
ಕೋಲಾರ, ಮೇ ೧೪ (ಹಿ.ಸ) :
ಆ್ಯಂಕರ್ : ದೇಶದ ಅಭಿವೃದ್ಧಿಯಲ್ಲಿ ತಂತ್ರಜ್ಞಾನದ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಚ್ಚು ಆಸಕ್ತಿ ಬೆಳೆಸಿಕೊಂಡು ಹೊಸ ಆವಿಷ್ಕಾರಗಳತ್ತ ಮುಂದಾಗಬೇಕು ಎಂದು ಕೋಲಾರದ ಸರ್ಕಾರಿ ಪದವಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ. ಶಂಕರಪ್ಪ ಕರೆ ನೀಡಿದರು.
ಮೈ-ಭಾರತ್ ಕೇಂದ್ರ, ಕೋಲಾರ ಹಾಗೂ ನವ ಸಮಾಜ ಮತ್ತು ಪರಿಸರ ಅಭಿವೃದ್ಧಿ ಸಂಸ್ಥೆ, ಕೋಲಾರ ಇವರ ಸಂಯುಕ್ತ ಆಶ್ರಯದಲ್ಲಿ “ರಾಷ್ಟ್ರೀಯ ತಂತ್ರಜ್ಞಾನ ದಿನ” ಅಂಗವಾಗಿ ಕೋಲಾರದ ಮಹಿಳಾ ಪದವಿ ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಿಲ್ಲಾ ಯುವಜನ ಅಧಿಕಾರಿ ಮಹೇಂದ್ರ ರೆಡ್ಡಿ ಮಾತನಾಡಿ, ಯುವಜನರು ತಂತ್ರಜ್ಞಾನವನ್ನು ಸಕಾರಾತ್ಮಕವಾಗಿ ಬಳಸಿಕೊಂಡು ಸಮಾಜದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ಶ್ರೀನಿವಾಸ ಎಂ ಜಿ ಮಾತನಾಡಿ ವಿದ್ಯಾರ್ಥಿನಿಯರು ಆಧುನಿಕ ತಂತ್ರಜ್ಞಾನ ಜ್ಞಾನವನ್ನು ಅಳವಡಿಸಿಕೊಂಡು ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.
ಷಮ್ಸ್ ಎಂ ಬಿ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಯುವಜನರು ಹಾಗೂ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ. ತಂತ್ರಜ್ಞಾನವನ್ನು ಸಮಾಜಮುಖಿ ಕಾರ್ಯಗಳಲ್ಲಿ ಬಳಸುವ ಅಗತ್ಯವಿದೆ ಎಂದು ಹೇಳಿದರು.
ಕಾರ್ಯದರ್ಶಿ ಮುಸ್ತಫಾ ಪಾಷ ಎಸ್.ವೈ ಮಾತನಾಡಿ ಸಂಸ್ಥೆಯ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್