ಕುಷ್ಟಗಿ ಪಟ್ಟಣದ ಎಸ್ ವಿ ಸಿ ಪಿಯು ಕಾಲೇಜು ಪ್ರಥಮ
ಕುಷ್ಟಗಿ, 09 ಏಪ್ರಿಲ್ (ಹಿ.ಸ.) : ಆ್ಯಂಕರ್ : ದ್ವಿತೀಯ ಪಿಯುಸಿ (ವಿಜ್ಞಾನ) ಪರೀಕ್ಷಾ ಫಲಿತಾಂಶದಲ್ಲಿ ಕುಷ್ಟಗಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಗಳಿಸಿ ಉನ್ನತ ಸಾಧನೆ ದಾಖಲಿಸಿದೆ ಎಂದು ಸಂಸ್ಥೆಯ ಅಧ್ಯಕ್ಷ ಸಿ ವಿ ಚಂದ್ರಶೇಖರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ತಾಲೂ
ಕುಷ್ಟಗಿ ಪಟ್ಟಣದ  ಎಸ್ ವಿ ಸಿ ಪಿಯು ಕಾಲೇಜು


ಕುಷ್ಟಗಿ ಪಟ್ಟಣದ  ಎಸ್ ವಿ ಸಿ ಪಿಯು ಕಾಲೇಜು


ಕುಷ್ಟಗಿ, 09 ಏಪ್ರಿಲ್ (ಹಿ.ಸ.) :

ಆ್ಯಂಕರ್ : ದ್ವಿತೀಯ ಪಿಯುಸಿ (ವಿಜ್ಞಾನ) ಪರೀಕ್ಷಾ ಫಲಿತಾಂಶದಲ್ಲಿ ಕುಷ್ಟಗಿ ತಾಲೂಕಿಗೆ ಪ್ರಥಮ ಸ್ಥಾನವನ್ನು ಗಳಿಸಿ ಉನ್ನತ ಸಾಧನೆ ದಾಖಲಿಸಿದೆ ಎಂದು ಸಂಸ್ಥೆಯ ಅಧ್ಯಕ್ಷ ಸಿ ವಿ ಚಂದ್ರಶೇಖರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ತಾಲೂಕಿನ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನಗಳನ್ನು ಎಸ್ವಿಸಿ ಸಂಸ್ಥೆಯ ವೀರೇಶ್ (94.33%), ಕಿರಣ್ (92.83%) ಹಾಗೂ ವಿನೋದ್ (91.83%) ತಮ್ಮದಾಗಿಸಿಕೊಂಡಿದ್ದಾರೆ.

ಐದು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ 13 ವಿದ್ಯಾರ್ಥಿಗಳು ಪ್ರಥಮ ದರ್ಜೆ ಮತ್ತು ಇಬ್ಬರು ದ್ವಿತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಳೆದ 2024 ಶೈಕ್ಷಣಿಕ ವರ್ಷದಲ್ಲಿ ಆರಂಭಗೊಂಡ ಕಾಲೇಜು ಪ್ರಥಮ ಪರೀಕ್ಷಾ ಫಲಿತಾಂಶದಲ್ಲಿ ಐತಿಹಾಸಿಕ ಸಾಧನೆ ದಾಖಲಿಸಿರುವುದು ಕುಷ್ಟಗಿ ಪಟ್ಟಣಕ್ಕೆ ಹೆಮ್ಮೆ ತಂದಿದೆ. ಇಂತಹ ಸಾಧನೆ ಕೊಪ್ಪಳ ಜಿಲ್ಲೆಯ ಇತಿಹಾಸದಲ್ಲಿಯೇ ಪ್ರಥಮ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande