
ಶಿವಮೊಗ್ಗ, 08 ಏಪ್ರಿಲ್ (ಹಿ.ಸ.):
ಆ್ಯಂಕರ್:
ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ.09 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಈ ನೇರ ಸಂದರ್ಶನದಲ್ಲಿ ಮುತ್ತೂಟ್ ಮನಿ ಮತ್ತು ಮಾರುತಿ ಸುಜುಕಿ (ಅರೇನಾ) ಕಂಪನಿ ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಪಿಯುಸಿ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa