ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ
ಬೆಂಗಳೂರು, 13 ಮೇ (ಹಿ.ಸ.) : ಆ್ಯಂಕರ್ : ಜನಪ್ರಿಯ ಕನ್ನಡ ಕಿರುತೆರೆ ಮತ್ತು ಚಲನಚಿತ್ರ ನಟ ದಿಲೀಪ್ ರಾಜ್ ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು. ಅವರ ಅಕಾಲಿಕ ನಿಧನ ಕನ್ನಡ ಚಿತ್ರರಂಗ ಹಾಗೂ ಕಿರುತೆರೆ ವಲಯದಲ್ಲಿ ದುಃಖದ ಛಾಯೆ ಮೂಡಿಸಿದೆ. ‘ಹಿ
Late.dilip raj


ಬೆಂಗಳೂರು, 13 ಮೇ (ಹಿ.ಸ.) :

ಆ್ಯಂಕರ್ : ಜನಪ್ರಿಯ ಕನ್ನಡ ಕಿರುತೆರೆ ಮತ್ತು ಚಲನಚಿತ್ರ ನಟ ದಿಲೀಪ್ ರಾಜ್ ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು. ಅವರ ಅಕಾಲಿಕ ನಿಧನ ಕನ್ನಡ ಚಿತ್ರರಂಗ ಹಾಗೂ ಕಿರುತೆರೆ ವಲಯದಲ್ಲಿ ದುಃಖದ ಛಾಯೆ ಮೂಡಿಸಿದೆ.

‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯ ಮೂಲಕ ಮತ್ತೆ ಕಿರುತೆರೆಗೆ ಪ್ರವೇಶ ಮಾಡಿದ್ದ ದಿಲೀಪ್ ರಾಜ್, ತಮ್ಮ ಅಭಿನಯದಿಂದ ಅಪಾರ ಜನಪ್ರಿಯತೆ ಗಳಿಸಿದ್ದರು. ಆ ಧಾರಾವಾಹಿಯಲ್ಲಿನ ಅವರ ಪಾತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಮೆಚ್ಚುಗೆ ವ್ಯಕ್ತವಾಗಿತ್ತು.

2005ರಲ್ಲಿ ಬಿಡುಗಡೆಯಾದ ‘ಬಾಯ್ಫ್ರೆಂಡ್’ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸಿದ್ದ ಅವರು, ನಂತರ ಹಲವು ಸಿನಿಮಾಗಳಲ್ಲಿ ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸಿ ಗಮನ ಸೆಳೆದಿದ್ದರು. ವಿಶೇಷವಾಗಿ ‘ಮಿಲನ’ ಚಿತ್ರದಲ್ಲಿನ ಖಳನಾಯಕನ ಪಾತ್ರ ಅವರಿಗೆ ವಿಶಿಷ್ಟ ಗುರುತನ್ನು ತಂದಿತ್ತು.

‘ಸುಗ್ರೀವ’, ‘ಗೆಳೆಯ’, ‘ಯೂಟರ್ನ್’ ಸೇರಿದಂತೆ ಸುಮಾರು 28ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ದಿಲೀಪ್ ರಾಜ್, ನಟನೆಯ ಜೊತೆಗೆ ನಿರ್ಮಾಪಕರಾಗಿಯೂ ಗುರುತಿಸಿಕೊಂಡಿದ್ದರು. ಇತ್ತೀಚೆಗೆ ಪ್ರಸಾರವಾಗುತ್ತಿದ್ದ ಜನಪ್ರಿಯ ಧಾರಾವಾಹಿ ‘ಕೃಷ್ಣ ರುಕ್ಕು’ ನಿರ್ಮಾಣ ಕಾರ್ಯದಲ್ಲೂ ತೊಡಗಿಸಿಕೊಂಡಿದ್ದರು.

‘ಮನೆಯೊಂದು ಮೂರು ಬಾಗಿಲು’, ‘ರಥಸಪ್ತಮಿ’, ‘ಪ್ರೀತಿಗಾಗಿ’ ಮೊದಲಾದ ಧಾರಾವಾಹಿಗಳಲ್ಲಿಯೂ ಅವರು ಅಭಿನಯಿಸಿ ಮನೆಮಾತಾಗಿದ್ದರು. ಕೊನೆಯದಾಗಿ ‘ಲವ್ ಮಾಕ್ಟೇಲ್ 3’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.

ಇಂದು ಮುಂಜಾನೆ ಏಕಾಏಕಿ ಹೃದಯಾಘಾತಕ್ಕೊಳಗಾದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ.

ದಿಲೀಪ್ ರಾಜ್ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕ ಕಲಾವಿದರು, ನಿರ್ದೇಶಕರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande