
ಧಾರವಾಡ, 09 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಧಾರವಾಡ ಶಹರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದ್ವಿಚಕ್ರ ವಾಹನ ಕಳ್ಳತನ ನಡೆಸುತ್ತಿದ್ದ ಒಬ್ಬ ಆರೋಪಿಯನ್ನು ಧಾರವಾಡ ಶಹರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ, ಅವನಿಂದ ಒಟ್ಟು ₹2,35,000 ಮೌಲ್ಯದ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತನನ್ನು ಶಿವಾನಂದ (33), ಕಮಲಾಪೂರ ನಿವಾಸಿ ಎಂದು ಗುರುತಿಸಲಾಗಿದೆ. ಈತ ಹಲವು ಕಡೆಗಳಲ್ಲಿ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳಲ್ಲಿ ತೊಡಗಿದ್ದನೆಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಪೊಲೀಸರ ಮಾಹಿತಿ ಪ್ರಕಾರ, ಏಪ್ರಿಲ್ 8ರಂದು ಆರೋಪಿಯನ್ನು ಬಂಧಿಸಿದ ನಂತರ ವಿಚಾರಣೆ ನಡೆಸಿದಾಗ, ಧಾರವಾಡ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಎರಡು ಬೈಕ್ಗಳು, ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾಗಿದ್ದ ಒಂದು ಬೈಕ್ ಹಾಗೂ ಇತರೆ ಕಡೆಗಳಲ್ಲಿ ಕಳ್ಳತನವಾಗಿದ್ದ ನಾಲ್ಕು ಬೈಕ್ಗಳನ್ನು ಸೇರಿ ಒಟ್ಟು 7 ವಾಹನಗಳನ್ನು ಪತ್ತೆಹಚ್ಚಲಾಗಿದೆ.
ಈ ಕಾರ್ಯಾಚರಣೆಯನ್ನು ಪೊಲೀಸ್ ಇನ್ಸ್ಪೆಕ್ಟರ್ ಗುರುನಾಥ ಚವ್ಹಾಣ ನೇತೃತ್ವದಲ್ಲಿ ಅಪರಾಧ ವಿಭಾಗದ ತಂಡ ಯಶಸ್ವಿಯಾಗಿ ನಡೆಸಿದೆ. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa