ಗಿರಿಸಾಗರ ಗ್ರಾಮದಲ್ಲಿ ಬೀಳಗಿ ಪೊಲೀಸರ ಜಾಗೃತಿ ಅಭಿಯಾನ
ಬಾಗಲಕೋಟೆ 4 ಮೇ (ಹಿ.ಸ.): ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಬೀಳಗಿ ಪೊಲೀಸ್ ಠಾಣಾ ವ್ಯಾಪ್ತಿಯ ಗಿರಿಸಾಗರ ಬೀಟ್ ಸಿಬ್ಬಂದಿಗಳು ಗ್ರಾಮದಲ್ಲಿ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಗ್ರಾಮಸ್ಥರಿಗೆ ಮನೆ ಕಳ್ಳತನ ಹಾಗೂ ದೇವಸ್ಥಾನ ಕಳ್ಳತನ ಪ್ರಕರಣಗಳ ಬಗ್ಗೆ ಮುನ್ನೆಚ್ಚರಿಕಾ ಮಾಹಿತಿ ನೀಡಿದರು. ಸಾರ್ವಜನಿಕ
Beat


ಪೊಲೀಸರು


ಬಾಗಲಕೋಟೆ 4 ಮೇ (ಹಿ.ಸ.):

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಬೀಳಗಿ ಪೊಲೀಸ್ ಠಾಣಾ ವ್ಯಾಪ್ತಿಯ ಗಿರಿಸಾಗರ ಬೀಟ್ ಸಿಬ್ಬಂದಿಗಳು ಗ್ರಾಮದಲ್ಲಿ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಗ್ರಾಮಸ್ಥರಿಗೆ ಮನೆ ಕಳ್ಳತನ ಹಾಗೂ ದೇವಸ್ಥಾನ ಕಳ್ಳತನ ಪ್ರಕರಣಗಳ ಬಗ್ಗೆ ಮುನ್ನೆಚ್ಚರಿಕಾ ಮಾಹಿತಿ ನೀಡಿದರು.

ಸಾರ್ವಜನಿಕರಲ್ಲಿ ಭದ್ರತಾ ಅರಿವು ಮೂಡಿಸುವ ಉದ್ದೇಶದಿಂದ ನಡೆದ ಈ ಕಾರ್ಯಕ್ರಮದಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಎಚ್ಚರಿಕೆಯಿಂದಿರಬೇಕು ಹಾಗೂ ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಲಾಯಿತು.

ಗ್ರಾಮದ ವಿವಿಧ ಭಾಗಗಳಿಗೆ ಭೇಟಿ ನೀಡಿದ ಪೊಲೀಸರು, ಮನೆಗಳನ್ನು ಬೀಗ ಹಾಕದೆ ಬಿಡಬಾರದು, ರಾತ್ರಿ ವೇಳೆ ಹೆಚ್ಚಿನ ಎಚ್ಚರಿಕೆ ವಹಿಸಬೇಕು ಹಾಗೂ ಅಪರಿಚಿತರ ಚಲನವಲನಗಳ ಬಗ್ಗೆ ಗಮನ ಇರಿಸಬೇಕು ಎಂದು ಸಾರ್ವಜನಿಕರಿಗೆ ಸಲಹೆ ನೀಡಿದರು.

ದೇವಸ್ಥಾನಗಳಲ್ಲಿ ಸಿಸಿಟಿವಿ ಅಳವಡಿಕೆ, ಸುರಕ್ಷತಾ ಕ್ರಮಗಳು ಹಾಗೂ ರಾತ್ರಿ ಪಹರೆ ಹೆಚ್ಚಿಸುವ ಅಗತ್ಯವಿದೆ ಎಂಬುದರ ಕುರಿತು ಸಹ ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ಹಿರಿಯ ನಾಗರಿಕರ ಸಭೆ ಹಾಗೂ ಬೀಟ್ ಸಭೆಯನ್ನು ಆಯೋಜಿಸಿ ಗ್ರಾಮದಲ್ಲಿನ ಭದ್ರತಾ ಪರಿಸ್ಥಿತಿ, ಸಾರ್ವಜನಿಕ ಸಮಸ್ಯೆಗಳು ಹಾಗೂ ಕಾನೂನು ಸುವ್ಯವಸ್ಥೆ ಕುರಿತಂತೆ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಲಾಯಿತು.

ಗ್ರಾಮಸ್ಥರು ಕೂಡ ಪೊಲೀಸ್ ಇಲಾಖೆಯ ಈ ಜಾಗೃತಿ ಕಾರ್ಯಕ್ರಮವನ್ನು ಮೆಚ್ಚಿ, ಇಂತಹ ಕಾರ್ಯಕ್ರಮಗಳು ಗ್ರಾಮದಲ್ಲಿ ಭದ್ರತಾ ವಾತಾವರಣ ನಿರ್ಮಿಸಲು ಸಹಕಾರಿಯಾಗುತ್ತವೆ ಎಂದು ಅಭಿಪ್ರಾಯಪಟ್ಟರು.

ಇದೇ ವೇಳೆ ಆಸರೆ ಯೋಜನೆಯ ಅಂಗವಾಗಿ ಹಿರಿಯ ನಾಗರಿಕರ ಮನೆಗಳಿಗೆ ಭೇಟಿ ನೀಡಿದ ಬೀಟ್ ಸಿಬ್ಬಂದಿಗಳು ಅವರ ಆರೋಗ್ಯ, ಸುರಕ್ಷತೆ ಹಾಗೂ ದೈನಂದಿನ ಸಮಸ್ಯೆಗಳ ಕುರಿತು ವಿಚಾರಿಸಿದರು. ಹಿರಿಯ ನಾಗರಿಕರು ಯಾವುದೇ ಸಮಸ್ಯೆ ಎದುರಿಸಿದರೆ ತಕ್ಷಣ ಪೊಲೀಸ್ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ಭರವಸೆ ನೀಡಿದರು.

ಗ್ರಾಮದಲ್ಲಿ ಪೊಲೀಸ್-ಸಾರ್ವಜನಿಕರ ನಡುವಿನ ಉತ್ತಮ ಬಾಂಧವ್ಯ ಬೆಳೆಸುವ ನಿಟ್ಟಿನಲ್ಲಿ ಈ ರೀತಿಯ ಕಾರ್ಯಕ್ರಮಗಳು ಮುಂದುವರೆಯಲಿವೆ ಎಂದು ಪೊಲೀಸರು ತಿಳಿಸಿದ್ದಾರೆ

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande