
ಕೊಪ್ಪಳ, 09 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿನಲ್ಲಿ ಕುಸುಬೆ ಖರೀದಿಸಲು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ.
ಸರ್ಕಾರದ ಆದೇಶದನ್ವಯ ಸನ್ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ಕುಸುಬೆಯನ್ನು ಪ್ರತಿ ಕ್ವಿಂಟಾಲ್ಗೆ ರೂ. 6,540 ರಂತೆ ಗರಿಷ್ಠ 6,923 ಮೆಟ್ರಿಕ್ ಟನ್ ಎಫ್.ಎ.ಕ್ಯೂ. ಗುಣಮಟ್ಟದ ಕುಸುಬೆಯನ್ನು ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಕೊಪ್ಪಳ ಜಿಲ್ಲೆಯ ರೈತರಿಂದ ಖರೀದಿಸುವ ಕುರಿತು ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಸಭೆಯನ್ನು ಜರುಗಿಸಿ, ತೀರ್ಮಾನಿಸಿದಂತೆ ಜಿಲ್ಲೆಯ ಕೊಪ್ಪಳ ತಾಲ್ಲೂಕಿನ ಅಳವಂಡಿ, ಯಲಬುರ್ಗಾ ತಾಲ್ಲೂಕಿನ ಬೇವೂರು ಹಾಗೂ ಕುಕನೂರು ತಾಲ್ಲೂಕಿನ ಮಂಡಳಗೇರಿ, ಈ ಮೂರು ಸ್ಥಳಗಳಲ್ಲಿ ಕುಸುಬೆ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿರುತ್ತದೆ.
ಕೆಓಎಫ್ ಅಡಿಯಲ್ಲಿ ಓಜಿಸಿಎಸ್ ಅಳವಂಡಿ, ಓಜಿಸಿಎಸ್ ಬೇವೂರು ಮತ್ತು ಓಜಿಸಿಎಸ್ ಮಂಡಳಗೇರಿ, ಈ ಮೂರು ಖರೀದಿ ಕೇಂದ್ರಗಳ ಏಜನ್ಸಿಗಳಾಗಿವೆ. ಕೊಪ್ಪಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಸಿದ್ದಯ್ಯಸ್ವಾಮಿ ಮೊ.ಸಂ: 9902224089 ಅವರು ಕೊಪ್ಪಳ ತಾಲ್ಲೂಕಿನ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಯಲಬುರ್ಗಾ ಕೇಂದ್ರ ಕಛೇರಿ ಕುಕನೂರಿನ ಕಾರ್ಯದರ್ಶಿ ಗುರುಸ್ವಾಮಿ ಗುಡಿ ಮೊ.ಸಂ: ಮೊ.ಸ: 9972054874 ಅವರು ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕುಗಳ ನೋಡಲ್ ಅಧಿಕಾರಿಗಳಾಗಿದ್ದಾರೆ.
ಪ್ರತಿ ಎಕರೆಗೆ 05 ಕ್ವಿಂಟಾಲ್ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಾಲ್ನಂತೆ ಕುಸುಬೆ ಉತ್ಪನ್ನವನ್ನು ಖರೀದಿಸಲಾಗುತ್ತದೆ. ಎಫ್.ಎ.ಕ್ಯೂ. ಗುಣಮಟ್ಟದ ಕುಸುಬೆಯನ್ನು ಮಾತ್ರ ಖರೀದಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಎಣ್ಣೆ ಬೀಜ ಬೇಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಯಮಿತ ರಾಯಚೂರು ವಿಭಾಗೀಯ ಕಛೇರಿ ಕೊಪ್ಪಳ (9739074040) ಇವರನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಕೊಪ್ಪಳಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಸದಸ್ಯಕಾರ್ಯದರ್ಶಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್