
ನವದೆಹಲಿ, 18 ಮೇ (ಹಿ.ಸ.) :
ಆ್ಯಂಕರ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದೇಶದಲ್ಲಿ ಇತ್ತೀಚೆಗೆ ಪೆಟ್ರೋಲ್, ಡೀಸೆಲ್, ಸಿಎನ್ಜಿ ಹಾಗೂ ಕೈಗಾರಿಕಾ ಅನಿಲ ಸಿಲಿಂಡರ್ಗಳ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ಮುಗಿದ ತಕ್ಷಣವೇ ಕೇಂದ್ರ ಸರ್ಕಾರ ಇಂಧನ ದರಗಳನ್ನು ಹೆಚ್ಚಿಸಿ ಜನರ ಮೇಲೆ ಹೊರೆ ಹಾಕಿದೆ ಎಂದು ಅವರು ಆರೋಪಿಸಿದ್ದಾರೆ.
ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ವಿಡಿಯೊ ಹಂಚಿಕೊಂಡ ಖರ್ಗೆ, “ಚುನಾವಣೆಗೂ ಮುನ್ನ ಬೆಲೆ ಏರಿಕೆ ಮಾಡಿದ್ದರೆ ಅದರ ರಾಜಕೀಯ ಹೊಣೆಗಾರಿಕೆಯನ್ನು ಬಿಜೆಪಿ ಎದುರಿಸಬೇಕಾಗುತ್ತಿತ್ತು. ಆದ್ದರಿಂದ ಸರ್ಕಾರ ಜನರಿಂದ ವಾಸ್ತವ ಸ್ಥಿತಿಯನ್ನು ಮರೆಮಾಚಿತು” ಎಂದು ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರ ದೂರದೃಷ್ಟಿಯ ಕೊರತೆಯಿಂದ ನಡೆದುಕೊಳ್ಳುತ್ತಿದೆ ಎಂದು ಖರ್ಗೆ ಟೀಕಿಸಿದ್ದು. ನಿರಂತರ ಹಣದುಬ್ಬರದಿಂದ ಬಡವರು ಮತ್ತು ಮಧ್ಯಮ ವರ್ಗದ ಜನರು ದಿನನಿತ್ಯದ ಅಗತ್ಯ ವಸ್ತುಗಳನ್ನು ಖರೀದಿಸಲು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಹೇಳಿದರು. ಈ ವಿಚಾರವಾಗಿ ಕಾಂಗ್ರೆಸ್ ಪಕ್ಷ ದೇಶವ್ಯಾಪಿ ಹೋರಾಟದ ನಡೆಸಲಿದೆ ಎಂದು ಎಚ್ಚರಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.