ವಿಜಯಪುರ: ತಂಗಡಗಿ ಸೇತುವೆ ಸಮೀಪ ಯುವತಿಯ ಶವ ಪತ್ತೆ
ವಿಜಯಪುರ, 14 ಮೇ (ಹಿ.ಸ.): ಆಂಕರ್ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದ ಸೇತುವೆ ಸಮೀಪ ಯುವತಿಯೊಬ್ಬಳ ಶವ ಪತ್ತೆಯಾದ ಘಟನೆ ಬೆಳಕಿಗೆ ಬಂದಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವ
ಸಾವು


ವಿಜಯಪುರ, 14 ಮೇ (ಹಿ.ಸ.):

ಆಂಕರ್ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದ ಸೇತುವೆ ಸಮೀಪ ಯುವತಿಯೊಬ್ಬಳ ಶವ ಪತ್ತೆಯಾದ ಘಟನೆ ಬೆಳಕಿಗೆ ಬಂದಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.

ಮೂಲಗಳ ಪ್ರಕಾರ, ಕಳೆದ ರಾತ್ರಿ ಸೇತುವೆ ಬಳಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ವ್ಯಕ್ತಿಯನ್ನು ಗಮನಿಸಿದ ಗ್ರಾಮಸ್ಥರು ಅವನನ್ನು ಹಿಡಿದು ವಿಚಾರಣೆ ನಡೆಸಿದ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ.

ಈ ಘಟನೆ ಸ್ಥಳೀಯರಲ್ಲಿ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿ, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತ ಯುವತಿಯ ಗುರುತು ಪತ್ತೆ ಮಾಡುವ ಕಾರ್ಯ ನಡೆಯುತ್ತಿದ್ದು, ಸಾವಿನ ನಿಖರ ಕಾರಣ ತಿಳಿದು ಬರಬೇಕಾಗಿದೆ.

ಪ್ರಕರಣದ ಕುರಿತು ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡಿರುವ ಪೊಲೀಸರು, ಸ್ಥಳದಲ್ಲಿದ್ದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುತ್ತಿದ್ದಾರೆ. ಅಲ್ಲದೆ ಗ್ರಾಮಸ್ಥರಿಂದ ಮಾಹಿತಿ ಪಡೆದು ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ.

ಈ ಘಟನೆ ಗ್ರಾಮದಲ್ಲಿ ಆತಂಕ ಮೂಡಿಸಿದ್ದು, ಸ್ಥಳೀಯರು ಶೀಘ್ರವಾಗಿ ಸತ್ಯಾಂಶ ಬಹಿರಂಗಪಡಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಪೊಲೀಸ್ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಪ್ರಕಟಿಸಲಾಗುವುದು ಎಂದು ತಿಳಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande