
ಬಳ್ಳಾರಿ, 07 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ.09 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಹಳೆಯ ತಾಲ್ಲೂಕು ಕಚೇರಿ ಆವರಣದಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಈ ನೇರ ಸಂದರ್ಶನದಲ್ಲಿ ಎಪ್ಸಿಲಾನ್ ಕಾರ್ಬನ್ ಪ್ರೆöÊ. ಲಿ. ಮತ್ತು ಧ್ರುವ ಸೋಲಾರ್ ಪವರ್ ಕಂಪನಿಗಳು ಭಾಗವಹಿಸಲಿದ್ದು, ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳನ್ನು ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು.
ವಿದ್ಯಾರ್ಹತೆ: ಐಟಿಐ (ಫಿಟ್ಟರ್) ಅಥವಾ ಯಾವುದೇ ಪದವಿ ಹೊಂದಿದ ಪುರುಷ ಅಭ್ಯರ್ಥಿಗಳು ಮಾತ್ರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ, ಸ್ವ-ವಿವರ ಪ್ರತಿ (ಬಯೋಡೇಟಾ) ಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಯಾವುದೇ ಶುಲ್ಕ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದೋಗ ವಿನಿಮಯ ಕಚೇರಿ ಅಥವಾ ಮೊ.7619207762, 9663263086, 7676774293, 6360408094 ಗೆ ಕರೆ ಮಾಡಿ ಸಂಪರ್ಕಿಸಬಹುದು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್