
ಗದಗ, 07 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2026-27ನೇ ಸಾಲಿನ ಬೇಸಿಗೆ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಬೇಸಿಗೆ ಶಿಬಿರದ ಚಟುವಟಕೆಗಳಾದ ಚಿತ್ರಕಲೆ, ಕರಕುಶಲ ಕಲೆ, ಜೇಡಿಮಣ್ಣಿನ ಕಲೆ, ಸಮೂಹ ನೃತ್ಯ, ಶಾಸ್ತ್ರೀಯ ಸಂಗೀತ, ಕರಾಟೆ, ಯೋಗ, ಕಸದಿಂದರಸ, ಜುವೇಲರಿ ಮೆಕಿಂಗ್, ಮೆಹಂದಿ, ಮತ್ತು ಗ್ರಾಮಿಣ ಕ್ರೀಡೆಗಳು ಹಾಗೂ ಸ್ಥಳೀಯ ಚಟುವಟಿಕೆಗಳಿದ್ದಲ್ಲಿಯೂ ಸಹ ಹಮ್ಮಿಕೊಳ್ಳಲಾಗವುದು
ವಯೋಮಿತಿ 05 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಅವಕಾಶವಿದೆ. ಸರಕಾರಿ ಶಾಲಾ ಮಕ್ಕಳು, ಗ್ರಾಮಿಣ ಪ್ರದೇಶದ ಹಾಗೂ ಸೌಲಭ್ಯವಂಚಿತ ಮಕ್ಕಳು ವಿಕಲಚೇತನ ಮಕ್ಕಳು ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗದ ಮಕ್ಕಳಿಗೆ ವಿಶೇಷ ಆದ್ಯತೆ ನೀಡಲಾಗುಹುದು. ಶಿಬಿರದ ಅವಧಿಯಲ್ಲಿ ಮಕ್ಕಳಿಗೆ ವಿವಿಧ ಸ್ಪರ್ಧೆ ಹಾಗೂ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ 50 ರಿಂದ 60 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿರುವುದು ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು.
ಏಪ್ರಿಲ್ 18 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಶಿಬಿರ ಪ್ರಾರಂಭಿಸುವ ದಿನಾಂಕವನ್ನು ದೂರವಾಣಿ,ವಾಟ್ಸಾಪ್ ಸಂದೇಶದ ಮುಖಾಂತರ ತಿಳಿಸಲಾಗುವುದು.
ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯಕ್ರಮ ಸಂಯೋಜಕರಾದ ರವಿ.ಎಫ್.ಉಮಚಗಿ ಅವರನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / lalita MP