ಕೊಪ್ಪಳ ತಾಲೂಕು ಚುಟುಕು ಸಾಹಿತ್ಯ ಪರಿಷತ್ಎರಡನೇ ಸಮ್ಮೇಳನಾಧ್ಯಕ್ಷರಾಗಿ ಶ್ರೀನಿವಾಸ ಚಿತ್ರಗಾರ
ಕೊಪ್ಪಳ, 07 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕೊಪ್ಪಳ ತಾಲೂಕ ಎರಡನೇ ಚುಟುಕು ಸಾಹಿತ್ಯ ಸಮ್ಮೇಳನ ಸವಾ೯ಧ್ಯಕ್ಷರಾಗಿ ಶಿಕ್ಷಕ ಹಾಗೂ ಕವಿ ಶ್ರೀನಿವಾಸ ಚಿತ್ರಗಾರ ಅವರನ್ನು ಆಯ್ಕೆ ಮಾಡಲಾಗಿದೆ. ತಾಲೂಕಿನ ಕಿನ್ನಾಳ ಗ್ರಾಮದ ಇವರು ಯತ್ನಟ್ಟಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ
ಕೊಪ್ಪಳ ತಾಲೂಕು ಚುಟುಕು ಸಾಹಿತ್ಯ ಪರಿಷತ್ಎರಡನೇ ಸಮ್ಮೇಳನಾಧ್ಯಕ್ಷರಾಗಿ ಶ್ರೀನಿವಾಸ ಚಿತ್ರಗಾರ


ಕೊಪ್ಪಳ, 07 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ತಾಲೂಕ ಎರಡನೇ ಚುಟುಕು ಸಾಹಿತ್ಯ ಸಮ್ಮೇಳನ ಸವಾ೯ಧ್ಯಕ್ಷರಾಗಿ ಶಿಕ್ಷಕ ಹಾಗೂ ಕವಿ ಶ್ರೀನಿವಾಸ ಚಿತ್ರಗಾರ ಅವರನ್ನು ಆಯ್ಕೆ ಮಾಡಲಾಗಿದೆ.

ತಾಲೂಕಿನ ಕಿನ್ನಾಳ ಗ್ರಾಮದ ಇವರು ಯತ್ನಟ್ಟಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ, 58 ರ ಹರೆಯದ ಹಿರಿಯ ಕವಿ ೧೫ಕ್ಕೂ ಅಧಿಕ ಮಕ್ಕಳ ಸಾಹಿತ್ಯ ಸೇರಿದಂತೆ ಇತರೆ ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಜೊತೆಗೆ ನಾಡಿನ ವಿವಿಧೆಡೆ ನೂರಾರು ಕವಿಗೋಷ್ಠಿಗಳಲ್ಲಿ ಭಾಗವಹಿಸಿದ್ದು, ಹಲವಾರು ಕಾರ್ಯಕ್ರಮಗಳ ಸಭೆ ಸಮಾರಂಭಗಳ

ಉದ್ಘಾಟಕರಾಗಿ, ಅಧ್ಯಕ್ಷರಾಗಿ ಉಪನ್ಯಾಸಕಾರರಾಗಿ ಉಪನ್ಯಾಸ ನೀಡಿದ್ದಾರೆ.

ಸ್ಥಳೀಯ ಸಾಹಿತ್ಯ ಸಮ್ಮೇಳನಗಳ ಕೆಲವು ಸ್ಮರಣ ಸಂಚಿಕೆಗಳಲ್ಲಿ ಸಂಪಾದಕ ಮಂಡಳಿಯ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ.

ಸಮ್ಮೇಳನವು ಬರುವ ಮೇ ಕೊನೆ ವಾರದಲ್ಲಿ ಕೊಪ್ಪಳ ನಗರ ಅಥವಾ ಗ್ರಾಮೀಣ ಭಾಗಗಳಲ್ಲಿ ಅಚ್ಚುಕಟ್ಟಾಗಿ ನಡೆಸಲು ಸಭೆಯಲ್ಲಿ ನಿಧ೯ರಿಸಲಾಯಿತು.

ಸಭೆಯಲ್ಲಿ ಪರಿಷತ್ ಜಿಲ್ಲಾಧ್ಯಕ್ಷ ರುದ್ರಪ್ಪ ಆರ್ ಭಂಡಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಾ. ಮಹಾಂತೇಶ್ ನೆಲಾಗಣಿ, ತಾಲುಕು ಅಧ್ಯಕ್ಷ ಮೈಲಾರಪ್ಪ ಉಂಕೀ, ಪದಾಧಿಕಾರಿಗಳಾದ ಶಿವಪ್ರಸಾದ ಹಾದಿಮನಿ, ಶಿವಪ್ಪ ಕೊಗಳಿ, ಬಸವಶ್ರೀ ಸೋಮನಾಳ ಇತರರೂ ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande