ವಾರ್ಷಿಕೋತ್ಸವದಲ್ಲಿ ಕೌಶಲ್ಯ, ಸಂಸ್ಕೃತಿ ಸಂಭ್ರಮ
ಗದಗ, 07 ಏಪ್ರಿಲ್ (ಹಿ.ಸ.) : ಆ್ಯಂಕರ್ : ಗದಗ-ಬೆಟಗೇರಿ ನಗರದ ನರಸಾಪೂರದಲ್ಲಿರುವ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯ 2025-26ನೇ ಸಾಲಿನ ವಾರ್ಷಿಕೋತ್ಸವ ಕಾರ್ಯಕ್ರಮವು ಸಂಭ್ರಮ ಹಾಗೂ ಸಡಗರದಿಂದ ಜರುಗಿತು. ಕಾರ್ಯಕ್ರಮವನ್ನು ಜಿ.ಎನ್.ಟಿ.ಟಿ.ಎಫ್ ಅಧ್ಯಕ್ಷರಾದ ಕೆ.ಹೆಚ್. ಪಾಟೀಲ್ ಜ್ಯೋತಿ ಬೆಳಗಿ
ಫೋಟೋ


ಗದಗ, 07 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಗದಗ-ಬೆಟಗೇರಿ ನಗರದ ನರಸಾಪೂರದಲ್ಲಿರುವ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯ 2025-26ನೇ ಸಾಲಿನ ವಾರ್ಷಿಕೋತ್ಸವ ಕಾರ್ಯಕ್ರಮವು ಸಂಭ್ರಮ ಹಾಗೂ ಸಡಗರದಿಂದ ಜರುಗಿತು.

ಕಾರ್ಯಕ್ರಮವನ್ನು ಜಿ.ಎನ್.ಟಿ.ಟಿ.ಎಫ್ ಅಧ್ಯಕ್ಷರಾದ ಕೆ.ಹೆಚ್. ಪಾಟೀಲ್ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂದಿನ ಯುಗದಲ್ಲಿ ಶಿಕ್ಷಣದ ಜೊತೆಗೆ ಕೌಶಲ್ಯಾಭಿವೃದ್ಧಿ ಅತ್ಯಗತ್ಯವಾಗಿದ್ದು, ವಿನ್ಯಾಸ ಕೌಶಲ್ಯ ಮತ್ತು ಸ್ವ-ಉದ್ಯೋಗದತ್ತ ವಿದ್ಯಾರ್ಥಿಗಳು ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಸಂಸ್ಥೆಯ ಜಂಟಿ ನಿರ್ದೇಶಕರು ಹಾಗೂ ಪ್ರಾಂಶುಪಾಲರಾದ ಶ್ರೀಮತಿ ಸುಮಲತಾ.ಡಿ. ಅವರು ವಾರ್ಷಿಕ ವರದಿಯನ್ನು ಮಂಡಿಸಿ, ಸಂಸ್ಥೆಯ ವಿವಿಧ ಶೈಕ್ಷಣಿಕ ಸಾಧನೆಗಳು, ತರಬೇತಿ ಕಾರ್ಯಕ್ರಮಗಳು ಮತ್ತು ವಿದ್ಯಾರ್ಥಿಗಳ ಪ್ರಗತಿಯನ್ನು ವಿವರಿಸಿದರು.

ಶೈಕ್ಷಣಿಕ, ಕ್ರೀಡಾ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಮೆಚ್ಚುಗೆಯ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಮುಖ್ಯ ಅತಿಥಿಗಳು ಬಹುಮಾನ ಮತ್ತು ಪ್ರಶಸ್ತಿಗಳನ್ನು ವಿತರಿಸಿದರು.

ಇದಾದ ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು. ವಿದ್ಯಾರ್ಥಿಗಳು ಜಾನಪದ ನೃತ್ಯ, ದೇಶಭಕ್ತಿ ಗೀತೆಗಳು ಹಾಗೂ ನಾಟಕಗಳು ಪ್ರೇಕ್ಷಕರನ್ನು ರಂಜಿಸಿವೆ.

ಕಾರ್ಯಕ್ರಮದಲ್ಲಿ ಶ್ರೀಮತಿ ಅನುಪಮಾ ಹಿರೇಮಠ (ಉಪ ನಿರ್ದೇಶಕರು, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ, ಹುಬ್ಬಳ್ಳಿ), ಕುಮಾರಿ ರಕ್ಷೀತಾ ಮಾಲಿಪಾಟೀಲ್ (ವಿದ್ಯಾರ್ಥಿ ಕಾರ್ಯದರ್ಶಿ) ಸೇರಿದಂತೆ ಸಂಸ್ಥೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande