ಪಾರದರ್ಶಕವಾಗಿ ಮತ್ತು ನಿಖರವಾಗಿ ಜನಗಣತಿ ಮಾಡಲು ಸೂಚನೆ
ಶಿವಮೊಗ್ಗ, 08 ಏಪ್ರಿಲ್ (ಹಿ.ಸ.): ಆ್ಯಂಕರ್: ಜನ ಗಣತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮತ್ತು ನಿಖರವಾಗಿ ನಡೆಸುವಂತೆ ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಶಿವಮೊಗ್ಗ ಜಿಲ್ಲಾಧಿಕಾರಿಳಾದ ಪ್ರಭುಲಿಂಗ ಕವಳಿಕಟ್ಟಿಯವರು ನಿರ್ದೇಶನ ನೀಡಿದರು. ನಗರದ ಬಿ ಹೆಚ್ ರಸ್ತೆಯಲ್ಲಿರುವ ಸರ್ಕಾರಿ ಪದವಿಪೂರ್ವ
Dc


ಶಿವಮೊಗ್ಗ, 08 ಏಪ್ರಿಲ್ (ಹಿ.ಸ.):

ಆ್ಯಂಕರ್:

ಜನ ಗಣತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮತ್ತು ನಿಖರವಾಗಿ ನಡೆಸುವಂತೆ ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಶಿವಮೊಗ್ಗ ಜಿಲ್ಲಾಧಿಕಾರಿಳಾದ ಪ್ರಭುಲಿಂಗ ಕವಳಿಕಟ್ಟಿಯವರು ನಿರ್ದೇಶನ ನೀಡಿದರು.

ನಗರದ ಬಿ ಹೆಚ್ ರಸ್ತೆಯಲ್ಲಿರುವ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ಶಿವಮೊಗ್ಗ ಗ್ರಾಮಾಂತರ ವಿಭಾಗದ ಗಣತಿದಾರರು ಮತ್ತು ಮೇಲ್ವಿಚಾರಕರಿಗೆ ಏರ್ಪಡಿಸಲಾಗಿದ್ದ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಗಣತಿ ಸಂದರ್ಭದಲ್ಲಿ ಪ್ರತಿಯೊಂದು ಕುಟುಂಬದ ಸದಸ್ಯರು ನೀಡುವ ಮಾಹಿತಿ ಅತ್ಯಂತ ನಿಖರವಾಗಿರಬೇಕು. ಉಪಜಾತಿ ಮತ್ತು ಪರ್ಯಾಯ ಹೆಸರುಗಳ ಬಗ್ಗೆ ಗೊಂದಲ ಉಂಟಾಗದAತೆ ಎಚ್ಚರಿಕೆ ವಹಿಸಲು ಸೂಚಿಸಿದ ಅವರು ಸ್ವಯಂ ಗಣತಿ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದರು.

ಜಿಲ್ಲೆಯ ಪ್ರತಿಯೊಂದು ಮನೆ ಮತ್ತು ಪ್ರದೇಶದ ನಿವಾಸಿಗಳನ್ನು ಈ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಒಳಪಡಿಸಬೇಕು. ಯಾವುದೇ ಒಂದು ಕುಟುಂಬವೂ ಗಣತಿಯಿಂದ ವಂಚಿತವಾಗಬಾರದು ಎಂದು ತಿಳಿಸಿದ ಅವರು ಗಣತಿಗಾಗಿ ಬಳಸಲಾಗುವ ಡಿಜಿಟಲ್ ಪೋರ್ಟಲ್‌ಗಳಲ್ಲಿ ದತ್ತಾಂಶವನ್ನು ದಾಖಲಿಸುವಾಗ ತಾಂತ್ರಿಕ ದೋಷಗಳಾಗದಂತೆ ನೋಡಿಕೊಳ್ಳಲು ಸೂಚನೆ ನೀಡಿದರು.

ಸಾರ್ವಜನಿಕರು ನೀಡುವ ವೈಯಕ್ತಿಕ ಮತ್ತು ಸಾಮಾಜಿಕ ಮಾಹಿತಿಯ ಗೌಪ್ಯತೆಯನ್ನು ಕಾಪಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಭರವಸೆ ನೀಡಿದ ಅವರು ತಹಶೀಲ್ದಾರ್‌ಗಳು, ಮೇಲ್ವಿಚಾರಕರು ಮತ್ತು ಗಣತಿದಾರರು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು.

ಈ ವೇಳೆ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಶಿವಮೊಗ್ಗ ತಹಶೀಲ್ದಾರ್ ರಾಜೀವ್, ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande