ಮಹಿಳಾ ಮೀಸಲಾತಿ : ‘ವಿರೋಧವಿಲ್ಲ, ಆದರೆ ಬಿಲ್ ಚುನಾವಣಾ ಗಿಮಿಕ್’ – ವೀಣಾ ಕಾಶಪ್ಪನವರ್
ಬಾಗಲಕೋಟೆ, 02 ಮೇ (ಹಿ.ಸ.) : ಆಂಕರ್ : ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ನಿಲುವು ಸ್ಪಷ್ಟವಾಗಿದ್ದು, ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಯಲ್ಲ ಎಂದು ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ್ ತಿಳಿಸಿದ್ದಾರೆ. ಆದರೆ ಪ್ರಸ್ತುತ ತರಲಾಗಿರುವ ಮಹಿಳಾ ಮೀಸಲಾತಿ ಬಿಲ್ ಕೇವಲ ಚುನಾವಣಾ ಗಿಮಿಕ್ ಆಗಿ
ಮಹಿಳಾ ಮೀಸಲಾತಿ : ‘ವಿರೋಧವಿಲ್ಲ, ಆದರೆ ಬಿಲ್ ಚುನಾವಣಾ ಗಿಮಿಕ್’ – ವೀಣಾ ಕಾಶಪ್ಪನವರ್


ಬಾಗಲಕೋಟೆ, 02 ಮೇ (ಹಿ.ಸ.) :

ಆಂಕರ್ : ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ನಿಲುವು ಸ್ಪಷ್ಟವಾಗಿದ್ದು, ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಯಲ್ಲ ಎಂದು ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ್ ತಿಳಿಸಿದ್ದಾರೆ. ಆದರೆ ಪ್ರಸ್ತುತ ತರಲಾಗಿರುವ ಮಹಿಳಾ ಮೀಸಲಾತಿ ಬಿಲ್ ಕೇವಲ ಚುನಾವಣಾ ಗಿಮಿಕ್ ಆಗಿದೆ ಎಂದು ಅವರು ಟೀಕಿಸಿದರು.

ಬಾಗಲಕೋಟೆ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ರಾಜಕೀಯದಲ್ಲಿ ಸಮಾನ ಅವಕಾಶ ಕಲ್ಪಿಸುವುದು ಕಾಂಗ್ರೆಸ್ ಪಕ್ಷದ ಮೂಲ ಸಿದ್ಧಾಂತಗಳಲ್ಲಿ ಒಂದಾಗಿದೆ. ಆದರೆ ಕೇಂದ್ರ ಸರ್ಕಾರವು ಮಹಿಳಾ ಮೀಸಲಾತಿ ಬಿಲ್ಲನ್ನು ಜಾರಿಗೆ ತರಲು ತಡ ಮಾಡುತ್ತಿರುವುದು ಹಾಗೂ ಅದನ್ನು ಚುನಾವಣಾ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಹೇಳಿದರು.

ಮಹಿಳಾ ಸಬಲೀಕರಣಕ್ಕೆ ಕೇವಲ ಬಿಲ್ ತರಲಾಗುವುದು ಸಾಕಾಗುವುದಿಲ್ಲ. ಅದನ್ನು ತಕ್ಷಣ ಜಾರಿಗೆ ತರಲು ರಾಜಕೀಯ ಇಚ್ಛಾಶಕ್ತಿ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು. ಮಹಿಳೆಯರಿಗೆ ನಿಜವಾದ ನ್ಯಾಯ ದೊರಕಬೇಕಾದರೆ, ಮೀಸಲಾತಿಯನ್ನು ಪ್ರಾಮಾಣಿಕವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮಹಿಳಾ ಮೀಸಲಾತಿ ವಿಚಾರವನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ಮಹಿಳೆಯರ ಹಕ್ಕುಗಳ ಬಗ್ಗೆ ನಿಜವಾದ ಕಾಳಜಿ ಇದ್ದರೆ, ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮಹಿಳಾ ಘಟಕದ ಸದಸ್ಯರು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande