ಎಸ್ಎಸ್ಎಲ್ಸಿ ಪರೀಕ್ಷೆ : ಅಲ್ಪಸಂಖ್ಯಾತ ವಸತಿ ಶಾಲೆಗಳಿಗೆ ಶೇ.100 ಫಲಿತಾಂಶ
ಬಾಗಲಕೋಟೆ, 01 ಮೇ (ಹಿ.ಸ.) : ಆ್ಯಂಕರ್ : ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ಒಳಪಟ್ಟಿರುವ ವಸತಿ ಶಾಲೆಗಳು ಶೇ.100 ಫಲಿತಾಂಶ ದಾಖಲಿಸಿ ಗಮನಾರ್ಹ ಸಾಧನೆ ಮಾಡಿವೆ. ವಿದ್ಯಾರ್ಥಿಗಳ ಈ ಸಾಧನೆಗೆ ಬಾಗಲಕೋಟೆ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಶಿವಾನಂದ ಪ
ಸಂತಸ


ಬಾಗಲಕೋಟೆ, 01 ಮೇ (ಹಿ.ಸ.) :

ಆ್ಯಂಕರ್ : ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗೆ ಒಳಪಟ್ಟಿರುವ ವಸತಿ ಶಾಲೆಗಳು ಶೇ.100 ಫಲಿತಾಂಶ ದಾಖಲಿಸಿ ಗಮನಾರ್ಹ ಸಾಧನೆ ಮಾಡಿವೆ. ವಿದ್ಯಾರ್ಥಿಗಳ ಈ ಸಾಧನೆಗೆ ಬಾಗಲಕೋಟೆ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿ ಶಿವಾನಂದ ಪಟ್ಟಣಶೆಟ್ಟಿ ಪ್ರಕಟಣೆ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಜಿಲ್ಲೆಯ ಮೌಲಾನಾ ಅಜಾದ್ ಮಾದರಿ ವಸತಿ ಶಾಲೆಗಳಾದ ಬಾದಾಮಿ, ಜಮಖಂಡಿ, ಇಳಕಲ್, ಬನಹಟ್ಟಿ, ಮುಧೋಳ, ತೇರದಾಳ, ಬೀಳಗಿ ಹಾಗೂ ನವನಗರದಲ್ಲಿನ ಎರಡು ಶಾಲೆಗಳು ಸೇರಿದಂತೆ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳು ಶೇಕಡಾ 100 ಫಲಿತಾಂಶ ಪಡೆದಿರುವುದು ವಿಶೇಷವಾಗಿದೆ.

ಇದಲ್ಲದೆ, ಎಪಿಜೆ ಅಬ್ದುಲ್ ಕಲಾಂ ಸಿಬಿಎಸ್ಇ ಶಾಲೆ ಹಾಗೂ ಹುನಗುಂದ, ಬೀಳಗಿ, ಜಮಖಂಡಿ ಮತ್ತು ತೇರದಾಳದಲ್ಲಿರುವ ಮುರಾರ್ಜಿ ದೇಸಾಯಿ ಮೆಟ್ರಿಕ್ ಪೂರ್ವ ವಸತಿ ಶಾಲೆಗಳ ವಿದ್ಯಾರ್ಥಿಗಳು ಕೂಡ ಶೇ.100 ಫಲಿತಾಂಶ ಸಾಧಿಸಿದ್ದಾರೆ. ಜಿಲ್ಲೆಯ ಐದು ಅಲ್ಪಸಂಖ್ಯಾತ ವಸತಿ ನಿಲಯಗಳ ವಿದ್ಯಾರ್ಥಿಗಳೂ ಈ ಸಾಧನೆಯಲ್ಲಿ ಪಾಲ್ಗೊಂಡಿದ್ದಾರೆ.

ವಿದ್ಯಾರ್ಥಿಗಳ ಈ ಅದ್ಭುತ ಸಾಧನೆಗೆ ಶಿಕ್ಷಕರ ಪರಿಶ್ರಮ, ವಿಶೇಷ ಬೋಧನಾ ಕ್ರಮಗಳು ಹಾಗೂ ಅಧಿಕಾರಿಗಳ ನಿಯಮಿತ ಶಾಲಾ ಭೇಟಿಗಳ ಮೂಲಕ ನೀಡಿದ ಮಾರ್ಗದರ್ಶನ ಪ್ರಮುಖ ಕಾರಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗುವಂತೆ ಉತ್ತಮ ವಾತಾವರಣ ಕಲ್ಪಿಸಿರುವುದೂ ಯಶಸ್ಸಿಗೆ ನೆರವಾಗಿದೆ.

ಈ ಸಾಧನೆಯ ಮೂಲಕ ಬಾಗಲಕೋಟೆ ಜಿಲ್ಲೆಯ ಅಲ್ಪಸಂಖ್ಯಾತ ವಸತಿ ಶಾಲೆಗಳು ರಾಜ್ಯ ಮಟ್ಟದಲ್ಲಿ ಮಾದರಿಯಾಗಿ ಹೊರಹೊಮ್ಮಿದ್ದು, ವಿದ್ಯಾರ್ಥಿಗಳ ಭವಿಷ್ಯಕ್ಕೆ ಹೊಸ ಬೆಳಕು ಸಾಧನೆಗೆ ದಾರಿದೀಪವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande