ದೇಶದ ಪ್ರಗತಿಯಲ್ಲಿ ನಮ್ಮ ಪ್ರಗತಿ ಅಡಗಿದೆ : ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
ಚಿತ್ರದುರ್ಗ, 05 ಏಪ್ರಿಲ್ (ಹಿ.ಸ.) : ಆ್ಯಂಕರ್ : ದೇಶದ ಪ್ರಗತಿಯಲ್ಲಿ ನಮ್ಮ ಪ್ರಗತಿಯಿದೆ, ದೇಶದ ಉದ್ದಾರದಲ್ಲೇ ನಮ್ಮ ಉದ್ದಾರವಿದೆ ಎಂಬ ಬಾಬೂಜಿಯವರ ಮಾತು ಸಾರ್ವಕಾಲಿಕ ಸತ್ಯ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ತಿಳಿಸಿದರು. ಚಿತ್ರದುರ್ಗ ನಗರದ ಲಿಡ್ಕರ್ ಭವನದಲ್ಲಿ ಭಾನುವಾರ ಜಿಲ್ಲಾಡಳಿತದ ವತಿಯಿ
ಜಯಂತಿ


ಚಿತ್ರದುರ್ಗ, 05 ಏಪ್ರಿಲ್ (ಹಿ.ಸ.) :

ಆ್ಯಂಕರ್ : ದೇಶದ ಪ್ರಗತಿಯಲ್ಲಿ ನಮ್ಮ ಪ್ರಗತಿಯಿದೆ, ದೇಶದ ಉದ್ದಾರದಲ್ಲೇ ನಮ್ಮ ಉದ್ದಾರವಿದೆ ಎಂಬ ಬಾಬೂಜಿಯವರ ಮಾತು ಸಾರ್ವಕಾಲಿಕ ಸತ್ಯ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ತಿಳಿಸಿದರು.

ಚಿತ್ರದುರ್ಗ ನಗರದ ಲಿಡ್ಕರ್ ಭವನದಲ್ಲಿ ಭಾನುವಾರ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಡಾ. ಬಾಬು ಜಗಜೀವನ್ ರಾಮ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ದೇಶದ ಪ್ರಗತಿಯ ಬಗ್ಗೆ ಯೋಚಿಸುವ ಮೊದಲು ಪ್ರತಿಯೊಬ್ಬರೂ ದೇಶಭಕ್ತಿಯನ್ನು ಬೆಳೆಸಿಕೊಳ್ಳಬೇಕು. ನಾಡಗೀತೆ ಮತ್ತು ರಾಷ್ಟçಗೀತೆಯನ್ನು ಹಾಡುವುದರಿಂದಲೇ ದೇಶಭಕ್ತಿ ಆರಂಭವಾಗುತ್ತದೆ ಎಂದು ಕಿವಿಮಾತು ಹೇಳಿದರು.

1971ರ ಯುದ್ಧದ ಸಮಯದಲ್ಲಿ ಬಾಬೂಜಿಯವರ ಸಮರ್ಥ ನಾಯಕತ್ವದಿಂದಾಗಿ ಕೇವಲ 13 ದಿನಗಳಲ್ಲಿ ಬಾಂಗ್ಲಾದೇಶ ಎಂಬ ಹೊಸ ರಾಷ್ಟç ಉದಯವಾಯಿತು. ಅವರು ತಮ್ಮ ಇಡೀ ಜೀವನವನ್ನು ದೇಶದ ಹಿತಕ್ಕಾಗಿ ಮುಡಿಪಾಗಿಟ್ಟಿದ್ದರು ಎಂದು ಗುಣಗಾನ ಮಾಡಿದರು.

ಇದೇ ವೇಳೆ ಬಾಬು ಜಗಜೀವನ್ ರಾಂ ಭವನದ ಬಾಕಿ ಉಳಿದಿರುವ ಕಾಮಗಾರಿ ಬಗ್ಗೆ ಪ್ರಸ್ತಾಪಿಸಿದ ಶಾಸಕರು, ಭವನದ ಪೂರ್ಣಗೊಳಿಸುವಿಕೆಗೆ ಸುಮಾರು ರೂ. 3 ಕೋಟಿ ಅನುದಾನದ ಅಗತ್ಯವಿದ್ದು, ಮುಂಬರುವ ದಿನಗಳಲ್ಲಿ ಅನುದಾನ ಒದಗಿಸಿ ಭವನ ಲೋಕಾರ್ಪಣೆಗೊಳಿಸುವುದಾಗಿ ಭರವಸೆ ನೀಡಿದರು. ಅಲ್ಲದೆ ಸರ್ಕಾರದಿಂದ ನಿಗಮಗಳ ಮೂಲಕ ಸಿಗುವ ನೇರ ಸಾಲ ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande