ರೈತರ ಸಮಾಧಿ ಮೇಲೆ ಸರಕಾರ ಸಾಧನಾ ಸಮಾವೇಶ : ಅಶೋಕ
ಬೆಂಗಳೂರು, 18 ಮೇ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ ನಡೆಸುತ್ತಿರುವುದು ರೈತರ ಸಮಾಧಿ ಮೇಲೆ ರಾಜಕೀಯ ಮಾಡುವಂತಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ವಾಗ್ದಾಳಿ ನಡ
ಅಶೋಕ


ಬೆಂಗಳೂರು, 18 ಮೇ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ ನಡೆಸುತ್ತಿರುವುದು ರೈತರ ಸಮಾಧಿ ಮೇಲೆ ರಾಜಕೀಯ ಮಾಡುವಂತಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ವಾಗ್ದಾಳಿ ನಡೆಸಿದರು.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿಗಳು ಈಗ ರೈತರಿಗೆ “ಆತ್ಮಹತ್ಯೆ ಗ್ಯಾರೆಂಟಿ”, “ಬೆಳೆ ಪರಿಹಾರ ಸಿಗದ ಗ್ಯಾರೆಂಟಿ”, “ನೀರಿಲ್ಲದ ಗ್ಯಾರೆಂಟಿ” ಹಾಗೂ “ಮೂರು ಫೇಸ್ ವಿದ್ಯುತ್ ಸಿಗದ ಗ್ಯಾರೆಂಟಿ”ಗಳಾಗಿ ಪರಿಣಮಿಸಿವೆ. ಕಳೆದ ಮೂರು ವರ್ಷಗಳಿಂದ ಸರ್ಕಾರ ರೈತ ವಿರೋಧಿ ಧೋರಣೆ ಅನುಸರಿಸುತ್ತಿದ್ದು, ಬಜೆಟ್ನಲ್ಲಿಯೂ ರೈತರಿಗೆ ಸಮರ್ಪಕ ಅನುದಾನ ನೀಡಿಲ್ಲ. ಚುನಾವಣಾ ಘೋಷಣಾಪತ್ರದಲ್ಲಿ ರೈತರಿಗೆ ಹೆಚ್ಚಿನ ನೆರವು ನೀಡುವುದಾಗಿ ಹೇಳಿದ್ದರೂ ಎಲ್ಲವೂ ಶೂನ್ಯವಾಗಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande