ಇಂದು ಸ್ವೀಡನ್ ಗೆ ಪ್ರಧಾನಿ ಮೋದಿ
ಪ್ರಧಾ ನ
Pm


ಸ್ಟಾಕ್ಹೋಮ್/ದಿ ಹೇಗ್, 17 ಮೇ (ಹಿ.ಸ.):

ಆ್ಯಂಕರ್ : ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಯುರೋಪ್ ಹಾಗೂ ಮಧ್ಯಪ್ರಾಚ್ಯದ ಐದು ರಾಷ್ಟ್ರಗಳ ಪ್ರವಾಸದ ಮೂರನೇ ಹಂತವಾಗಿ ಇಂದು ಸ್ವೀಡನ್ ತಲುಪಲಿದ್ದಾರೆ. ಅವರು ಸ್ವೀಡನ್ ನ ಗೋಥೆನ್ಬರ್ಗ್ ನಗರದಲ್ಲಿ ಎರಡು ದಿನಗಳ ಕಾಲ ತಂಗಲಿದ್ದು, ಸ್ವೀಡನ್ ಪ್ರಧಾನಿ ಉಲ್ಫ್ ಕ್ರಿಸ್ಟರ್ಸನ್ ಅವರೊಂದಿಗೆ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಭಾರತ–ಸ್ವೀಡನ್ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ನಡೆಯುತ್ತಿರುವ ಈ ಭೇಟಿಯಲ್ಲಿ ಹಸಿರು ಇಂಧನ, ಡಿಜಿಟಲ್ ತಂತ್ರಜ್ಞಾನ, ರಕ್ಷಣಾ ಸಹಕಾರ, ಕೈಗಾರಿಕಾ ಅಭಿವೃದ್ಧಿ ಹಾಗೂ ನವೀನ ತಂತ್ರಜ್ಞಾನ ಕ್ಷೇತ್ರಗಳಿಗೆ. ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಸ್ವೀಡನ್ ಮಾಧ್ಯಮ ವರದಿಗಳ ಪ್ರಕಾರ, ಪ್ರಧಾನಿ ಮೋದಿ ಅವರ ಭೇಟಿ ಜಾಗತಿಕ ಮಟ್ಟದಲ್ಲಿ ಮಹತ್ವ ಪಡೆದಿದ್ದು, ಭಾರತವನ್ನು ಸ್ವೀಡನ್ ಪ್ರಮುಖ ಆರ್ಥಿಕ ಪಾಲುದಾರ ರಾಷ್ಟ್ರವಾಗಿ ಪರಿಗಣಿಸುತ್ತಿದೆ. ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆ ವಿಸ್ತರಣೆ ಕುರಿತು ಉಭಯ ನಾಯಕರು ಚರ್ಚೆ ನಡೆಸಲಿದ್ದಾರೆ.

ಈ ವೇಳೆ ಉರ್ಸುಲಾ ವಾನ್ ಡೆರ್ ಲೇಯೆನ್ ಕೂಡ ಪ್ರಧಾನಿ ಮೋದಿಯನ್ನು ಭೇಟಿಯಾಗಲಿದ್ದಾರೆ. 2018ರ ಬಳಿಕ ಪ್ರಧಾನಿ ಮೋದಿ ಅವರ ಮೊದಲ ಸ್ವೀಡನ್ ಭೇಟಿ ಇದಾಗಿದೆ. ನಂತರ ಅವರು ಒಸ್ಲೊ ನಗರದಲ್ಲಿ ನಡೆಯಲಿರುವ ಭಾರತ–ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ಇದಕ್ಕೂ ಮೊದಲು ಪ್ರಧಾನಿ ಮೋದಿ ಅವರು ನೆದರ್ಲ್ಯಾಂಡ್ಸ್ ಪ್ರವಾಸದ ನೆನಪುಗಳನ್ನು ಹಂಚಿಕೊಂಡು, “ಭಾರತೀಯ ವಲಸಿಗರು ಭಾರತ–ನೆದರ್ಲ್ಯಾಂಡ್ಸ್ ಸ್ನೇಹದ ಜೀವಂತ ಸೇತುವೆಯಾಗಿದ್ದಾರೆ” ಎಂದು ಹೇಳಿದ್ದಾರೆ.

ಸುರಿನಾಮೀಸ್ ಭಾರತೀಯ ಸಮುದಾಯಕ್ಕೆ ಒಸಿಐ ಕಾರ್ಡ್ ಸೌಲಭ್ಯ ವಿಸ್ತರಣೆ ಮಾಡಿರುವುದನ್ನು ಅಲ್ಲಿನ ಭಾರತೀಯರು ಹರ್ಷದಿಂದ ಸ್ವಾಗತಿಸಿದ್ದಾರೆ ಎಂದು ತಿಳಿಸಿದ್ದಾರೆ.

ನೆದರ್ಲ್ಯಾಂಡ್ಸ್ ನಾಯಕ ರೊಬ್ ಜೆತಿನ್ ಅವರೊಂದಿಗಿನ ಮಾತುಕತೆಯಲ್ಲಿ ರಕ್ಷಣಾ, ಸಮುದ್ರ ಭದ್ರತೆ, ಬಾಹ್ಯಾಕಾಶ ತಂತ್ರಜ್ಞಾನ ಹಾಗೂ ಆರ್ಥಿಕ ಸಹಕಾರ ಕುರಿತಾಗಿ ಚರ್ಚೆ ನಡೆಸಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

“ಭಾರತ ಮತ್ತು ನೆದರ್ಲ್ಯಾಂಡ್ಸ್ ನಡುವಿನ ಸ್ನೇಹ ಕಳೆದ ಹತ್ತು ವರ್ಷಗಳಲ್ಲಿ ಹೊಸ ಎತ್ತರಕ್ಕೆ ತಲುಪಿದೆ. ಫಿನ್ಟೆಕ್, ಅರೆವಾಹಕ, ಹಸಿರು ಜಲಜನಕ, ಕೃತಕ ಬುದ್ಧಿಮತ್ತೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಹಭಾಗಿತ್ವಕ್ಕೆ ಅಪಾರ ಅವಕಾಶಗಳಿವೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande