ಸುಸೂತ್ರ ಮತದಾನಕ್ಕೆ ಸಕಲ ಸಿದ್ಧತೆ : ಚುನಾವಣಾಧಿಕಾರಿ ಸಂತೋಷ್ ಕುಮಾರ್
ದಾವಣಗೆರೆ, 07 ಏಪ್ರಿಲ್ (ಹಿ.ಸ.) : ಆ್ಯಂಕರ್ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಏಪ್ರಿಲ್ 9 ರಂದು ನಡೆಯಲಿರುವ ಮತದಾನಕ್ಕೆ ಜಿಲ್ಲಾಡಳಿತವು ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ ಎಂದು ದಾವಣಗೆರೆ ಜಿಲ್ಲಾ ಚುನಾವಣಾಧಿಕಾರಿ ಸಂತೋಷ್ ಕುಮಾರ್ ತಿಳಿಸಿದ್ದಾರೆ. ನಗರದ ಮಹಾ
Santoshkumar


ದಾವಣಗೆರೆ, 07 ಏಪ್ರಿಲ್ (ಹಿ.ಸ.) :

ಆ್ಯಂಕರ್ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಏಪ್ರಿಲ್ 9 ರಂದು ನಡೆಯಲಿರುವ ಮತದಾನಕ್ಕೆ ಜಿಲ್ಲಾಡಳಿತವು ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ ಎಂದು ದಾವಣಗೆರೆ ಜಿಲ್ಲಾ ಚುನಾವಣಾಧಿಕಾರಿ ಸಂತೋಷ್ ಕುಮಾರ್ ತಿಳಿಸಿದ್ದಾರೆ.

ನಗರದ ಮಹಾನಗರ ಪಾಲಿಕೆ ಕಚೇರಿಯಲ್ಲಿ ನಡೆದ ಪತ್ರಿಕಾಗೋಷಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಒಟ್ಟು 2,31,072 ಮತದಾರರು ಇದ್ದಾರೆ ಎಂದು ಮಾಹಿತಿ ನೀಡಿದರು. ಇದರಲ್ಲಿ 1,13,399 ಪುರುಷರು, 1,17,690 ಮಹಿಳೆಯರು ಮತ್ತು 43 ಇತರರು ಸೇರಿದ್ದಾರೆ.

ಯುವ ಮತದಾರರು, ವಿಕಲಚೇತನರು ಮತ್ತು ಹಿರಿಯ ನಾಗರಿಕರಿಗೂ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, 229 ಮಂದಿ ಮನೆಯಿಂದಲೇ ಅಂಚೆ ಮತದಾನ ಮಾಡಿದ್ದಾರೆ ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande