ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಲು ಶಾಸಕರ ಮನವಿ
ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಲು ಶಾಸಕರ ಮನವಿ
ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಮಹಿಳೆಯರಿಗೆ ಹೊಲಿಗೆ ಯಂತ್ರ ವಿತರಿಸಿದರು.


ಕೋಲಾರ ೦೯ ಏಪ್ರಿಲ್ (ಹಿ.ಸ) :

ಆ್ಯಂಕರ್ : ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಯಾವುದೇ ಕಾರಣಕ್ಕೂ ಮಾರಾಟ ಮಾಡದೆ ಅವುಗಳ ಸದುಪಯೋಗ ಪಡಿಸಿಕೊಂಡು ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಬೇಕು ಮಾರಾಟ ಮಾಡಿದ್ದು ತಿಳಿದರೆ ಕಾನೂನು ಕ್ರಮಕ್ಕೆ ಅಧಿಕಾರಿಗಳು ಮುಂದಾಗುತ್ತಾರೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.

ನಗರದ ಜಿಲ್ಲಾ ಪಂಚಾಯತಿ ಆವರಣದಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಿಸಿ ಮಾತನಾಡಿದ ಅವರು ಕಳೆದ ಬಾರಿ ೨೦ ಫಲಾನುಭವಿಗಳಿಗೆ ನೀಡಲಾಗಿತ್ತು ಅವತ್ತು ತಿಳಿಸಿದ್ದಂತೆ ವಿಶೇಷ ಬೇಡಿಕೆಯೊಂದಿಗೆ ಹೆಚ್ಚುವರಿಯಾಗಿ ೨೪ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ ಇನ್ನು ಹೆಚ್ಚಿಗೆ ಕೊಡುವುದಕ್ಕೆ ಸರ್ಕಾರ ಮತ್ತು ಇಲಾಖೆ ಸಿದ್ದವಿದ್ದೇವೆ ಮಹಿಳೆಯರು ಎಷ್ಟು ಜನ ಅರ್ಜಿಗಳನ್ನು ಹಾಕಿದರು ಅಷ್ಟು ಜನಕ್ಕೆ ಸೌಲಭ್ಯಗಳನ್ನು ಕೊಡಲಾಗುತ್ತದೆ ಎಂದರು

ರಾಜ್ಯದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹೆಚ್ಚಿನ ಪೋತ್ಸಾಹ ನೀಡುತ್ತಿದೆ ಅದರಲ್ಲೂ ದುಡಿಯುವ ಮಹಿಳೆಯರಿಗೆ ವಿಶೇಷವಾಗಿ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಶಕ್ತಿ ತುಂಬಿಸುವ ಕೆಲಸ ಮಾಡುತ್ತಿದೆ ಯಾವುದೇ ಫಲಾನುಭವಿ ಸಹ ಒಂದು ರೂಪಾಯಿ ಸಹ ಲಂಚ ಕೊಡಬಾರದು ಅರ್ಜಿ ಹಾಕಿದವರಿಗೆ ಉಚಿತವಾಗಿಯೇ ಮನೆ ಬಾಗಿಲಿಗೆ ಸೌಲಭ್ಯಗಳನ್ನು ನೀಡುತ್ತೇವೆ ಜೊತೆಗೆ ಇಲ್ಲಿಂದ ನೀವು ಮನೆಗೆ ಹೊಲಿಗೆ ಯಂತ್ರಗಳನ್ನು ತೆಗೆದುಕೊಂಡು ಹೋಗಲು ಆಟೋ ಚಾರ್ಜ್ ಸಹ ನಾನೇ ಸ್ವಂತ ಹಣದಲ್ಲಿ ಕೊಡತ್ತೇನೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಸೂಲೂರು ಗ್ರಾಪಂ ಮಾಜಿ ಅಧ್ಯಕ್ಷ ಪೆಮ್ಮಶೆಟ್ಟಿಹಳ್ಳಿ ಸುರೇಶ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ತಾಲೂಕು ಕೆಡಿಪಿ ಸದಸ್ಯ ಯಲವಾರ ರಾಜಕುಮಾರ್, ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕ್ಷೇತ್ರ ಅಧಿಕಾರಿಗಳಾದ ಅಂಬರೀಶ್ ಕುಮಾರ್, ಬೆಳ್ಳಪ್ಪ ಮುಂತಾದವರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande