರ ಮಹತ್ವದ್ದಾಗಿದೆ ಎಂ
ಮುಧೋಳದಲ್ಲಿ ಬಿ.ಎಲ್.ಡಿ ಸೌಹಾರ್ದ ಸಹಕಾರಿ ಸಂಘದ ನೂತನ ಶಾಖೆ ಉದ್ಘಾಟನೆ


ಬಾಗಲಕೋಟೆ, 30 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದಲ್ಲಿ ಬಿ.ಎಲ್.ಡಿ ಸೌಹಾರ್ದ ಸಹಕಾರಿ ಸಂಘದ ನೂತನ ಶಾಖೆಯನ್ನು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸಹಕಾರಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಸಂಘದ ಪಾತ್ರ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು.

ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಬಿ.ಎಲ್.ಡಿ ಸೌಹಾರ್ದ ಸಹಕಾರಿ ಸಂಘವು ಸ್ಥಾಪನೆಯಾದ ಬಳಿಕದಿಂದಲೂ ಸದಸ್ಯರಿಗೆ ವಿಶ್ವಾಸಾರ್ಹ ಸೇವೆಗಳನ್ನು ನೀಡುತ್ತಾ ಬೆಳವಣಿಗೆ ಕಂಡಿದೆ. ಗ್ರಾಮೀಣ ಹಾಗೂ ನಗರ ಪ್ರದೇಶಗಳ ಜನರಿಗೆ ಆರ್ಥಿಕ ನೆರವು, ಸ್ವಾವಲಂಬನೆ ಹಾಗೂ ಉದ್ಯಮೋತ್ಸಾಹ ಬೆಳೆಸುವಲ್ಲಿ ಸಂಘ ಪ್ರಮುಖ ಪಾತ್ರವಹಿಸಿದೆ ಎಂದು ತಿಳಿಸಿದರು. ಇಂದಿನ ದಿನಗಳಲ್ಲಿ ಸಹಕಾರಿ ಸಂಸ್ಥೆಗಳು ಜನಸಾಮಾನ್ಯರ ಆರ್ಥಿಕ ಸ್ಥಿರತೆಗೆ ದಾರಿದೀಪವಾಗಿದ್ದು, ಸೌಹಾರ್ದವು ಇದುವರೆಗೆ ಸಾಧಿಸಿರುವ ಸಾಧನೆಗಳು ಶ್ಲಾಘನೀಯ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಇನ್ನಷ್ಟು ಶಾಖೆಗಳನ್ನು ಆರಂಭಿಸಿ ಹೆಚ್ಚಿನ ಜನರಿಗೆ ಸೇವೆಗಳನ್ನು ವಿಸ್ತರಿಸುವ ಯೋಜನೆಗಳಿವೆ. ಡಿಜಿಟಲ್ ಬ್ಯಾಂಕಿಂಗ್, ಸುಲಭ ಸಾಲ ಸೌಲಭ್ಯಗಳು, ಮಹಿಳಾ ಮತ್ತು ಯುವಕರಿಗೆ ವಿಶೇಷ ಯೋಜನೆಗಳ ಮೂಲಕ ಸಂಘವನ್ನು ಮತ್ತಷ್ಟು ಬಲಪಡಿಸುವ ಉದ್ದೇಶ ಹೊಂದಿದ್ದೇವೆ ಎಂದು ಅವರು ವಿವರಿಸಿದರು.

ಈ ಸಂದರ್ಭದಲ್ಲಿ ವಿಜಯಪುರ-ಬಾಗಲಕೋಟೆ ಕೆ.ಎಂ.ಎಫ್ ಅಧ್ಯಕ್ಷ ಲಿಂಗರಾಜ ಪಾಟೀಲ, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನಯ ಆರ್. ತಿಮ್ಮಾಪುರ, ಬಿ.ಎಲ್.ಡಿ.ಇ ಸಂಸ್ಥೆಯ ಜಮಖಂಡಿ ಆವರಣದ ಕಾಲೇಜು ಅಭಿವೃದ್ಧಿ ಸಮಿತಿ ಚೇರ್ಮನ್ ಅರುಣಕುಮಾರ ಶಹಾ ಸೇರಿದಂತೆ ಮುಖಂಡರಾದ ಅಪ್ಪಣ್ಣ ರೂಗಿ, ಉದಯ ಸಾರವಾಡ, ದಯಾನಂದ ಪಾಟೀಲ, ಮೋಹನ ಬಿರಾದಾರ ಹಾಗೂ ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮವು ಸ್ಥಳೀಯರ ಉಪಸ್ಥಿತಿಯಲ್ಲಿ ಉತ್ಸಾಹಭರಿತವಾಗಿ ನಡೆಯಿತು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande