ಮೋರಟಗಿ ಗ್ರಾಮದಲ್ಲಿ ಮನೆ ಕುಸಿತ ; ತಕ್ಷಣ ಪರಿಹಾರಕ್ಕೆ ಮಾಜಿ ಶಾಸಕ ಆಗ್ರಹ
ವಿಜಯಪುರ, 15 ಮೇ (ಹಿ.ಸ.) : ಆಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಮೋರಟಗಿ ಗ್ರಾಮದಲ್ಲಿ ರಾತ್ರಿ ಸುರಿದ ಅಕಾಲಿಕ ಗಾಳಿ-ಮಳೆಯಿಂದ ಭೀಕರ ದುರಂತ ಸಂಭವಿಸಿದ್ದು, ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. ಮೃತರನ್ನು ಮೋರಟಗಿ ಗ್ರಾಮದ ಗುರುನಾಥ
ಸಾವು


ವಿಜಯಪುರ, 15 ಮೇ (ಹಿ.ಸ.) :

ಆಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಮೋರಟಗಿ ಗ್ರಾಮದಲ್ಲಿ ರಾತ್ರಿ ಸುರಿದ ಅಕಾಲಿಕ ಗಾಳಿ-ಮಳೆಯಿಂದ ಭೀಕರ ದುರಂತ ಸಂಭವಿಸಿದ್ದು, ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.

ಮೃತರನ್ನು ಮೋರಟಗಿ ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), ಕಾಳಮ್ಮ ಬಡಿಗೇರ (13) ಹಾಗೂ ಕೀರ್ತಿ ಬಡಿಗೇರ (9) ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಭಾರೀ ಗಾಳಿ-ಮಳೆಯೊಂದಿಗೆ ಮನೆ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ, ಕುಟುಂಬ ಸದಸ್ಯರು ಸ್ಥಳದಲ್ಲೇ ಸಿಲುಕಿಕೊಂಡು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದರು. ಆದರೆ, ನಾಲ್ವರನ್ನು ಬದುಕುಳಿಸುವುದು ಸಾಧ್ಯವಾಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು, ತಹಸೀಲ್ದಾರ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆ ಕುಸಿತದ ಕಾರಣಗಳು ಹಾಗೂ ಹಾನಿಯ ಪ್ರಮಾಣದ ಕುರಿತು ಪ್ರಾಥಮಿಕ ವರದಿ ಸಂಗ್ರಹಿಸಲಾಗುತ್ತಿದೆ.

ಈ ದುರಂತಕ್ಕೆ ಮಾಜಿ ಶಾಸಕ ರಮೇಶ್ ಬೂಸನೂರ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಪ್ರಕೃತಿಯ ವಿಕೋಪದಿಂದ ಸಂಭವಿಸಿದ ಈ ಘಟನೆ ಅತ್ಯಂತ ದುಃಖದಾಯಕವಾಗಿದ್ದು, ಮೃತರ ಕುಟುಂಬಗಳಿಗೆ ಸರ್ಕಾರದಿಂದ ತಕ್ಷಣವೇ ಸೂಕ್ತ ಪರಿಹಾರ ಧನ ಒದಗಿಸಬೇಕೆಂದು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಸಹ ಘಟನಾ ಸ್ಥಳದಲ್ಲಿ ಹಾಜರಿದ್ದು, ಕುಟುಂಬದ ದುಃಖದಲ್ಲಿ ಭಾಗಿಯಾಗಿದ್ದಾರೆ. ಈ ಘಟನೆಯಿಂದ ಮೋರಟಗಿ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಸರ್ಕಾರದಿಂದ ತ್ವರಿತ ಪರಿಹಾರ ಹಾಗೂ ಪುನರ್ವಸತಿ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯವೂ ಹೆಚ್ಚುತ್ತಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande