
ಕಲಬುರಗಿ, 30 ಏಪ್ರಿಲ್ (ಹಿ.ಸ.) :
ಆ್ಯಂಕರ್ : ರಾಜ್ಯ ರಾಜಕೀಯದಲ್ಲಿ ನಾಯಕತ್ವ ಗೊಂದಲ ಕುರಿತು ಕಲಬುರಗಿಯಲ್ಲಿ ಪ್ರತಿಕ್ರಿಯಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಆದಷ್ಟು ಬೇಗ ಈ ಗೊಂದಲವನ್ನು ಬಗೆಹರಿಸುತ್ತೇವೆ,” ಎಂದು ತಿಳಿಸಿದ್ದಾರೆ.
“ನಾನು ಮುಖ್ಯಮಂತ್ರಿ ಆಗಬೇಕು ಎಂಬ ವಿಚಾರವನ್ನು ಕೆಲವರು ಹೇಳುತ್ತಿದ್ದಾರೆ. ಅದು ಅವರ ಅಭಿಪ್ರಾಯ. ಆದರೆ ಪಕ್ಷದ ನಿರ್ಣಯಗಳನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ. ನಮ್ಮ ಪಕ್ಷದಲ್ಲಿ ಹಲವು ವರ್ಷಗಳಿಂದ ದುಡಿದಿದ್ದೇವೆ, ಐಡಿಯಾಲಜಿಯ ಆಧಾರದ ಮೇಲೆ ನಡೆದುಕೊಳ್ಳುತ್ತೇವೆ,” ಎಂದು ಹೇಳಿದರು.
ಪಕ್ಷದ ನಿರ್ಣಯಗಳಲ್ಲಿ ಸೋನಿಯಾ ಗಾಂಧಿ ಅವರ ಪಾತ್ರ ಮಹತ್ವದ್ದಾಗಿದೆ ಎಂದೂ, ಅಗತ್ಯವಾದರೆ ರಾಹುಲ್ ಗಾಂಧಿ ಅವರೊಂದಿಗೆ ಚರ್ಚೆ ನಡೆಯುತ್ತದೆ ಎಂದು ತಿಳಿಸಿದರು.
“ಈಗ ರಾಜ್ಯದಲ್ಲಿ ಮುಖ್ಯಮಂತ್ರಿ ಇದ್ದಾರೆ, ಆದ್ದರಿಂದ ಮುಖ್ಯಮಂತ್ರಿ ಬದಲಾವಣೆ ವಿಚಾರ ಇಲ್ಲ. ಭವಿಷ್ಯದಲ್ಲಿ ಆ ಪರಿಸ್ಥಿತಿ ಬಂದರೆ ನಾವು ಎಲ್ಲರೂ ಸೇರಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ. ಇನ್ನೂ ಸಮಯವಿದೆ,” ಎಂದು ಖರ್ಗೆ ಸ್ಪಷ್ಟಪಡಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa