
ಕೊಪ್ಪಳ, 15 ಮೇ (ಹಿ.ಸ.) :
ಆ್ಯಂಕರ್ : ಭಾರತ ಸರ್ಕಾರದ ಆಯುಷ್ ಮಂತ್ರಾಲಯದ ನಿರ್ದೇಶನದಂತೆ ಜೂನ್ 21ರಂದು ದೇಶದಾದ್ಯಂತ “12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ–2026”ಯನ್ನು ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಸಾರ್ವಜನಿಕರು ಹಾಗೂ ಸರ್ಕಾರಿ ಅಧಿಕಾರಿಗಳಿಗೆ ಅನುಕೂಲವಾಗುವಂತೆ ಉಚಿತ ಆನ್ಲೈನ್ ಯೋಗ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ನವದೆಹಲಿಯ ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯ ವತಿಯಿಂದ ಈ ವಿಶೇಷ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಒಟ್ಟು 14 ದಿನಗಳ ಕಾಲ ಆನ್ಲೈನ್ ಮೂಲಕ ತರಬೇತಿ ನೀಡಲಾಗುತ್ತದೆ.
ಯೋಗದ ಮಹತ್ವ, ದೈನಂದಿನ ಜೀವನದಲ್ಲಿ ಯೋಗದ ಅವಶ್ಯಕತೆ ಹಾಗೂ ಆರೋಗ್ಯಕರ ಬದುಕಿನ ಕುರಿತು ತರಬೇತಿಯಲ್ಲಿ ಮಾಹಿತಿ ನೀಡಲಾಗುತ್ತದೆ.
ಆಸಕ್ತ ಸಾರ್ವಜನಿಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆಯುಷ್ ಮಂತ್ರಾಲಯದ ಅಧಿಕೃತ ಪೋರ್ಟಲ್ ( https://moahabityoga?ref=karnataka) ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.
ತರಬೇತಿ ಸಂಪೂರ್ಣ ಉಚಿತವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಈ ಮೂಲಕ ಮನವಿ ಮಾಡಲಾಗಿದೆ.
ಮನೆ ಮನೆಗಳಿಗೆ ಯೋಗದ ಅರಿವು ತಲುಪಿಸುವುದು ಹಾಗೂ ಯೋಗವನ್ನು ಜನಪ್ರಿಯಗೊಳಿಸುವುದು.
ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಇದೇ ವೇಳೆ ಜೂನ್ 21ರಂದು ಆಯುಷ್ ಇಲಾಖೆಯಿಂದ ಆಯೋಜಿಸಲಾಗುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೊಪ್ಪಳ ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ. ಪರ್ವತಗೌಡ ಬಿ. ಹಿರೇಗೌಡರ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್