ಆಲಗೂರಿನಲ್ಲಿ ಪಂಚಕಲ್ಯಾಣ ಮಹೋತ್ಸವದ ಅಂಗವಾಗಿ ಭವ್ಯ ಕಾರ್ಯಕ್ರಮ
ಬಾಗಲಕೋಟೆ, 01 ಮೇ (ಹಿ.ಸ.) : ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಆಲಗೂರು ಗ್ರಾಮದಲ್ಲಿ ಜರುಗಿದ ಪಂಚಕಲ್ಯಾಣ ಪ್ರತಿಷ್ಠಾನ ಮಹೋತ್ಸವ ಹಾಗೂ ಮಸ್ತಕಾಭಿಷೇಕ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮ ಭಕ್ತರ ಮನಸೆಳೆಯುವಂತೆ ಭವ್ಯವಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಶಾಸಕ ಆ
ಆಲಗೂರಿನಲ್ಲಿ ಪಂಚಕಲ್ಯಾಣ ಮಹೋತ್ಸವದ ಅಂಗವಾಗಿ ಭವ್ಯ ಕಾರ್ಯಕ್ರಮ


ಬಾಗಲಕೋಟೆ, 01 ಮೇ (ಹಿ.ಸ.) :

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಆಲಗೂರು ಗ್ರಾಮದಲ್ಲಿ ಜರುಗಿದ ಪಂಚಕಲ್ಯಾಣ ಪ್ರತಿಷ್ಠಾನ ಮಹೋತ್ಸವ ಹಾಗೂ ಮಸ್ತಕಾಭಿಷೇಕ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ಕಾರ್ಯಕ್ರಮ ಭಕ್ತರ ಮನಸೆಳೆಯುವಂತೆ ಭವ್ಯವಾಗಿ ನಡೆಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಶಾಸಕ ಆನಂದ ನ್ಯಾಮಗೊಂಡ, ಧಾರ್ಮಿಕ ಕಾರ್ಯಕ್ರಮಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ ಎಂದು ಅಭಿಪ್ರಾಯಪಟ್ಟರು. ಇಂತಹ ಮಹೋತ್ಸವಗಳು ನಮ್ಮ ಪರಂಪರೆ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಸಹಕಾರಿಯಾಗುತ್ತವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿ, ಶಾಸಕ ಲಕ್ಷ್ಮಣ್ ಸವದಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಮೆರುಗು ತಂದರು. ಅವರು ಕಾರ್ಯಕ್ರಮದ ಯಶಸ್ಸಿಗೆ ಅಭಿನಂದನೆ ಸಲ್ಲಿಸಿ, ಸಮಾಜದಲ್ಲಿ ಇಂತಹ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಉತ್ತೇಜಿಸಬೇಕೆಂದು ಹೇಳಿದರು.

ಪಂಚಕಲ್ಯಾಣ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ವಿವಿಧ ಧಾರ್ಮಿಕ ವಿಧಿ ವಧಾನಗಳು, ಮಸ್ತಕಾಭಿಷೇಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣ ಮಾಡಿದ್ದು, ಭಕ್ತರಲ್ಲಿ ಅಪಾರ ಭಕ್ತಿಭಾವ ಮೂಡಿಸಿದವು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande