ಮಾಜಿ ಪ್ರಧಾನಿ ದೇವೇಗೌಡರಿಗೆ ಎಸ್.ಮುನಿಸ್ವಾಮಿ ಶುಭಾಶಯ
ಮಾಜಿ ಪ್ರಧಾನಿ ದೇವೇಗೌಡರಿಗೆ ಎಸ್.ಮುನಿಸ್ವಾಮಿರಿಂದ ಶುಭಾಷಯ ಸಂಬಂಧ
ಮಾಜಿ ಸಂಸದ ಎಸ್.ಮುನಿಸ್ವಾಮಿ ಸೋಮವಾರ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ತೆರಳಿ ಹುಟ್ಟುಹಬ್ಬದ ಶುಭಾಷಯ ಕೋರಿ, ಆಶೀರ್ವಾದ ಪಡೆದರು.


ಕೋಲಾರ, 18 ಮೇ (ಹಿ.ಸ.) :

ಆ್ಯಂಕರ್ : ಮಾಜಿ ಸಂಸದ ಎಸ್.ಮುನಿಸ್ವಾಮಿ ಸೋಮವಾರ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ತೆರಳಿ ಹುಟ್ಟುಹಬ್ಬದ ಶುಭಾಶಯ ಕೋರಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ದೇಶದ ಪ್ರಧಾನಿಯಾಗಿ,ಮುಖ್ಯಮಂತ್ರಿಗಳಾಗಿ ಅತ್ಯುತ್ತಮ ಕಾರ್ಯನಿರ್ವಹಣೆ, ರೈತಪರ, ದೀನ ದಲಿತರ ಪರ ಕಾಳಜಿಯ ಮೂಲಕ ಜನಾನುರಾಗಿಯಾಗಿರುವ ದೇವೇಗೌಡರಿಗೆ ದೇವರು ಉತ್ತಮ ಆರೋಗ್ಯ,ಆಯುಷ್ಯ, ರಾಜಕಾರಣದಲ್ಲಿ ನಮ್ಮಂತಹ ಯುವಕರಿಗೆ ಮಾರ್ಗದರ್ಶನ ನೀಡುವುದನ್ನು ಮುಂದುವರೆಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.

ಕರ್ನಾಟಕದವರೊಬ್ಬರು ಪ್ರಧಾನಿಯಾಗಿದ್ದು, ಹೆಮ್ಮೆಯ ವಿಷಯವಾಗಿದೆ, ಇಂತಹ ಚಾಣಕ್ಯ ನಡೆ, ಜನಬೆಂಬಲ ಹೊಂದಿರುವ ದೇವೇಗೌಡರು ಮೋದಿಯವರೊಂದಿಗೆ ಹೊಂದಿರುವ ಅವಿನಾಭಾವ ಸಂಬಂಧ ಮರೆಯಲಾಗದು ಎಂದು ತಿಳಿಸಿ ಹುಟ್ಟುಹಬ್ಬದ ಶುಭಾಶಯ ಕೋರಿದ ಅವರು ದೇವೇಗೌಡರ ಆಶೀರ್ವಾದ ಪಡೆದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande