ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಅಭಿಯಾನಕ್ಕೆ ಚಾಲನೆ
ಬೆಂಗಳೂರು, 18 ಮೇ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಕುಂಬಳಗೋಡಿನಲ್ಲಿ ಇಂದು ನಡೆದ ಮಹಾಲಕ್ಷ್ಮಿ ಲೇಔಟ್ ಮಂಡಲ ಬಿಜೆಪಿ ವತಿಯಿಂದ ಆಯೋಜಿಸಲಾದ “ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಅಭಿಯಾನ” ಶಿಬಿರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ
Camp


ಬೆಂಗಳೂರು, 18 ಮೇ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಕುಂಬಳಗೋಡಿನಲ್ಲಿ ಇಂದು ನಡೆದ ಮಹಾಲಕ್ಷ್ಮಿ ಲೇಔಟ್ ಮಂಡಲ ಬಿಜೆಪಿ ವತಿಯಿಂದ ಆಯೋಜಿಸಲಾದ “ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಅಭಿಯಾನ” ಶಿಬಿರಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ತರಬೇತಿ ಶಿಬಿರವು ಕಾರ್ಯಕರ್ತರು ಮತ್ತು ನಾಯಕರ ಕೌಶಲ್ಯ, ಸಮನ್ವಯ ಹಾಗೂ ಸೈದ್ಧಾಂತಿಕ ಸ್ಪಷ್ಟತೆಯನ್ನು ಮತ್ತಷ್ಟು ಬಲಪಡಿಸುವುದರ ಜೊತೆಗೆ ಪರಿಣಾಮಕಾರಿ ಸಾರ್ವಜನಿಕ ಸೇವೆಗೆ ಅವರನ್ನು ಸಜ್ಜುಗೊಳಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಕೆ. ಗೋಪಾಲಯ್ಯ, ಬಿಬಿಎಂಪಿ ಮಾಜಿ ಉಪಮೇಯರ್ ಹಾಗೂ ಮಂಡಲ ಅಧ್ಯಕ್ಷ ಡಾ. ನಾಗೇಂದ್ರ, ಮಾಜಿ ಬಿಬಿಎಂಪಿ ಸದಸ್ಯರಾದ ಜಯರಾಮ್, ಮಹದೇವ್, ರಾಜೇಂದ್ರ ಕುಮಾರ್, ನಾಗರತ್ನ ಲೋಕೇಶ್, ಪದ್ಮಾವತಿ ಶ್ರೀನಿವಾಸ್ ಸೇರಿದಂತೆ ಹಲವಾರು ಪಕ್ಷದ ಮುಖಂಡರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande