
ಕೋಲಾರ, ೦೬ ಏಪ್ರಿಲ್ (ಹಿ.ಸ) :
ಆ್ಯಂಕರ್ : ನಗರದ ಹೊರವಲಯದ ಕಸಬಾ ಹೋಬಳಿಯ ಗಾಜಲದಿನ್ನೆ ಗ್ರಾಮದಲ್ಲಿ ಶ್ರೀ ಸತ್ಯಮ್ಮದೇವಿ ಮತ್ತು ಶ್ರೀಕಾಟೇರಮ್ಮ ದೇವಿಯ ಬಿಂಬ ಪ್ರತಿಷ್ಠಾಪನೆ ಹಾಗೂ ಮಹಾ ಕುಂಭಾಭಿಷೇಕ ಮಹೋತ್ಸವು ಸೋಮವಾರ ವಿಜೃಂಭಣೆಯಿ0ದ ನಡೆದು ಶಾಸಕ ಕೊತ್ತೂರು ಮಂಜುನಾಥ್ ಮತ್ತು ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಹಾ ಕುಂಭಾಭಿಷೇಕ ಮಹೋತ್ಸವದಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು.
ಮಹೋತ್ಸವದ ಅಂಗವಾಗಿ ಎರಡು ದಿನಗಳಿಂದ ದೇವಾಲಯಕ್ಕೆ ದೀಪಾಲಂಕಾರ ಮಾಡಲಾಗಿತ್ತು ಸತ್ಯಮ್ಮದೇವಿ ಮತ್ತು ಕಾಟೇರಮ್ಮದೇವಿಯನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಪ್ರತಿಷ್ಠಾಪನೆ ಅಂಗವಾಗಿ ಹೋಮ, ಹವನ, ವಿಶೇಷ ಪೂಜಾ ಕೈಂಕರ್ಯ, ಮಹಾಮಂಗಳಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳು ಶಾಸ್ತ್ರೋಕ್ತವಾಗಿ ನೆರವೇರಿತು ಗಾಜಲದಿನ್ನೆ ಸೇರಿದಂತೆ ವಿವಿಧೆಡೆಯಿಂದ ನೂರಾರು ಸಂಖ್ಯೆಯಲ್ಲಿ ಭಕ್ತರು ದೇವರ ದರ್ಶನ ಪಡೆದರು. ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ವೇಮಗಲ್-ನರಸಾಪುರ ಪ್ರಾಧಿಕಾರದ ಅಧ್ಯಕ್ಷ ಉರಟ ಅಗ್ರಹಾರ ಚೌಡರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್, ಬಲಿಜ ಸಂಘದ ತೋಟಗಳ ಅಶೋಕ್, ಜಿಲ್ಲಾ ಮೀನುಗಾರಿಕೆ ಸಮಿತಿ ನಿರ್ದೇಶಕ ಗಾಜಲಯ ರಮೇಶ್, ಎಂಪಿಸಿಎಸ್ ಅಧ್ಯಕ್ಷ ಗುಲ್ಲಪ್ಪ, ಗ್ರಾಮಸ್ಥರಾದ ನಾರಾಯಣಸ್ವಾಮಿ, ಬಾಲಪ್ಪ, ನೀಲಿ ಮುನಿಸ್ವಾಮಿ, ವೆಂಕಟಾಚಲಪತಿ, ಗೌರಮ್ಮ, ಜಗನ್ನಾಥ, ಶಿವಮ್ಮ, ಕೆ.ಆನಂದ್, ಸೀತಾರಾಮ್, ಗಜೇಂದ್ರ, ವಿನೋದ್, ಚಂದ್ರಪ್ಪ, ಶ್ರೀನಿವಾಸ್ ಮುಂತಾದವರು ಇದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್