ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ ; ಆರು ಮಂದಿ ದುರ್ಮರಣ
ತಿರುಪ್ಪೂರ್, 13 ಮೇ (ಹಿ.ಸ.) : ಆ್ಯಂಕರ್ : ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ವೆಲ್ಲಕೋವಿಲ್–ಕರೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಪೊಲೀಸ್ ತಪಾಸಣಾ ಕೇಂದ್ರದ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಸಾವನ
Accident


ತಿರುಪ್ಪೂರ್, 13 ಮೇ (ಹಿ.ಸ.) :

ಆ್ಯಂಕರ್ : ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ವೆಲ್ಲಕೋವಿಲ್–ಕರೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಪೊಲೀಸ್ ತಪಾಸಣಾ ಕೇಂದ್ರದ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ಮಾಹಿತಿಯ ಪ್ರಕಾರ, ರಸ್ತೆ ಡಿವೈಡರ್ಗೆ ಡಿಕ್ಕಿ ಹೊಡೆದು ನಿಂತಿದ್ದ ಟ್ರಕ್ ಅನ್ನು ತೆರವುಗೊಳಿಸುವ ಕಾರ್ಯದಲ್ಲಿ ಪೊಲೀಸ್ ಸಿಬ್ಬಂದಿ ರವಿಚಂದ್ರನ್ ತೊಡಗಿಸಿಕೊಂಡಿದ್ದರು. ಈ ವೇಳೆ ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಟ್ರಕ್ಗೆ ಭಾರೀ ಪ್ರಮಾಣದಲ್ಲಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ತೀವ್ರತೆಗೆ ಪೊಲೀಸ್ ಸಿಬ್ಬಂದಿ ರವಿಚಂದ್ರನ್, ಟ್ರಕ್ ಚಾಲಕ ಹಾಗೂ ಕಾರಿನಲ್ಲಿದ್ದ ನಾಲ್ವರು ಸೇರಿ ಒಟ್ಟು ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ಮಾಹಿತಿ ತಿಳಿದ ತಕ್ಷಣ ಪೋಲಿಸ್ ಅಧಿಕಾರಿಗಳು ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡರು. ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಮೃತರ ಗುರುತು ಪತ್ತೆ ಮಾಡುವ ಕಾರ್ಯ ಮುಂದುವರಿದಿದೆ.

ಈ ಕುರಿತು ವೆಲ್ಲಕೋವಿಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿದಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande