
ಕಾಸರಗೋಡು, 05 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇರಳದ ಕಾಸರಗೋಡು ಜಿಲ್ಲೆ ವ್ಯಾಪ್ತಿಯ ಮಂಜೇಶ್ವರದಲ್ಲಿ ಕಾಂಗ್ರೆಸ್ ಬೆಂಬಲಿತ ಯುಡಿಎಫ್ ಅಭ್ಯರ್ಥಿ ಹಾಗೂ ಹಾಲಿ ಶಾಸಕ ಅಶ್ರಫ್ ಪರವಾಗಿ ಚುನಾವಣಾ ಪ್ರಚಾರ ನಡೆಸಿ ಮತಯಾಚಿಸಿದರು.
ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಮತ್ತು ಧರ್ಮನಿರಪೇಕ್ಷತೆಯ ಆಧಾರದ ಮೇಲೆ ಯುಡಿಎಫ್ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮತದಾರರನ್ನು ಮನವಿ ಮಾಡಿದರು. ರಾಜ್ಯಗಳ ನಡುವಿನ ಸಹಕಾರ ಹಾಗೂ ಜನಪರ ಆಡಳಿತಕ್ಕೆ ಕಾಂಗ್ರೆಸ್ ಬದ್ಧವಾಗಿದೆ ಎಂದು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa