ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ಅಸ್ತವ್ಯಸ್ತ : ಸಿದ್ದರಾಮಯ್ಯ
ನಾನಾ
Cm


ಬೆಂಗಳೂರು, 15 ಮೇ (ಹಿ.ಸ.) :

ಆ್ಯಂಕರ್ : ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಿ, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,

ನಾನಾ ರಾಜ್ಯಗಳ ವಿಧಾನ ಸಭಾ ಚುನಾವಣೆಗಳ ನಂತರ ಕೇಂದ್ರ ಸರ್ಕಾರ ಪೆಟ್ರೋಲ್ ಡೀಸೆಲ್ ದರ ಏರಿಸುವ ನಿರೀಕ್ಷೆ ಇತ್ತು. ನಿರೀಕ್ಷೆಯಂತೆಯೇ ಹೆಚ್ಚಿಸಿದ್ದಾರೆ. ಆದರೆ ಕರ್ನಾಟಕದಲ್ಲಿ ಇತರೆ ರಾಜ್ಯಗಳಿಗಿಂತ ಗಣನೀಯವಾಗಿ ಕಡಿಮೆಯಿರುವ ಪೆಟ್ರೋಲ್ ಬೆಲೆಯನ್ನು ಹೆಚ್ಚಿಸಿದ್ದರ ಬಗ್ಗೆ ಬಿಜೆಪಿಯವರು ಟೀಕೆ ಮಾಡಿದ್ದರು. ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾದ ನಂತರ ಹಲವು ಬಾರಿ ಪೆಟ್ರೋಲ್ ಡೀಸೆಲ್ ದರಗಳನ್ನು ಹೆಚ್ಚಿಸಿದ್ದಾರೆ. ಈ ಬೆಲೆ ಏರಿಕೆ ಜನಸಾಮಾನ್ಯರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದ್ದು, ವಿಶೇಷವಾಗಿ ಕಾರ್ಮಿಕರು, ರೈತರು, ಬಡವರ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ. ಕೇಂದ್ರ ಸರ್ಕಾರದ ಈ ಬೆಲೆ ಏರಿಕೆಯ ಕ್ರಮವನ್ನು ರಾಜ್ಯ ಸರ್ಕಾರ ಖಂಡಿಸುವುದಲ್ಲದೇ, ಈ ನಿರ್ಣಯವನ್ನು ಹಿಂದಕ್ಕೆ ಪಡೆಯಬೇಕೆಂದು ಒತ್ತಾಯಿಸುತ್ತೇವೆ ಎಂದರು.

ಪ್ರಧಾನಿ ಮೋದಿಯವರ ಆಡಳಿತ ಪ್ರಾರಂಭವಾಗುವ ಮುಂಚೆ 413 ರೂ.ಗಳಿಂದ ಗೃಹಬಳಕೆಯ ಎಲ್ ಪಿ ಜಿ ದರ ಈಗ 1000 ರೂಗಳನ್ನು ದಾಟಿದೆ. ಈ ಬೆಲೆ ಏರಿಕೆ ದಿನನಿತ್ಯದ ಬೆಲೆ ಹೆಚ್ಚಳಕ್ಕೂ ಕಾರಣವಾಗಲಿದೆ. ಎಲ್ ಪಿ ಜಿ ಪೂರೈಕೆ ವ್ಯತ್ಯಯವಾಗಿರುವ ನಡುವೆಯೇ ಬೆಲೆ ಏರಿಕೆಯು ಜನಜೀವನವನ್ನು ಅಸ್ತವ್ಯಸ್ತಗೊಳಿಸಲಿದೆ ಎಂದರು.

ಇದೇ ವೇಳೆ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನೀಟ್ ಯುಜಿ ಮರು ಪರೀಕ್ಷೆಗೆ ದಿನಾಂಕ ನಿಗದಿಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇಂದ್ರ ಸರ್ಕಾರವು ನೀಟ್ ಯುಜಿ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸಲು ವಿಫಲರಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande