
ಕೋಲಾರ, ಮೇ ೧೫ (ಹಿ.ಸ) :
ಆ್ಯಂಕರ್ : ರಾಜ್ಯ ಸರ್ಕಾರಿ ಎಸ್ಸಿ /ಎಸ್ಟಿ ನೌಕರರ ಸಮನ್ವಯ ಸಮಿತಿಯಿಂದ ಜೂನ್ ೬ ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ೬ನೇ ಐಕ್ಯತಾ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಸಮಿತಿಯ ರಾಜ್ಯಾಧ್ಯಕ್ಷ ಡಿ. ಶಿವಶಂಕರ್ ತಿಳಿಸಿದರು
ನಗರದ ಬುದ್ಧ ಮಂದಿರದಲ್ಲಿ ರಾಜ್ಯ ಸರ್ಕಾರಿ ನೌಕರರ ಸಮನ್ವಯ ಸಮಿತಿಯ ವತಿಯಿಂದ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ಎಸ್ಸಿ ಎಸ್ಟಿ ನೌಕರರ ಸಮನ್ವಯ ಸಮಿತಿಯ ರಾಜ್ಯಮಟ್ಟದ ಐಕ್ಯತಾ ಸಮಾವೇಶ ನಡೆಯಲಿದೆ. ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಗೃಹ ಸಚಿವ ಜಿ ಪರಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎಚ್.ಮುನಿಯಪ್ಪ ಶಿವರಾಜ್ ತಂಗಡಗಿ, ಪ್ರಿಯಾಂಕ್ ಖರ್ಗೆ, ಡಾ. ಎಚ್ ಸಿ ಮಹದೇವಪ್ಪ ಹಾಗೂ ವಿರೋಧಿ ಪಕ್ಷದ ನಾಯಕರು ಭಾಗವಹಿಸುವರು.ಭಾಗವಹಿಸುವ ಸರ್ಕಾರಿ ನೌಕರರಿಗೆ ಎರಡು ದಿನಗಳು ಓ.ಓ.ಡಿ. ಸೌಲಭ್ಯವನ್ನು ಸರ್ಕಾರ ಮಂಜೂರು ಮಾಡಲಿದೆ ಎಂದರು .
ಜಿಲ್ಲೆಗಳಲ್ಲಿ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸ್ಸಿ ಎಸ್ಟಿ ಸರ್ಕಾರಿ ನೌಕರರು ಅಧಿಕಾರಿಗಳು ವಿಶ್ವವಿದ್ಯಾಲಯಗಳು ಅರೆ ಸರ್ಕಾರಿ ಅನುದಾನಿತ ಸಂಸ್ಥೆಗಳು ಭಾಗವಹಿಸಬೇಕು. ಸೇವಾ ವಲಯದಲ್ಲಿ ಮೀಸಲಾತಿ ಸೌಲಭ್ಯ ಅನುಷ್ಠಾನಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಐಕ್ಯತಾ ಸಮಾವೇಶ ಮುಖ್ಯ ಉದ್ದೇಶವಾಗಿದೆ. ೩೦,೦೦೦ಕ್ಕೂ ಹೆಚ್ಚು ನೌಕರರು ಭಾಗವಹಿಸುವ ನಿರೀಕ್ಷೆಯಿದ್ದು ಮಹಿಳಾ ನೌಕರರು ಹೆಚ್ಚಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.
ಸಮನ್ವಯ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವಿಜಯ್ ಕುಮಾರ್, ರಾಜ್ಯ ಮಹಿಳಾ ಸಂಚಾಲಕರಾದ ಸುನೀತ ರಾಜ್ಯ ಉಪಾಧ್ಯಕ್ಷರಾದ ಪ್ರದೀಪ್ ಜಿಲ್ಲಾ ಗೌರವಾಧ್ಯಕ್ಷ ಜಿ.ಶ್ರೀನಿವಾಸ್ ಜಿಲ್ಲಾಧ್ಯಕ್ಷ ಎನ್.ಮುನಿರಾಜು, ಕೆಂಪಸಿದ್ದಯ್ಯ, ರಾಚಪ್ಪ, ಪ್ರಸಾದ್ ನೂತನವಾಗಿ ಆಯ್ಕೆಯಾದ ಕೋಲಾರ ಜಿಲ್ಲಾ ಸಮಿತಿಯ ಎಲ್ಲಾ ಪದಾಧಿಕಾರಿಗಳು ವಿಶೇಷ ಆಹ್ವಾನಿತರಾದ ರಾಮಕೃಷ್ಣ ಸುರೇಶ್ ಚಂದ್ರು ಇನಿತರರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್