ಬನಶಂಕರಿ ಜಂಕ್ಷನ್ನಲ್ಲಿ ಪಾದಚಾರಿ ಮೇಲ್ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ
ಬೆಂಗಳೂರು, 01 ಮೇ (ಹಿ.ಸ.) : ಆ್ಯಂಕರ್ : ಬೆಂಗಳೂರು ನಗರದ ಅತ್ಯಂತ ಜನದಟ್ಟಣೆಯ ಪ್ರದೇಶಗಳಲ್ಲಿ ಒಂದಾದ ಬನಶಂಕರಿ ಜಂಕ್ಷನ್ ನಲ್ಲಿ ಪಾದಚಾರಿಗಳ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಬಹುಕಾಲದ ನಿರೀಕ್ಷೆಯಾಗಿದ್ದ ಸ್ಕೈವಾಕ್ (ಪಾದಚಾರಿ ಮೇಲ್ಸೇತುವೆ) ನಿರ್ಮಾಣಕ್ಕೆ ಶುಕ್ರವಾರ ಶಂಕುಸ್ಥಾಪನೆ ನೆರವೇರಿತು. ಬ
Foundation stone laid for


ಬೆಂಗಳೂರು, 01 ಮೇ (ಹಿ.ಸ.) :

ಆ್ಯಂಕರ್ : ಬೆಂಗಳೂರು ನಗರದ ಅತ್ಯಂತ ಜನದಟ್ಟಣೆಯ ಪ್ರದೇಶಗಳಲ್ಲಿ ಒಂದಾದ ಬನಶಂಕರಿ ಜಂಕ್ಷನ್ ನಲ್ಲಿ ಪಾದಚಾರಿಗಳ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಬಹುಕಾಲದ ನಿರೀಕ್ಷೆಯಾಗಿದ್ದ ಸ್ಕೈವಾಕ್ (ಪಾದಚಾರಿ ಮೇಲ್ಸೇತುವೆ) ನಿರ್ಮಾಣಕ್ಕೆ ಶುಕ್ರವಾರ ಶಂಕುಸ್ಥಾಪನೆ ನೆರವೇರಿತು.

ಬನಶಂಕರಿ ದೇವಾಲಯ, ಬಸ್ ನಿಲ್ದಾಣ ಹಾಗೂ ಮೆಟ್ರೋ ನಿಲ್ದಾಣಗಳಿಗೆ ಪ್ರತಿದಿನ ಆಗಮಿಸುವ ಸಾವಿರಾರು ಜನರಿಗೆ—ವಿಶೇಷವಾಗಿ ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ—ಈ ಸ್ಕೈವಾಕ್ ಮಹತ್ತರ ಅನುಕೂಲ ಒದಗಿಸುವ ನಿರೀಕ್ಷೆಯಿದೆ. ಸಂಚಾರ ದಟ್ಟಣೆ ಹೆಚ್ಚಿರುವ ಈ ಭಾಗದಲ್ಲಿ ಪಾದಚಾರಿಗಳ ಸುರಕ್ಷತೆ ಹೆಚ್ಚಿಸಲು ಇದು ಪ್ರಮುಖ ಹೆಜ್ಜೆಯಾಗಿ ಕಾಣಲಾಗಿದೆ.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಪ್ರತಿ ಪಕ್ಷದ ನಾಯಕ ಆರ್.ಅಶೋಕ, ಸಚಿವ ರಾಮಲಿಂಗಾರೆಡ್ಡಿ, ಸಂಸದ ತೇಜಸ್ವಿ ಸೂರ್ಯ, ಶಾಸಕ ಸತೀಶ್ ರೆಡ್ಡಿ ಹಾಗೂ ಸಿ.ಕೆ. ರಾಮಮೂರ್ತಿ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಿದ್ದರು.

ಇದೇ ವೇಳೆ ಯೋಜನೆ ನಿಗದಿತ ಅವಧಿಯೊಳಗೆ ಶೀಘ್ರ ಪೂರ್ಣಗೊಂಡು ಸಾರ್ವಜನಿಕ ಬಳಕೆಗೆ ಮುಕ್ತವಾಗುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅಶೋಕ ಒತ್ತಾಯಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande