
ಬೆಂಗಳೂರು, 14 ಮೇ (ಹಿ.ಸ.) :
ಆ್ಯಂಕರ್ : ರಾಜ್ಯದಾದ್ಯಂತ ಇಂದು ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಮಧ್ಯಾಹ್ನದ ನಂತರ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗುವ ನಿರೀಕ್ಷೆಯಿದೆ.
ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿ ಗಾಳಿ ಮತ್ತು ತೇವಾಂಶದ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದ್ದು, ಉಷ್ಣಾಂಶ ಹೆಚ್ಚಳದಿಂದ ಜನರು ಉರಿ ಬಿಸಿಯ ಅನುಭವ ಎದುರಿಸಬಹುದು.
ಇದಲ್ಲದೆ, ರಾಜ್ಯದ ವಿವಿಧ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಶೇಷವಾಗಿ ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ಕೆಲ ಪ್ರದೇಶಗಳಲ್ಲಿ ಮಿಂಚು-ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ರೈತರು ಬೆಳೆ ಹಾಗೂ ಕೊಯ್ಲು ಮಾಡಿದ ಕೃಷಿ ಉತ್ಪನ್ನಗಳನ್ನು ಸುರಕ್ಷಿತವಾಗಿ ಸಂರಕ್ಷಿಸಿಕೊಳ್ಳುವಂತೆ ಸಲಹೆ ನೀಡಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.