
ಬಾಗಲಕೋಟೆ, 30 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಜನತಾದಳ (ಜಾತ್ಯತೀತ) ಪಕ್ಷದ ವತಿಯಿಂದ ಬಾಗಲಕೋಟೆ ಜಿಲ್ಲೆಯ ಬದುಕಿನ ಪಟ್ಣದಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಮುಖಂಡರು ಪ್ರಕಟಣೆ ಮೂಲಕ ತಿಳಿಸಿದರು.
ಈ ಕಾರ್ಯಾಗಾರವು ಮೇ 1, 2026ರ ಶುಕ್ರವಾರ ಬೆಳಿಗ್ಗೆ 10:30 ಗಂಟೆಗೆ ಬಾದಾಮಿಯ ವೀರಪುಲಕೇಶಿ ವಿದ್ಯಾವರ್ಧಕ ಸಂಘದ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಕೇಂದ್ರ ಚುನಾವಣಾ ಆಯೋಗವು ದೇಶಾದ್ಯಂತ ಕೈಗೊಂಡಿರುವ ಈ ವಿಶೇಷ ಅಭಿಯಾನದ ಹಿನ್ನೆಲೆಯಲ, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ, ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಮತದಾರರ ಜಾಗೃತಿ ಕುರಿತು ಸಮಗ್ರ ಮಾಹಿತಿಯನ್ನು ನೀಡುವುದು ಈ ಕಾರ್ಯಾಗಾರದ ಮುಖ್ಯ ಉದ್ದೇಶವಾಗಿದೆ.
ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಮಹಿಳೆಯರು, ಯುವಕರು ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಎಲ್ಲರೂ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪಕ್ಷದ ವತಿಯಿಂದ ಮನವಿ ಮಾಡಲಾಗಿದೆ.
ಈ ಕುರಿತು ಪ್ರಕಟಣೆ ನೀಡಿರುವ ಹನಮಂತ ಬಿ. ಮಾವಿನಮರದ ಅವರು, ಮತದಾರರ ಪಟ್ಟಿಯ ಶುದ್ಧೀಕರಣ ಮತ್ತು ಜನಜಾಗೃತಿಗೆ ಇಂತಹ ಕಾರ್ಯಾಗಾರಗಳು ಬಹಳ ಅಗತ್ಯವೆಂದು ತಿಳಿಸಿ, ಬಾದಾಮಿ ಮತಕ್ಷೇತ್ರದ ಸಮಸ್ತ ಜೆಡಿಎಸ್ ಕಾರ್ಯಕರ್ತರು ಮತ್ತು ಸಾರ್ವಜನಿಕರು ಪಾಲ್ಗೊಳ್ಳುವಂತೆ ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande