ಕುಡಿಯುವ ನೀರು, ಕಸ ವಿಲೇವಾರಿ ಹಾಗೂ ಬೀದಿ ನಾಯಿಗಳ ನಿಯಂತ್ರಣಕ್ಕೆ ಆದ್ಯತೆ : ಜಿಲ್ಲಾಧಿಕಾರಿ ಡಾ. ಆನಂದ ಕೆ. ಖಡಕ್ ಸೂಚನೆ
ವಿಜಯಪುರ, 14 ಮೇ (ಹಿ.ಸ.) : ಆಂಕರ್ : ವಿಜಯಪುರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾರಿಯಲ್ಲಿರುವ “ಕಸ ಕಂಡರೆ ಫೋಟೋ ಕಳಿಸಿ” ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದು ಜಿಲ್ಲಾಧಿಕಾರಿಗಳು ಸಂತಸ ವ್ಯಕ್ತಪಡಿಸಿದರು. ಈ ಅಭಿಯಾನವನ್ನು ಇನ್ನಷ್ಟು ವ್ಯಾಪಕಗೊಳಿಸಿ ಸಾರ್ವಜನಿ
ಸಭೆ


ವಿಜಯಪುರ, 14 ಮೇ (ಹಿ.ಸ.) :

ಆಂಕರ್ : ವಿಜಯಪುರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾರಿಯಲ್ಲಿರುವ “ಕಸ ಕಂಡರೆ ಫೋಟೋ ಕಳಿಸಿ” ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದು ಜಿಲ್ಲಾಧಿಕಾರಿಗಳು ಸಂತಸ ವ್ಯಕ್ತಪಡಿಸಿದರು.

ಈ ಅಭಿಯಾನವನ್ನು ಇನ್ನಷ್ಟು ವ್ಯಾಪಕಗೊಳಿಸಿ ಸಾರ್ವಜನಿಕರಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

“ಕಸ ಕುರಿತು ದೂರು ಬಂದ 24 ಗಂಟೆಯೊಳಗೆ ತೆರವು ಕಾರ್ಯ ಪೂರ್ಣಗೊಳ್ಳಬೇಕು. ಕೆಲವು ಕಡೆ ಉತ್ತಮವಾಗಿ ಕಾರ್ಯನಿರ್ವಹಿಸಲಾಗುತ್ತಿದೆ, ಇನ್ನೂ ಕೆಲವು ಕಡೆ ವಿಳಂಬವಾಗುತ್ತಿದೆ. ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಎಚ್ಚರಿಸಿದರು.

ಬಸ್ ನಿಲ್ದಾಣ, ರೈಲು ನಿಲ್ದಾಣ, ಸಂತೆ, ಜಾತ್ರೆ ಮುಂತಾದ ಜನನಿಬಿಡ ಪ್ರದೇಶಗಳಲ್ಲಿ ಸಂಗ್ರಹವಾಗುವ ಕಸವನ್ನು ತಕ್ಷಣ ತೆರವುಗೊಳಿಸುವಂತೆ ಸೂಚಿಸಿದ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಕಸ ವಿಲೇವಾರಿಯಲ್ಲಿ ನಿರ್ಲಕ್ಷ್ಯ ತೋರಿದರೆ ದಂಡ ವಿಧಿಸುವುದಾಗಿ ತಿಳಿಸಿದರು.

ಘನ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಈಗಾಗಲೇ ತಜ್ಞರ ಸಮಿತಿ ರಚನೆಯಾಗಿದ್ದು, ಎಂಆರ್ಎಫ್ ಘಟಕ ಹಾಗೂ ಎಸ್ಟಿಪಿ ಯೋಜನೆಗಳಿಗೆ ಕ್ರಿಯಾ ಯೋಜನೆ ರೂಪಿಸಿಕೊಳ್ಳಬೇಕು ಎಂದು ಹೇಳಿದರು. ಕೇಂದ್ರ ಸರ್ಕಾರದ ಅಮೃತ್ 2.0 ಯೋಜನೆಯಡಿ ಉದ್ಯಾನವನ ಹಾಗೂ ಜಲಮೂಲ ಪುನಶ್ಚೇತನ ಕಾಮಗಾರಿಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸೂಚಿಸಿದರು.

ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಕ್ರಮ :

ಜಿಲ್ಲೆಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ವಿಶೇಷ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಸಾರ್ವಜನಿಕ ಸ್ಥಳಗಳು, ಆಸ್ಪತ್ರೆಗಳು, ಶಾಲಾ-ಕಾಲೇಜುಗಳು, ಬಸ್ ನಿಲ್ದಾಣಗಳು ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು ಗುರುತಿಸಿ ತಾತ್ಕಾಲಿಕ ಶೆಡ್ ನಿರ್ಮಿಸಿ ಆಶ್ರಯ ತಾಣಗಳಿಗೆ ಕಳುಹಿಸಬೇಕು ಎಂದು ಹೇಳಿದರು.

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ನಗರ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಡಾಗ್ ಶೆಲ್ಟರ್ ನಿರ್ಮಾಣ ಕಡ್ಡಾಯವಾಗಿದ್ದು, ಬುರಣಾಪೂರ ಡಾಗ್ ಶೆಲ್ಟರ್ ಅನ್ನು ಶೀಘ್ರ ಆರಂಭಿಸುವಂತೆ ಸೂಚನೆ ನೀಡಿದರು.

“ಬೀದಿ ನಾಯಿಗಳಿಗೆ ಲಸಿಕೆ ಹಾಕುವುದು ಹಾಗೂ ಎಬಿಸಿ ಕಾರ್ಯಕ್ರಮ ಎಲ್ಲೆಡೆ ಪೂರ್ಣಗೊಳಿಸಬೇಕು. ಪಶು ಆಸ್ಪತ್ರೆಗಳಲ್ಲಿ ಲಸಿಕೆ ಸಾಕಷ್ಟು ಲಭ್ಯವಿದ್ದು, ಸ್ಥಳೀಯ ಸಂಸ್ಥೆಗಳು ಪಶು ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದರು.

ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಎಚ್ಚರಿಸಿದ ಅವರು, ಮುಂದಿನ ಸಭೆಯಲ್ಲಿ ಎಲ್ಲಾ ಮಾಹಿತಿಯನ್ನು ಸಮಗ್ರವಾಗಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಪಿಎಂ ಸ್ವನಿಧಿ ಯೋಜನೆಗೆ ವೇಗ ನೀಡಿ

ಬೀದಿ ಬದಿ ವ್ಯಾಪಾರಿಗಳಿಗೆ ಅನುಕೂಲ ಕಲ್ಪಿಸುವ ಪಿಎಂ ಸ್ವನಿಧಿ ಯೋಜನೆಯಡಿ ಬಾಕಿ ಉಳಿದ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಬ್ಯಾಂಕ್ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಿದರು.

“ಅರ್ಹ ಫಲಾನುಭವಿಗಳನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಮಾನವೀಯ ದೃಷ್ಟಿಯಿಂದ ಕಾರ್ಯನಿರ್ವಹಿಸಿ ಯೋಜನೆಯ ಸೌಲಭ್ಯವನ್ನು ಶೀಘ್ರ ತಲುಪಿಸಬೇಕು” ಎಂದು ಹೇಳಿದರು.

ಲೀಡ್ ಬ್ಯಾಂಕ್ ಮ್ಯಾನೇಜರ್ಗಳೊಂದಿಗೆ ಸಭೆ ನಡೆಸಿ ಬಾಕಿ ಉಳಿದ ಪ್ರಸ್ತಾವನೆಗಳನ್ನು ತೆರವುಗೊಳಿಸಬೇಕು ಎಂದು ಸೂಚಿಸಿದ ಅವರು, ಪಿಎಂ ಸ್ವನಿಧಿ ಫಲಾನುಭವಿಗಳನ್ನು ವಿಮಾ ಯೋಜನೆಗಳಿಗೂ ಒಳಪಡಿಸುವಂತೆ ತಿಳಿಸಿದರು.

ಇಂದಿರಾ ಕ್ಯಾಂಟೀನ್ಗಳಿಗೆ ಅನಿರೀಕ್ಷಿತ ಭೇಟಿ ನೀಡಿ :

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂದಿರಾ ಕ್ಯಾಂಟೀನ್ಗಳಿಗೆ ಅಧಿಕಾರಿಗಳು ಆಗಾಗ ಅನಿರೀಕ್ಷಿತ ಭೇಟಿ ನೀಡಿ ಆಹಾರದ ಗುಣಮಟ್ಟ, ಶುಚಿತ್ವ ಹಾಗೂ ಸ್ವಚ್ಛತೆ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದಿನ್ ಸೌದಾಗರ್, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande