ಅಸ್ಸಾಂನಲ್ಲಿ ಬದಲಾವಣೆ ; ಕಾಂಗ್ರೆಸ್ ಗೆಲುವು : ಡಿ.ಕೆ. ಶಿವಕುಮಾರ್ ವಿಶ್ವಾಸ
ಗುವಾಹಟಿ, 02 ಮೇ (ಹಿ.ಸ.) : ಆ್ಯಂಕರ್ : ಅಸ್ಸಾಂನ ಗುವಾಹಟಿಯಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಹಾಗೂ ಚುನಾವಣಾ ಉಸ್ತುವಾರಿ ಡಿ.ಕೆ. ಶಿವಕುಮಾರ್, ಅಸ್ಸಾಂನಲ್ಲಿ ಬದಲಾವಣೆಗೆ ಜನರು ಕಾಂಗ್ರೆಸ್ ಪಕ್ಷದ ಬೆಂಬಲಕ್ಕೆ ನಿಲ್ಲುತ್ತಾರೆ ಎಂಬ ವಿಶ್ವಾಸ ವ್ಯ
Dks


ಗುವಾಹಟಿ, 02 ಮೇ (ಹಿ.ಸ.) :

ಆ್ಯಂಕರ್ : ಅಸ್ಸಾಂನ ಗುವಾಹಟಿಯಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಹಾಗೂ ಚುನಾವಣಾ ಉಸ್ತುವಾರಿ ಡಿ.ಕೆ. ಶಿವಕುಮಾರ್, ಅಸ್ಸಾಂನಲ್ಲಿ ಬದಲಾವಣೆಗೆ ಜನರು ಕಾಂಗ್ರೆಸ್ ಪಕ್ಷದ ಬೆಂಬಲಕ್ಕೆ ನಿಲ್ಲುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣೆಯ ಅವಧಿಯ ಪೂರ್ತಿ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಹಾಗೂ ಅಭ್ಯರ್ಥಿಗಳು ಅವಿಶ್ರಾಂತವಾಗಿ ಶ್ರಮಿಸಿ ಶ್ಲಾಘನೀಯ ಕಾರ್ಯ ಮಾಡಿದ್ದಾರೆ ಎಂದು ಅವರು ಹೇಳಿದರು. ಅಸ್ಸಾಂನ ಜನತೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವ ಮೂಲಕ ರಾಜ್ಯದಲ್ಲಿ ಬದಲಾವಣೆಗೆ ನಾಂದಿ ಹಾಡುತ್ತಾರೆ ಎಂಬ ನಂಬಿಕೆ ನಮಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಭೂಪೇಶ್ ಬಾಘೇಲ್, ಭನ್ವರ್ ಜಿತೇಂದ್ರ ಸಿಂಗ್, ಗೌರವ್ ಗೊಗೊಯ್ ಸೇರಿದಂತೆ ಹಲವಾರು ನಾಯಕರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande