ಡಾ. ಬಾಬು ಜಗಜೀವನ ರಾಮ್ 119ನೇ ಜಯಂತಿ : ವಿಜಯಪುರದಲ್ಲಿ ಪ್ರತಿಮೆಗೆ ಮಾಲಾರ್ಪಣೆ
ವಿಜಯಪುರ, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ಭಾರತದ ಮಾಜಿ ಉಪಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರರಾದ ಬಾಬು ಜಗಜೀವನರಾಮ್ ಅವರ 119ನೇ ಜಯಂತಿ ಅಂಗವಾಗಿ ಏಪ್ರಿಲ್ 5ರಂದು ವಿಜಯಪುರ ನಗರದಲ್ಲಿ ಗೌರವ ನಮನ ಸಲ್ಲಿಸಲಾಯಿತು. ನಗರದ ಸೆಟ್ಲೈಟ್ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಡಾ. ಬಾಬು ಜಗಜೀವನ ರಾ
ಜಯಂತಿ


ವಿಜಯಪುರ, 05 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಭಾರತದ ಮಾಜಿ ಉಪಪ್ರಧಾನಿ ಹಾಗೂ ಹಸಿರು ಕ್ರಾಂತಿಯ ಹರಿಕಾರರಾದ ಬಾಬು ಜಗಜೀವನರಾಮ್ ಅವರ 119ನೇ ಜಯಂತಿ ಅಂಗವಾಗಿ ಏಪ್ರಿಲ್ 5ರಂದು ವಿಜಯಪುರ ನಗರದಲ್ಲಿ ಗೌರವ ನಮನ ಸಲ್ಲಿಸಲಾಯಿತು.

ನಗರದ ಸೆಟ್ಲೈಟ್ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಡಾ. ಬಾಬು ಜಗಜೀವನ ರಾಮ್ ಅವರ ಪ್ರತಿಮೆಗೆ ಶಾಸಕರಾದ ವಿಠ್ಠಲ್ ಕಟಕದೊಂಡ್, ಮಹಾನಗರ ಪಾಲಿಕೆ ಮೇಯರ್ ಮಡಿವಾಳಪ್ಪ ಕರಡಿ, ಜಿಲ್ಲಾಧಿಕಾರಿ ಡಾ. ಆನಂದ ಕೆ., ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದೀನ ಸೌದಾಗರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande