ದಾವಣಗೆರೆ : ಪಾರದರ್ಶಕ ಚುನಾವಣೆಗೆ ತಂತ್ರಜ್ಞಾನ ಬಳಕೆ
ದಾವಣಗೆರೆ, 07 ಏಪ್ರಿಲ್ (ಹಿ.ಸ.) : ಆ್ಯಂಕರ್ : ದಾವಣಗೆರೆ ದಕ್ಷಿಣ ಉಪಚುನಾವಣೆಯನ್ನು ಪಾರದರ್ಶಕವಾಗಿ ನಡೆಸಲು ಕ್ಷೇತ್ರದ ಎಲ್ಲಾ 284 ಮತಗಟ್ಟೆಗಳಲ್ಲಿ ವೆಬ್ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಇವಿಎಂ, ಕಂಟ್ರೋಲ್ ಯೂನಿಟ್ ಹಾಗೂ ವಿವಿಪ್ಯಾಟ್ ಯಂತ್
ದಾವಣಗೆರೆ : ಪಾರದರ್ಶಕ ಚುನಾವಣೆಗೆ ತಂತ್ರಜ್ಞಾನ ಬಳಕೆ


ದಾವಣಗೆರೆ, 07 ಏಪ್ರಿಲ್ (ಹಿ.ಸ.) :

ಆ್ಯಂಕರ್ : ದಾವಣಗೆರೆ ದಕ್ಷಿಣ ಉಪಚುನಾವಣೆಯನ್ನು ಪಾರದರ್ಶಕವಾಗಿ ನಡೆಸಲು ಕ್ಷೇತ್ರದ ಎಲ್ಲಾ 284 ಮತಗಟ್ಟೆಗಳಲ್ಲಿ ವೆಬ್ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಇವಿಎಂ, ಕಂಟ್ರೋಲ್ ಯೂನಿಟ್ ಹಾಗೂ ವಿವಿಪ್ಯಾಟ್ ಯಂತ್ರಗಳನ್ನು ಪೂರ್ಣ ಸಿದ್ಧ ಸ್ಥಿತಿಯಲ್ಲಿ ಇರಿಸಲಾಗಿದ್ದು, ತಾಂತ್ರಿಕ ತೊಂದರೆ ಎದುರಾದರೆ ತಕ್ಷಣ ಬದಲಿಸಲು ಮೀಸಲು ಯಂತ್ರಗಳನ್ನು ಸೆಕ್ಟರ್ ಅಧಿಕಾರಿಗಳ ಬಳಿ ಇರಿಸಲಾಗಿದೆ.

ಮತದಾನದ ನಂತರ ಇವಿಎಂಗಳನ್ನು ಡಿಆರ್ಆರ್ ಶಾಲೆಯ ಸ್ಟ್ರಾಂಗ್ ರೂಮ್ನಲ್ಲಿ ಇರಿಸಲಾಗುತ್ತದೆ. ಮೇ 4 ರಂದು ಇದೇ ಸ್ಥಳದಲ್ಲಿ ಮತ ಎಣಿಕೆ ನಡೆಯಲಿದೆ ಮಾಹಿತಿ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande