
ನವದೆಹಲಿ, 18 ಮೇ (ಹಿ.ಸ.) :
ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. ಟ್ರಕ್ ಮತ್ತು ವ್ಯಾನ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ಸಂತಾಪ ಸೂಚಿಸಿ, ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ. “ಲಖಿಂಪುರ್ ಖೇರಿಯಲ್ಲಿ ಸಂಭವಿಸಿದ ಅಪಘಾತದ ಸುದ್ದಿ ಕೇಳಿ ತುಂಬಾ ದುಃಖವಾಗಿದೆ. ತಮ್ಮ ಆತ್ಮೀಯರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ಗಾಯಾಳುಗಳು ಬೇಗ ಗುಣಮುಖರಾಗಲಿ” ಎಂದು ಪ್ರಧಾನಿ ತಿಳಿಸಿದ್ದಾರೆ.
ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ ₹50 ಸಾವಿರ ಆರ್ಥಿಕ ನೆರವು ನೀಡಲಾಗುವುದು ಎಂದು ಘೋಷಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.