ಕಾರ್ಮಿಕರ ಶ್ರಮವೇ ದೇಶದ ಪ್ರಗತಿಯ ಆಧಾರ : ಶೋಭಾ ಕರಂದ್ಲಾಜೆ
ಹುಬ್ಬಳ್ಳಿ, 01 ಮೇ (ಹಿ.ಸ.) : ಆ್ಯಂಕರ್ : ಅಂತಾರಾಷ್ಟ್ರೀಯ ಕಾರ್ಮಿಕರ ದಿನ ಅಂಗವಾಗಿ ಹುಬ್ಬಳ್ಳಿ ಹೆಬಸೂರು ಭವನದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾಗವಹಿಸಿ ಕಾರ್ಮಿಕ ವರ್ಗದ ಸೇವೆ ಮತ್ತು ಸಮರ್ಪಣೆಯನ್ನು ಶ್ಲಾಘಿಸಿದರು. “ಕಾಯಕವೇ ಕೈಲಾಸ” ಎಂಬ ತತ್ವದಲ್ಲಿ ನಂಬಿ
ಶೋಭಾ ಕರಂದ್ಲಾಜೆ


ಹುಬ್ಬಳ್ಳಿ, 01 ಮೇ (ಹಿ.ಸ.) :

ಆ್ಯಂಕರ್ : ಅಂತಾರಾಷ್ಟ್ರೀಯ ಕಾರ್ಮಿಕರ ದಿನ ಅಂಗವಾಗಿ ಹುಬ್ಬಳ್ಳಿ ಹೆಬಸೂರು ಭವನದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾಗವಹಿಸಿ ಕಾರ್ಮಿಕ ವರ್ಗದ ಸೇವೆ ಮತ್ತು ಸಮರ್ಪಣೆಯನ್ನು ಶ್ಲಾಘಿಸಿದರು.

“ಕಾಯಕವೇ ಕೈಲಾಸ” ಎಂಬ ತತ್ವದಲ್ಲಿ ನಂಬಿಕೆ ಇಟ್ಟು ದೇಶದ ಅಭಿವೃದ್ಧಿಗಾಗಿ ನಿರಂತರವಾಗಿ ದುಡಿಯುತ್ತಿರುವ ಕಾರ್ಮಿಕರ ಪಾತ್ರ ಅತ್ಯಂತ ಮಹತ್ವದ್ದು. ರಾಷ್ಟ್ರ ನಿರ್ಮಾಣದಲ್ಲಿ ಅವರ ಕೊಡುಗೆ ಅಪಾರವಾಗಿದ್ದು, ಅವರ ಶ್ರಮವೇ ದೇಶದ ಪ್ರಗತಿಯ ಆಧಾರ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಇಎಸ್ಐ ಮತ್ತು ಇಪಿಎಫ್ಒ ಯೋಜನೆಗಳ ಫಲಾನುಭವಿಗಳಿಗೆ ಪಿಂಚಣಿ ಮಂಜೂರಾತಿ ಆದೇಶ ಪತ್ರಗಳನ್ನು ವಿತರಿಸಲಾಯಿತು. ಸರ್ಕಾರ ಒದಗಿಸುತ್ತಿರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಚಿವೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ, ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ್, ಕರ್ನಾಟಕ–ಗೋವಾ ವಿಭಾಗದ ಹೆಚ್ಚುವರಿ ಕೇಂದ್ರ ಭವಿಷ್ಯ ನಿಧಿ ಆಯುಕ್ತ ಜಯ್ ಕುಮಾರ್ ಸೇರಿದಂತೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande