ಜಯಂತಿ ಅರ್ಥಪೂರ್ಣವಾಗಿ ಆಚರಿಸಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್
ಗದಗ, 07 ಏಪ್ರಿಲ್ (ಹಿ.ಸ.) : ಆ್ಯಂಕರ್ : ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಮ್ ಅವರ ಜಯಂತಿಯನ್ನು ಗದಗ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏಪ್ರಿಲ್ 14 ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗುತ್ತಿದ್ದು ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಮತ್ತು ಅಚ್ಚುಕಟ್ಟಾಗಿ ಆಚ
ಫೋಟೋ


ಗದಗ, 07 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಮ್ ಅವರ ಜಯಂತಿಯನ್ನು ಗದಗ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏಪ್ರಿಲ್ 14 ರಂದು ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗುತ್ತಿದ್ದು ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಮತ್ತು ಅಚ್ಚುಕಟ್ಟಾಗಿ ಆಚರಿಸಲು ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ್ ಅವರ ಜಯಂತಿ ಕುರಿತು ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಾಗದಂತೆ ನೋಡಿಕೊಳ್ಳಬೇಕು. ಜಯಂತಿ ಕಾರ್ಯಕ್ರಮಕ್ಕೆ ಎಲ್ಲ ಇಲಾಖೆಯ ಅಧಿಕಾರಿಗಳು ತಪ್ಪದೇ ಕಡ್ಡಾಯವಾಗಿ ಹಾಜರಾಗಬೇಕು. ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಜಯಂತಿ ಕಾರ್ಯಕ್ರಮದಂದು ಸನ್ಮಾನಿಸಲಾಗುವುದು. ಜಯಂತಿ ಕಾರ್ಯಕ್ರಮಕ್ಕೂ ಮುನ್ನ ಮೆರವಣಿಗೆಯು ನಗರಸಭೆ ಆವರಣದಿಂದ ಅಂಬೇಡ್ಕರ್ ಭವನದವರೆಗೆ ಬಂದು ತಲುಪುವುದು. ಮೆರವಣಿಗೆಯಲ್ಲಿ ಎನ್ಎಸ್ಎಸ್, ಎನ್ಸಿಸಿ ವಿದ್ಯಾರ್ಥಿಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಮೆರವಣಿಗೆಗೆ ಶೋಭೆ ತರಬೇಕು. ಜಯಂತಿ ಕಾರ್ಯಕ್ರಮದ ಪ್ರಯುಕ್ರ ಏಪ್ರಿಲ್ 8 ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗುತ್ತಿದೆ. ಒಟ್ಟಾರೆಯಾಗಿ ಕಾರ್ಯಕ್ರಮ ಯಶಸ್ವಿಯಾಗುವಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಸೂಚನೆ ನೀಡಿದರು.

ಸಭೆಯಲ್ಲಿ ಬ್ಯಾನರ್ ಅಳವಡಿಕೆ, ವಿದ್ಯುತ್ ವ್ಯವಸ್ಥೆ, ವೇದಿಕೆ ಅಲಂಕಾರ, ಉಪನ್ಯಾಸ ಕಾರ್ಯಕ್ರಮ, ಉಪಹಾರದ ವ್ಯವಸ್ಥೆ, ಕಲಾತಂಡಗಳ ಆಯ್ಕೆ, ಆಕುಡಿಯುವ ನೀರಿನ ವ್ಯವಸ್ಥೆ ಕುರಿತು ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ನಗರಾಬಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ್ರ ಕೋಟೂರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಎಂ.ಎಂ.ತುಂಬರಮಟ್ಟಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಅಮಿತ ಬಿದರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ರೀಮತಿ ಪದ್ಮಾವತಿ ಜಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಸನಾಯಕ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರುಡಿ, ಡಿ ಡಿ ಎಲ್ ಆರ್ ರುದ್ರಣ್ಣಗೌಡ್ರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ.ಶ್ರೀಮತಿ ನಂದಾ ಹಣಬರಟ್ಟಿ ಸರ್ವರಿಗೂ ಸ್ವಾಗತಿಸಿ ವಂದಿಸಿದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande