ಅಸ್ಸಾಂ ಪೊಲೀಸರ ವಿಚಾರಣೆಗೆ ಮತ್ತೆ ಹಾಜರಾದ ಪವನ್ ಖೇರಾ
ಗುವಾಹಟಿ, 14 ಮೇ (ಹಿ.ಸ.) : ಆ್ಯಂಕರ್ : ಕಾಂಗ್ರೆಸ್ ನಾಯಕ ಪವನ್ ಖೇರಾ ಇಂದು ಎರಡನೇ ದಿನವೂ ಅಸ್ಸಾಂ ಪೊಲೀಸರ ಅಪರಾಧ ತನಿಖಾ ವಿಭಾಗದ ಕಚೇರಿಗೆ ವಿಚಾರಣೆಗೆ ಹಾಜರಾದರು. ನಿನ್ನೆ ರಾತ್ರಿ ಸುಮಾರು ಹತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಳಿಕ ಅವರನ್ನು ಬಿಡುಗಡೆ ಮಾಡಲಾಗಿತ್ತು. ಇಂದು ಮತ್ತೆ ವಿಚಾರಣೆಗೆ
ಪವನ ಖೇರಾ


ಗುವಾಹಟಿ, 14 ಮೇ (ಹಿ.ಸ.) :

ಆ್ಯಂಕರ್ : ಕಾಂಗ್ರೆಸ್ ನಾಯಕ ಪವನ್ ಖೇರಾ ಇಂದು ಎರಡನೇ ದಿನವೂ ಅಸ್ಸಾಂ ಪೊಲೀಸರ ಅಪರಾಧ ತನಿಖಾ ವಿಭಾಗದ ಕಚೇರಿಗೆ ವಿಚಾರಣೆಗೆ ಹಾಜರಾದರು.

ನಿನ್ನೆ ರಾತ್ರಿ ಸುಮಾರು ಹತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಳಿಕ ಅವರನ್ನು ಬಿಡುಗಡೆ ಮಾಡಲಾಗಿತ್ತು. ಇಂದು ಮತ್ತೆ ವಿಚಾರಣೆಗೆ ಆಗಮಿಸಿದ ವೇಳೆ ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ನೇತೃತ್ವದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಕಚೇರಿ ಹೊರಭಾಗದಲ್ಲೇ ಕಾಯುತ್ತಿದ್ದರು.

ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ವಿರುದ್ಧ ಮೂರು ವಿದೇಶಿ ಪಾಸ್ಪೋರ್ಟ್ ಹೊಂದಿದ್ದಾರೆ ಎಂಬ ಆರೋಪಗಳನ್ನು ಪವನ್ ಖೇರಾ ಮಾಡಿದ್ದರು. ಈ ಸಂಬಂಧ ದಾಖಲಾಗಿರುವ ದೂರಿನ ಹಿನ್ನೆಲೆ ಅವರನ್ನು ವಿಚಾರಣೆಗೆ ಕರೆಯಲಾಗಿದೆ.

ನಿನ್ನೆ ವಿಚಾರಣೆಗೆ ಹಾಜರಾಗುವ ವೇಳೆ ಮಾತನಾಡಿದ ಪವನ್ ಖೇರಾ, “ನ್ಯಾಯಾಂಗದ ಮೇಲೆ ಸಂಪೂರ್ಣ ನಂಬಿಕೆ ಇದೆ. ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ” ಎಂದು ಹೇಳಿದ್ದಾರೆ.

ವಿಚಾರಣೆಯ ಸಮಯದಲ್ಲಿ ಅವರಿಗೆ ಚಹಾ ಜೊತೆಗೆ ಅಸ್ಸಾಮಿ ಪೇಡಾ ಸಿಹಿತಿಂಡಿ ನೀಡಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಹಿಮಂತ್ ಬಿಸ್ವ ಶರ್ಮಾ, “ಅಸ್ಸಾಮಿ ಪೇಡಾ ತುಂಬಾ ರುಚಿಯಾಗಿದೆ” ಎಂದು ಹೇಳಿದ್ದಾರೆ.

ಗುವಾಹಟಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಆರೋಪಗಳನ್ನು ಮಾಡಿದ ಬಳಿಕ ಪವನ್ ಖೇರಾ ಕೆಲಕಾಲ ಸಾರ್ವಜನಿಕವಾಗಿ ಕಾಣಿಸಿಕೊಂಡಿರಲಿಲ್ಲ.

ಬಂಧನ ಭೀತಿಯ ನಡುವೆ ಪವನ್ ಖೇರಾ ಮೊದಲು ತೆಲಂಗಾಣ ಉಚ್ಚ ನ್ಯಾಯಾಲಯ ಮತ್ತು ಬಳಿಕ ಸುಪ್ರೀಂ ನ್ಯಾಯಾಲಯದ ಮೊರೆ ಹೋಗಿ ನಿರೀಕ್ಷಣಾ ಜಾಮೀನು ಕೋರಿದ್ದರು. ಸರ್ವೋಚ್ಚ ನ್ಯಾಯಾಲಯದ ಸೂಚನೆಯಂತೆ ಗುವಾಹಟಿ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರೂ ಜಾಮೀನು ನಿರಾಕರಿಸಲಾಯಿತು.

ನಂತರ ಮತ್ತೆ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಖೇರಾಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ಕೆಲವು ಷರತ್ತುಗಳನ್ನು ವಿಧಿಸಲಾಗಿದೆ. ಅದರಂತೆ ಅವರು ಈಗ ಅಪರಾಧ ತನಿಖಾ ವಿಭಾಗದ ಮುಂದೆ ವಿಚಾರಣೆಗೆ ಹಾಜರಾಗುತ್ತಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande